ಕಲಬುರಗಿ: ತಾಂತ್ರಿಕ ದೋಷದಿಂದ ಜಮೀನಿನಲ್ಲಿ ತರಬೇತಿ ನಿರತ ವಿಮಾನ ತುರ್ತು ಭೂಸ್ಪರ್ಶ

ಟೇಕಾಫ್​ ಆದ ನಂತರ ಇಂಜಿನ್​ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ನಿರತ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ.
ಪ್ರತ್ಯಕ್ಷ ದೃಶ್ಯ
ಪ್ರತ್ಯಕ್ಷ ದೃಶ್ಯ
Updated on

ಕಲಬುರಗಿ: ಟೇಕಾಫ್​ ಆದ ನಂತರ ಇಂಜಿನ್​ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ನಿರತ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ.

ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಪೇಟ್ ಸೀರೂರು ಗ್ರಾಮದ ಬಳಿ ವಿಮಾನ ಭೂಸ್ಪರ್ಶವಾಗಿದ್ದು ಕಲಬುರಗಿ ವಿಮಾನ ನಿಲ್ದಾಣದಿಂದ ಟೇಕಾಫ್ ಆಗಿ 15 ಕಿ.ಮೀ ಸಂಚರಿಸಿತ್ತು.

ಆದರೆ ಇಂಜಿನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಕೂಡಲೇ ಎಚ್ಚೆತ್ತ ಪೈಲೆಟ್, ಸೀರೂರ್ ಗ್ರಾಮದ ಜಮೀನಿನಲ್ಲಿ ವಿಮಾನವನ್ನು ಲ್ಯಾಂಡ್ ಮಾಡಿದ್ದಾರೆ. 

ಅದೃಷ್ಟವಶಾತ್​​ ಯಾವುದೇ ಅನಾಹುತ ಸಂಭವಿಸಿಲ್ಲ. ವಿಮಾನದಲ್ಲಿದ್ದ ಪೈಲಟ್ ಹಾಗೂ ತರಬೇತಿ ನಿತರ ಪೈಲಟ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com