ರಾಜ್ಯದಲ್ಲಿ ಮಳೆ ಕೊರತೆ: 77 ಅಡಿಗೆ ಕುಸಿದ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ

ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕೊರತೆಯಿಂದಾಗಿ ಕೃಷ್ಣರಾಜಸಾಗರ ಅಣೆಕಟ್ಟೆಯಲ್ಲಿ ಗರಿಷ್ಠ 124.80 ಅಡಿ ಇದ್ದ ನೀರಿನ ಮಟ್ಟ 77.68 ಅಡಿಗೆ ಕುಸಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೆಆರ್ ಎಸ್ ಜಲಾಶಯ(ಸಂಗ್ರಹ ಚಿತ್ರ)
ಕೆಆರ್ ಎಸ್ ಜಲಾಶಯ(ಸಂಗ್ರಹ ಚಿತ್ರ)

ಮಂಡ್ಯ: ರಾಜ್ಯದಲ್ಲಿ ಮುಂಗಾರು ಪ್ರವೇಶ ವಿಳಂಬವಾಗಿದ್ದು, ಕಡಿಮೆ ಮಳೆಯಿಂದಾಗಿ ನೀರಿನ ಕೊರತೆ ಸೃಷ್ಟಿಯಾಗುವ ಆತಂಕ ಎದುರಾಗಿದೆ. ಈ ಬೆನ್ನಲ್ಲೇ, ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕೊರತೆಯಿಂದಾಗಿ ಕೃಷ್ಣರಾಜಸಾಗರ ಅಣೆಕಟ್ಟೆಯಲ್ಲಿ ಗರಿಷ್ಠ 124.80 ಅಡಿ ಇದ್ದ ನೀರಿನ ಮಟ್ಟ 77.68 ಅಡಿಗೆ ಕುಸಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ವರ್ಷ ಇದೇ ಸಮಯದಲ್ಲಿ ನೀರಿನ ಮಟ್ಟ 106.60 ಅಡಿಯಷ್ಟಿತ್ತು. ಜಲಾಶಯಕ್ಕೆ 552 ಕ್ಯುಸೆಕ್ ನೀರು ಹರಿದು ಬರುತ್ತಿದೆ. ಹೀಗಾಗಿ, ನಾಲೆಗಳಿಗೆ ಹರಿಯುತ್ತಿದ್ದ ನೀರನ್ನು ಸ್ಥಗಿತಗೊಳಿಸಲಾಗಿದೆ. 571 ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ.

ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ಪ್ರಕಾರ, ಅಣೆಕಟ್ಟೆಯಲ್ಲಿ ನೀರಿನ ಸಂಗ್ರಹಣೆ 74 ಅಡಿಗಿಂತ ಕಡಿಮೆಯಾದರೆ ಕುಡಿಯುವ ನೀರಿನ ಅಗತ್ಯಕ್ಕೆ ಮಾತ್ರ ಬಳಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com