ನೂತನ ಶಾಸಕರಿಗೆ ಮೂರು ದಿನಗಳ ಕಾಲ ತರಬೇತಿ ಶಿಬಿರ

ರಾಜ್ಯದ 16ನೇ ವಿಧಾನಸಭೆಗೆ ನೂತನವಾಗಿ ಆಯ್ಕೆಯಾಗಿರುವ ಸದಸ್ಯರುಗಳಿಗೆ (Karnataka Legislative assembly) ಬೆಂಗಳೂರಿನ ನೆಲಮಂಗಲದ ಸಮೀಪ ಇರುವ ಧರ್ಮಸ್ಥಳದ ಕ್ಷೇಮವನದಲ್ಲಿ ಇಂದು ಜೂನ್ 26 ಸೋಮವಾರದಿಂದ 28ರ ವರೆಗೆ ಮೂರು ದಿನಗಳ ಕಾಲ ತರಬೇತಿ ಶಿಬಿರ ಆಯೋಜಿಸಲಾಗಿದೆ.
ವಿಧಾನ ಸೌಧ
ವಿಧಾನ ಸೌಧ
Updated on

ಬೆಂಗಳೂರು: ರಾಜ್ಯದ 16ನೇ ವಿಧಾನಸಭೆಗೆ ನೂತನವಾಗಿ ಆಯ್ಕೆಯಾಗಿರುವ ಸದಸ್ಯರುಗಳಿಗೆ ಬೆಂಗಳೂರಿನ ನೆಲಮಂಗಲದ ಸಮೀಪ ಇರುವ ಧರ್ಮಸ್ಥಳದ ಕ್ಷೇಮವನದಲ್ಲಿ ಇಂದು ಜೂನ್ 26 ಸೋಮವಾರದಿಂದ 28ರ ವರೆಗೆ ಮೂರು ದಿನಗಳ ಕಾಲ ತರಬೇತಿ ಶಿಬಿರ ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ಮಧ್ಯಾಹ್ನ 12 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕಾನೂನು ಸಚಿವ ಎಚ್.ಕೆ. ಪಾಟೀಲ್ ಪಾಲ್ಗೊಳ್ಳಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಇಂಧನ ಸಚಿವ ಕೆ.ಜೆ.ಜಾರ್ಜ್, ವಸತಿ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಬಿ ಝಡ್ ಜಮೀರ್ ಅಹ್ಮದ್ ಖಾನ್ ಭಾಗಿಯಾಗಲಿದ್ದಾರೆ.

ಈ ಬಾರಿ ವಿಧಾನಸಭೆಗೆ ಮೊದಲ ಬಾರಿ ಆಯ್ಕೆಯಾಗಿರುವ ಸುಮಾರು 70 ಶಾಸಕರು ತರಬೇತಿ ಪಡೆಯಲಿದ್ದಾರೆ. ನಿನ್ನೆ ಸಂಜೆ ಕ್ಷೇಮವನದಲ್ಲಿ ನೂತನ ಶಾಸಕರು ಆಗಮಿಸಿ ನೋಂದಣಿ ಮಾಡಿಕೊಂಡಿದ್ದಾರೆ.

ಇಂದಿನಿಂದ ಮೂರು ದಿನಗಳ ಕಾಲ ಬೆಳಗ್ಗೆ 6ರಿಂದ ಬೆಳಗ್ಗೆ 9ರವರೆಗೆ ಆರೋಗ್ಯಕ್ಕೆ ಸಂಬಂಧಿಸಿದ ಚಟುವಟಿಕೆಗಳು ನಡೆಯಲಿವೆ. ಬೆಳಗ್ಗೆ 10 ರಿಂದ ಸಂಜೆಯವರೆಗೆ ಹಿರಿಯ ಸದಸ್ಯರು ಶಿಬಿರದಲ್ಲಿ ವಿವಿಧ ವಿಷಯಗಳ ಕುರಿತು ಹಾಗೂ ತಮ್ಮ ರಾಜಕೀಯ ಅನುಭವಗಳ ಕುರಿತು ಮಾಹಿತಿ ನೀಡಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com