ವಿಜಯನಗರ: ಹಿಟ್ ಆ್ಯಂಡ್ ರನ್​ಗೆ ಇಬ್ಬರು ರೈತರು ಬಲಿ

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ ಮಂಗಳವಾರ  ಹಿಟ್ ಆ್ಯಂಡ್ ರನ್​ಗೆ ಇಬ್ಬರು ರೈತರು ಬಲಿಯಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ವಿಜಯನಗರ: ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ ಮಂಗಳವಾರ  ಹಿಟ್ ಆ್ಯಂಡ್ ರನ್​ಗೆ ಇಬ್ಬರು ರೈತರು ಬಲಿಯಾಗಿದ್ದಾರೆ.

ಮೃತ ರೈತರನ್ನು ಟೀಕ್ಯಾ ನಾಯ್ಕ್(51) ಮತ್ತು ನೀಲ್ಯಾ ನಾಯ್ಕ್(55) ಎಂದು ಗುರುತಿಸಲಾಗಿದೆ. ಇಬ್ಬರೂ ರೈತರು ಕೋಗಳಿ ತಾಂಡಾ ನಿವಾಸಿಗಳಾಗಿದ್ದು, ದ್ವಿಚಕ್ರ ವಾಹನದಲ್ಲಿ ಜಮೀನಿಗೆ ಹೋಗುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ನಂತರ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಪ್ರಕರಣದ ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಕುರಿತು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ವಿಜಯನಗರ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು ಅವರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com