ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ದಕ್ಷಿಣ ಕನ್ನಡ, ಕೊಡಗಿನಲ್ಲಿ ಎನ್​ಐಎ ದಾಳಿ, ತೀವ್ರ ಶೋಧ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು (Praveen Nettar) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಕೊಡಗು ಜಿಲ್ಲೆಯಲ್ಲಿರುವ ನಿಷೇಧಿತ ಪಿಎಫ್​ಐ (PFI) ಸಂಘಟನೆ ಕಾರ್ಯಕರ್ತರ ಮನೆಗಳ ಮೇಲೆ ಎನ್​ಐಎ (NIA) ಅಧಿಕಾರಿಗಳು ದಾಳಿ ನಡೆಸಿದ್ದಾರೆ. 
ಎನ್ಐಎ
ಎನ್ಐಎ

ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು (Praveen Nettar) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಕೊಡಗು ಜಿಲ್ಲೆಯಲ್ಲಿರುವ ನಿಷೇಧಿತ ಪಿಎಫ್​ಐ (PFI) ಸಂಘಟನೆ ಕಾರ್ಯಕರ್ತರ ಮನೆಗಳ ಮೇಲೆ ಎನ್​ಐಎ (NIA) ಅಧಿಕಾರಿಗಳು ದಾಳಿ ನಡೆಸಿದ್ದಾರೆ. 

ಇಂದು ಬೆಳಗ್ಗೆ ಏಕಕಾಲಕ್ಕೆ 6 ಕಡೆಗಳಲ್ಲಿ ದಾಳಿ ನಡೆಸಿರುವ ಎನ್​ಐಎ ಅಧಿಕಾರಿಗಳು, ಎಲೆಕ್ಟ್ರಾನಿಕ್ ಡಿವೈಸ್​​ಗಳು ಸೇರಿದಂತೆ ಮಹತ್ವದ ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ. ಈ ಬಗ್ಗೆ ಕೊಡಗು ಎಸ್​ಪಿ ರಾಮರಾಜನ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, 'ನಿಷೇಧಿತ ಸಂಘಟನೆ ಪಿಎಫ್​ಐನಲ್ಲಿ ಭಾಗಿಯಾಗಿದ್ದ ಕಾರ್ಯಕರ್ತರನ್ನು ವಿಚಾರಣೆ ನಡೆಸಲಾಗುತ್ತಿದೆ. ಸೋಮವಾರಪೇಟೆಯಲ್ಲಿ ಹಲವು ಕಾರ್ಯಕರ್ತರನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು ಅಂದಿನ ಬಿಜೆಪಿ ಸರ್ಕಾರ ಎನ್ಐಎಗೆ ವಹಿಸಿತ್ತು. ಅದರಂತೆ ತನಿಖೆ ನಡೆಸುತ್ತಿರುವ ಅಧಿಕಾರಿಗಳು ಈಗಾಗಲೇ ಸಾಕಷ್ಟು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಹಲವು ಬಾರಿ ದಾಳಿಗಳನ್ನು ನಡೆಸಿ ಮಹತ್ವದ ದಾಖಲೆಗಳನ್ನು ವಶ ಪಡಿಸಿಕೊಂಡಿದ್ದಾರೆ. ತನಿಖೆಯ ಭಾಗವಾಗಿ ಪಿಎಫ್ ಐ ಕಾರ್ಯಕರ್ತರು ಮತ್ತು ಮುಖಂಡ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com