ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ
ರಾಜ್ಯ
ಸಿದ್ದರಾಮಯ್ಯರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ರೋಜರ್ ಬಿನ್ನಿ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು.
ಬೆಂಗಳೂರು: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ರೋಜರ್ ಬಿನ್ನಿ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು.
ಮುಖ್ಯಮಂತ್ರಿ ಕಚೇರಿ (ಸಿಎಂಒ) ಪ್ರಕಾರ, ಬಿನ್ನಿ ಮತ್ತು ಕೆಎಸ್‌ಸಿಎ ಮಾಜಿ ಖಜಾಂಚಿ ವಿನಯ್ ಮೃತ್ಯುಂಜಯ ಅವರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿದ್ದಕ್ಕೆ ಅಭಿನಂದನೆ ಸಲ್ಲಿಸಿದರು.
ತಮ್ಮೆಲ್ಲ ಕೆಲಸದ ಒತ್ತಡಗಳ ನಡುವೆಯೇ ಸಿಎಂ ಸಿದ್ದರಾಮಯ್ಯ ಅವರು ರೋಜರ್ ಬಿನ್ನಿ ಹಾಗೂ ಇತರರ ಜೊತೆ ಸಮಯ ಕಳೆದಿದ್ದು, ಚರ್ಚೆ ನಡೆಸಿದ್ದಾರೆ.
ಭಾರತ ತಂಡದ ಮಾಜಿ ಕ್ರಿಕೆಟಿಗ ಹಾಗೂ 1983ರ ವಿಶ್ವಕಪ್ ವಿಜೇತ ತಂಡದ ಸದಸ್ಯರಾಗಿದ್ದ ರೋಜರ್ ಬಿನ್ನಿ ಹಾಗೂ ಸಿದ್ದರಾಮಯ್ಯ ಭೇಟಿ ಫೊಟೋಗಳು ಇದೀಗ ವೈರಲ್ ಆಗಿವೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ