ರಾಹುಲ್‌ ಗಾಂಧಿ ವಿರುದ್ಧ ಟ್ವೀಟ್‌: ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಎಫ್‌ಐಆರ್‌

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಟ್ವೀಟ್ ಮಾಡಿದ್ದಕ್ಕಾಗಿ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.
ಅಮಿತ್ ಮಾಳವಿಯಾ
ಅಮಿತ್ ಮಾಳವಿಯಾ
Updated on

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಟ್ವೀಟ್ ಮಾಡಿದ್ದಕ್ಕಾಗಿ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಕಾಂಗ್ರೆಸ್ ಮುಖಂಡ ರಮೇಶ್ ಬಾಬು ನೀಡಿದ ದೂರಿನ ಮೇರೆಗೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 153A, 120b, 505(2), 34 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಕೆಪಿಸಿಸಿ ವಕ್ತಾರ ರಮೇಶ್‌ ಬಾಬು ಹಾಗೂ ಸಚಿವ ಪ್ರಿಯಾಂಕ್‌ ಖರ್ಗೆ ಅಮಿತ್‌ ಮಾಳವೀಯಾ ವಿರುದ್ಧ ದೂರು ನೀಡಿದ್ದರು.
ಕಾಂಗ್ರೆಸ್ ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದೆ ಎಂದು ಆರೋಪಿಸಿ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರ ಅನಿಮೇಟೆಡ್ ವಿಡಿಯೋವನ್ನು ಅಮಿತ್‌ ಮಾಳವೀಯ ಬಿಡುಗಡೆ ಮಾಡಿದ್ದರು. ಈ ಹಿನ್ನೆಲೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಳವೀಯ ಹಾಗೂ ಚಂಡೀಗಢ ಬಿಜೆಪಿ ರಾಜ್ಯಾಧ್ಯಕ್ಷ ಅರುಣ್‌ ಸೂದ್‌ ವಿರುದ್ಧವೂ ದೂರು ದಾಖಲಾಗಿತ್ತು.

ಜೂನ್ 17ರಂದು ಅಮಿತ್ ಮಾಳವಿಯಾ ತಮ್ಮ ಅಧಿಕೃತ ಟ್ವಿಟರ್‌ ಖಾತೆಯಿಂದ ಅನಿಮೇಟೆಡ್ ವಿಡಿಯೋವನ್ನು ಪೋಸ್ಟ್ ಮಾಡಿದ್ದರು. ಆ ವಿಡಿಯೋದಲ್ಲಿ ಕಾಂಗ್ರೆಸ್ ಪಕ್ಷ ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದೆ. ರಾಹುಲ್ ಗಾಂಧಿ ವಿದೇಶಕ್ಕೆ ಹೋದಾಗಲೆಲ್ಲಾ ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗುತ್ತಾರೆ ಎಂದು ಹೇಳಲಾಗಿತ್ತು. ಇದು ಕಾಂಗ್ರೆಸ್‌ ನಾಯಕರನ್ನು ಕೆರಳಿಸಿದ್ದು, ಬಿಜೆಪಿ ನಾಯಕರ ವಿರುದ್ಧ ಜೂನ್ 19ರಂದು ಕಾಂಗ್ರೆಸ್ ನಾಯಕರು ದೂರು ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com