ಮೈಸೂರು ಎಕ್ಸ್​ಪ್ರೆಸ್​​ ವೇನಲ್ಲಿ ಸೂಚನಾ ಫಲಕ, ಕ್ಯಾಮರಾ ಅಳವಡಿಕೆ ಅಗತ್ಯವಿದೆ: ಎಡಿಜಿಪಿ ಅಲೋಕ್ ಕುಮಾರ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಡಿಜಿಪಿ (ಸಂಚಾರ ಮತ್ತು ರಸ್ತೆ ಸುರಕ್ಷತೆ) ಅಲೋಕ್ ಕುಮಾರ್ ಅವರು, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ)ದ ಅಧಿಕಾರಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ಹೆದ್ದಾರಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಪರಿಶೀಲನೆ ನಡೆಸುತ್ತಿರುವ ಎಡಿಜಿಪಿ ಅಲೋಕ್ ಕುಮಾರ್.
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಪರಿಶೀಲನೆ ನಡೆಸುತ್ತಿರುವ ಎಡಿಜಿಪಿ ಅಲೋಕ್ ಕುಮಾರ್.

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಡಿಜಿಪಿ (ಸಂಚಾರ ಮತ್ತು ರಸ್ತೆ ಸುರಕ್ಷತೆ) ಅಲೋಕ್ ಕುಮಾರ್ ಅವರು, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ)ದ ಅಧಿಕಾರಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ಹೆದ್ದಾರಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ರಾಮನಗರ ಜಿಲ್ಲಾ ಪೊಲೀಸ್ ವ್ಯಾಪ್ತಿಗೆ ಬರುವ 55 ಕಿಲೋಮೀಟರ್ ವ್ಯಾಪ್ತಿಯನ್ನು ಅಲೋಕ್ ಕುಮಾರ್ ಅವರು ಪರಿಶೀಲನೆ ನಡೆಸಿದರು. ಈ ವೇಳೆ ಅನೇಕ ಸ್ಥಳಗಳಲ್ಲಿ ಸೂಚನ್ ಫಲಕಗಳಿರುವುದುಕಂಡು ಬಂದಿತು. ಈ ವೇಳ ಈ ಸಂಬಂಧ ಅಗತ್ಯ ಕ್ರಮಗಳ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಲ್ಲದೆ, ಕೆಲವು ಕಡೆಗಳಲ್ಲಿ ಸ್ಕೈವಾಕ್ ಗಳ ಅವಶ್ಯಕತೆಯಿದ್ದು, ಈ ಬಗ್ಗೆಯೂ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಪರಿಶೀಲನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟೋಲ್ ಪ್ಲಾಜಾಗಳ ಬಳಿ ರಸ್ತೆ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ ಹೆದ್ದಾರಿ ಗಸ್ತು ಹೆಚ್ಚಿಸುವಂತೆ ಸೂಚಿಸಲಾಗಿದೆ. ಇದಲ್ಲದೆ, ಹೆದ್ದಾರಿ ಪ್ರವೇಶ ಮಾರ್ಗದಲ್ಲಿ ಚಾಲಕರು ಮದ್ಯಪಾನ ಮಾಡಿ ವಾಹನ ಚಲಾಯಿಸುವುದನ್ನು ಯಾದೃಚ್ಛಿಕವಾಗಿ ಪರಿಶೀಲಿಸಲಾಗುವುದು ಎಂದು ಹೇಳಿದರು.

“ಸ್ವಯಂಚಾಲಿತ ನಂಬರ್ ಪ್ಲೇಟ್ ರೆಕಗ್ನಿಷನ್ (ANPR) ಕ್ಯಾಮೆರಾಗಳು, ರಾಡಾರ್ ಸ್ಪೀಡ್ ಗನ್‌ಗಳು ಮತ್ತು ಬ್ಲಿಂಕರ್‌ಗಳನ್ನು ಹೆದ್ದಾರಿಯಲ್ಲಿ ಅಳವಡಿಸುವುದು ಅಗತ್ಯವಿದೆ. ಟೆಂಡರ್ ಪ್ರಕ್ರಿಯೆಯ ಮೂಲಕ ಇದನ್ನು ಮಾಡಬೇಕಾಗಿರುವುದರಿಂದ ಇದಕ್ಕೆ ಸಮಯದ ಅಗತ್ಯವಿರುತ್ತದೆ. ಶೀಘ್ರಗತಿಯಲ್ಲಿ ಅವುಗಳನ್ನು ಅಳವಡಿಸಲು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಮುಂದಿನ ದಿನಗಳಲ್ಲಿ ಅತಿವೇಗ ಮತ್ತು ಲೇನ್ ಶಿಸ್ತು ಮುರಿಯುವಂತಹ ಉಲ್ಲಂಘನೆಗಳಿಗೆ ಸಂಪರ್ಕ ರಹಿತ ಜಾರಿ ಮಾಡಲಾಗುವುದು ಮತ್ತು ಪುನರಾವರ್ತಿತ ಉಲ್ಲಂಘಿಸುವವರಿಗೆ ಚಾಲನಾ ಪರವಾನಗಿಯನ್ನು ವಶಪಡಿಸಿಕೊಳ್ಳುವಂತಹ ಕ್ರಮಗಳನ್ನು ಶಿಫಾರಸು ಮಾಡಲಾಗಿದೆ ಎಂದು ಅವರು ಹೇಳಿದರು.

ಈಗಾಗಲೇ ನಾಲ್ಕು ಹೈವೇ ಪಟ್ರೊಲಿಂಗ್ ವಾಹನಗಳಲ್ಲಿ ಗಸ್ತು ಮಾಡಲಾಗುತ್ತಿದೆ. ಹೈ ಸ್ಪೀಡ್ ಲಿಮಿಟ್ ತಡೆಗೆ ಸ್ಪೀಡ್ ರೆಡಾರ್ ಅಳವಡಿಕೆ ಮಾಡುತ್ತೇವೆ. ಯಾರಾದರೂ ಸಂಚಾರಿ ನಿಯಮ ಉಲ್ಲಂಘನೆ ಮಾಡಿದರೆ ಡಿಎಲ್ ರದ್ದು ಮಾಡುತ್ತೇವೆ. ಡ್ರೈವಿಂಗ್ ವೇಳೆ ಮೊಬೈಲ್ ಬಳಕೆ, ಮದ್ಯಪಾನ ಮಾಡಿ ವಾಹನ ಚಲಾಯಿಸಿದರೆ ಹಾಗೂ ಮಿತಿ ಮೀರಿ ವಾಹನ ಚಾಲನೆ ಮಾಡಿದರೆ ಕೇಸ್ ಹಾಕುವ ಕೆಲಸ ಮಾಡುತ್ತೇವೆ. ಸದ್ಯ ಕನಿಷ್ಠ ಶೇ.25ರಷ್ಟು ಅಪಘಾತ ಕಡಿಮೆ ಮಾಡುವ ಗುರಿ ಇದೆ. ಈ ಬಗ್ಗೆ ಹೆದ್ದಾರಿ ಪ್ರಾಧಿಕಾರಕ್ಕೆ ಸಲಹೆ, ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

ಈ ನಡುವೆ ಮಂಡ್ಯ ಪೊಲೀಸ್ ವ್ಯಾಪ್ತಿಗೆ ಬರುವ ಹೆದ್ದಾರಿಯನ್ಪು ಜೂನ್ 30 ರಂದು ಅಲೋಕ್ ಕುಮಾರ್ ಅವರು ಪರಿಶೀಲನೆ ನಡೆಸಲಿದ್ದಾರೆಂದು ವರದಿಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com