ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣವನ್ನು ಮರು ತನಿಖೆ ನಡೆಸಲಾಗುವುದು: ಆರೋಗ್ಯ ಸಚಿವ

ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ 36 ಜನರ ಸಾವಿಗೆ ಕಾರಣವಾದ 2021 ರ ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣವನ್ನು ಮರು ತನಿಖೆ ನಡೆಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಮಂಗಳವಾರ ಹೇಳಿದರು.
ಮೈಸೂರಿನ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳೊಂದಿಗೆ ಮಾತುಕತೆ ನಡೆಸುತ್ತಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್.
ಮೈಸೂರಿನ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳೊಂದಿಗೆ ಮಾತುಕತೆ ನಡೆಸುತ್ತಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್.

ಮೈಸೂರು: ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ 36 ಜನರ ಸಾವಿಗೆ ಕಾರಣವಾದ 2021 ರ ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣವನ್ನು ಮರು ತನಿಖೆ ನಡೆಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಮಂಗಳವಾರ ಹೇಳಿದರು.

ಮೈಸೂರಿನ ಕೆಆರ್.ಆಸ್ಪತ್ರೆಗೆ ಭೇಟಿ ನೀಡಿ, ಆಸ್ಪತ್ರೆಯ ಟೆಲಿ ಐಸಿಯು ಹಬ್ ವಿಭಾಗ ವೀಕ್ಷಣೆ ಮಾಡಿದ ಬಳಿಕ ಸಚಿವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಯಾವ ಅಂಶಗಳ ಆಧಾರದ ಮೇಲೆ ಮರು ತನಿಖೆಯಾಗಬೇಕು ಎಂಬ ಚಾರ್ಚ್ ಫ್ರೇಮ್ ಮಾಡಿಕೊಡಿ ಎಂದು ಸರ್ಕಾರದಿಂದ ಮತ್ತೆ ಪತ್ರ ಬಂದಿದೆ. ಈಗ ನಾವು ತನಿಖೆಯಾಗಬೇಕಿರುವ ಚಾರ್ಚ್ ಫ್ರೇಮ್ ಅನ್ನು ಸಿದ್ಧ ಮಾಡುತ್ತಿದ್ದೇವೆಂದು ಹೇಳಿದರು.

ಕೊರೋನಾ ಸಮಯದಲ್ಲಿ ರಾಜ್ಯದಲ್ಲಿ ಸಂಭವಿಸಿದ ದೊಡ್ಡ ದುರಂತ ಚಾಮರಾಜನಗರ ಆಕ್ಸಿಜನ್ ದುರಂತ ವಿಚಾರಕ್ಕೆ ಸಂಬಂಧಿಸಿದಂತೆ ಚಾರ್ಚ್ ಫ್ರೇಮ್ ಪ್ರತಿಯನ್ನು ಶೀಘ್ರದಲ್ಲೇ ಸರ್ಕಾರಕ್ಕೆ ಕಳುಹಿಸುತ್ತೇವೆ. ಈ ಬಗ್ಗೆ ಸರ್ಕಾರ ನಂತರ ತೀರ್ಮಾನ ಕೈಗೊಳ್ಳುತ್ತದೆ. ಆದರೆ ಕಾಲ ಮಿತಿಯೊಳಗಡೆ ಈ ಬಗ್ಗೆ ಮರು ತನಿಖೆಯಾಗಬೇಕೆಂಬುದು ನಮ್ಮ ಉದ್ದೇಶ ಎಂದು ತಿಳಿಸಿದರು.

ಆರೋಗ್ಯ ಇಲಾಖೆಯಲ್ಲಿನ ಅರೆಕಾಲಿಕ ವೈದ್ಯರು, ಖಾಸಗಿ ನರ್ಸಿಂಗ್ ಹೋಂಗಳಲ್ಲಿ ಕೆಲಸ ಮಾಡುವುದಕ್ಕೆ ನಿರ್ಬಂಧ ಹೇರಲು ನಡೆಸಲಾಗುತ್ತಿರುವ ಚಿಂತನೆ ಕುರಿತು ಮಾತನಾಡಿ, ಈ ಹಿಂದೆ ವೈದ್ಯರ ಕೊರತೆ ಇದ್ದ ಕಾರಣ ಎರಡು ಕಡೆಗಳಲ್ಲಿ ಕೆಲಸ ಮಾಡಲು ಅವಕಾಶ ಮಾಡಿ ಕೊಡಲಾಗಿತ್ತು. ಈಗ ಅಂತಹ ಸಮಸ್ಯೆಗಳಿಲ್ಲ. ಹೀಗಾಗಿ ಸರ್ಕಾರದ ವ್ಯಾಪ್ತಿಯಲ್ಲಿ ಕೆಲಸ ಮಾಡಲು ಆದೇಶಿಸುವ ಬಗ್ಗೆ ಚಿಂತನೆ ನಡೆಸಿದ್ದೇವೆ ಎಂದರು.

ಇದೇ ವೇಳೆ ಕಾಂಗ್ರೆಸ್ ಪಕ್ಷದಿಂದ ಬಂದವರಿಂದ ಬಿಜೆಪಿಯ ಶಿಸ್ತು ಕೆಟ್ಟಿದೆ ಎನ್ನುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್‌ನಿಂದ ಬಂದ ಶಾಸಕರಿಂದ ಸರ್ಕಾರ ಮಾಡಿ ಶೇ.40, 50ಕಮಿಷನ್ ಹೊಡೆದು ಈಗ ಈ ಮಾತು ಆಡಿದರೆ ಅವರನ್ನು ಯಾರು ನಂಬುತ್ತಾರೆ ಎಂದು ಬಿಜೆಪಿ ನಾಯಕರ ವಿರುದ್ಧ ವ್ಯಂಗ್ಯವಾಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com