ಮಂಗಳೂರಿನಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ

ದಕ್ಷಿಣ ಕನ್ನಡ ಜಿಲ್ಲೆಯ ಉಬರಡ್ಕದ ಗುಡ್ಡದ ತುದಿಯಲ್ಲಿ ಯುವಕನೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಬರಡ್ಕದ ಗುಡ್ಡದ ತುದಿಯಲ್ಲಿ ಯುವಕನೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮೃತನನ್ನು ಉಬರಡ್ಕದ ಬೆಳ್ರಂಪಾಡಿಯ ಮನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ರವಿ ಎಂದು ಗುರುತಿಸಲಾಗಿದೆ.

ರವಿ ಮಂಗಳವಾರ ರಾತ್ರಿ ಬೆಳ್ರಂಪಾಡಿಯ ಗುಡ್ಡದ ಮೇಲೆ ಹೋಗಿ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ.

ರಾತ್ರಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸುಳ್ಯ ಪೊಲೀಸ್ ಸಿಬ್ಬಂದಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಪ್ರಾಥಮಿಕ ತನಿಖೆಯು ಇದು ಆತ್ಮಹತ್ಯೆ ಎಂದು ಸೂಚಿಸಿದ್ದು, ಇದಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com