ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಜುಲೈನಿಂದ ಬೈಕ್, ಆಟೋ ಸಂಚಾರಕ್ಕೆ ನಿಷೇಧ!

ಜುಲೈ ತಿಂಗಳ ಮಧ್ಯದಿಂದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ನಲ್ಲಿ ದ್ವಿಚಕ್ರ ವಾಹನ ಮತ್ತು ತ್ರಿಚಕ್ರ ವಾಹನಗಳು, ಹಾಗೂ ಟ್ರ್ಯಾಕ್ಟರ್‌ಗಳಂತಹ ಕೃಷಿ ವಾಹನಗಳು ಮತ್ತು ಸೈಕಲ್‌ಗಳನ್ನು ಪ್ರವೇಶಿಸಲು ಅನುಮತಿಸಲಾಗುವುದಿಲ್ಲ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಜುಲೈ ತಿಂಗಳ ಮಧ್ಯದಿಂದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ನಲ್ಲಿ ದ್ವಿಚಕ್ರ ವಾಹನ ಮತ್ತು ತ್ರಿಚಕ್ರ ವಾಹನಗಳು, ಹಾಗೂ ಟ್ರ್ಯಾಕ್ಟರ್‌ಗಳಂತಹ ಕೃಷಿ ವಾಹನಗಳು ಮತ್ತು ಸೈಕಲ್‌ಗಳನ್ನು ಪ್ರವೇಶಿಸಲು ಅನುಮತಿಸಲಾಗುವುದಿಲ್ಲ.

ಮುಂದಿನ 10-15 ದಿನಗಳಲ್ಲಿ ಈ ನಿಯಮ ಜಾರಿಯಾಗಲಿದೆ, ಈ ಸಂಬಂಧಗ್ಗೆ ಅಧಿಕೃತ ಅಧಿಸೂಚನೆಗಾಗಿ ಕಾಯುತ್ತಿದ್ದೇವೆ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್  ಗೆ ತಿಳಿಸಿದ್ದಾರೆ.

ಕೇವಲ 90 ನಿಮಿಷಗಳಲ್ಲಿ ಬೆಂಗಳೂರಿನಿಂದ ಮೈಸೂರಿಗೆ ತಲುಪಲು ಪ್ರಯಾಣಿಕರಿಗೆ ಸಹಾಯ ಮಾಡುವ 119-ಕಿಮೀ ಹೈವೇ ಮಾರ್ಚ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಅಧಿಕೃತವಾಗಿ ಉದ್ಘಾಟನೆಯಾಯಿತು. ಅಂದಿನಿಂದ ಒಂದಲ್ಲ ಒಂದು ಕಾರಣಕ್ಕಾಗಿ ಸುದ್ದಿಯಲ್ಲಿದೆ. ಕಳೆದ ಅಕ್ಟೋಬರ್‌ನಲ್ಲಿ ಸಂಚಾರಕ್ಕೆ ತೆರೆಯಲಾದ 6-10 ಲೇನ್ ಎಕ್ಸ ಪ್ರೇಸ್ ವೇಯಲ್ಲಿ 150 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ.

ಎಕ್ಸ್ ಪ್ರೆಸ್ ಹೆದ್ದಾರಿ ಸಂಚಾರಕ್ಕೆ ತೆರೆದಾಗಿನಿಂದ, ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳನ್ನು ನಿಷೇಧಿಸಲು ಚರ್ಚೆಗಳು ನಡೆಯುತ್ತಿವೆ, ಏಕೆಂದರೆ ಅವು ಗಂಟೆಗೆ 120 ಕಿಮೀ ವೇಗದಲ್ಲಿ ಚಲಿಸಲು ಅನುಮತಿಸಲಾದ ವಾಹನಗಳಿಗೆ ಅಪಾಯವನ್ನುಂಟುಮಾಡುತ್ತವೆ ಎಂದು ಹೇಳಲಾಗಿದೆ. ಈ ಹಿಂದೆ, ಸೂಪರ್‌ಬೈಕ್‌ಗಳನ್ನು ಅನುಮತಿಸುವ ಯೋಜನೆ ಇತ್ತು, ಆದಾಗ್ಯೂ, ಹೆಚ್ಚಿನವರು ಲೇನ್ ಶಿಸ್ತನ್ನು ಅನುಸರಿಸುವುದಿಲ್ಲ ಮತ್ತು ನಿಷೇಧಿತ ಹೆಚ್ಚಿನ ವೇಗದಲ್ಲಿ ಪ್ರಯಾಣಿಸುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದರಿಂದ ಅವುಗಳನ್ನು ಸಹ ನಿಷೇಧಿಸಲಾಗುವುದು ಎಂದು ಹೇಳಲಾಗಿದೆ.

ದೆಹಲಿ-ಮೀರತ್ ಮತ್ತು ದೆಹಲಿ-ವಡೋದರಾ ಎಕ್ಸ್‌ಪ್ರೆಸ್‌ವೇಗಳ ಮಾರ್ಗದಲ್ಲಿ, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳನ್ನು ನಿಷೇಧಿಸಲಾಗುವುದು. ಸೂಚನೆ ನೀಡಿದ ನಂತರ, ನಿಷೇಧವನ್ನು ತಕ್ಷಣವೇ ಜಾರಿಗೊಳಿಸಲಾಗುವುದು ಎಂದು ಬೆಂಗಳೂರಿನ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ವಿವೇಕ್ ಜೈಸ್ವಾಲ್ ಹೇಳಿದರು. ಮೇಲಿನ ಎಲ್ಲಾ ಪ್ರಕ್ರಿಯೆಗಳು 10-15 ದಿನಗಳ ಅವಧಿಯಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com