ಮಾನಸಿಕ ಅಸ್ವಸ್ಥ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಮೇಸ್ತ್ರಿಯನ್ನು ಬಂಧಿಸಿದ ಪೊಲೀಸರು

ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀಗಂಧಕಾವಲು ಡಿ ಗ್ರೂಪ್ ಲೇಔಟ್‌ನಲ್ಲಿ ಮಾನಸಿಕ ಅಸ್ವಸ್ಥ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ 28 ವರ್ಷದ ಮೇಸ್ತ್ರಿಯನ್ನು ಬಂಧಿಸಲಾಗಿದೆ.
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ

ಬೆಂಗಳೂರು: ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀಗಂಧಕಾವಲು ಡಿ ಗ್ರೂಪ್ ಲೇಔಟ್‌ನಲ್ಲಿ ಮಾನಸಿಕ ಅಸ್ವಸ್ಥ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ 28 ವರ್ಷದ ಮೇಸ್ತ್ರಿಯನ್ನು ಬಂಧಿಸಲಾಗಿದೆ.

ಬೆಳಗ್ಗೆ 9 ಗಂಟೆಗೆ ಕೆಲಸಕ್ಕೆ ತೆರಳುವ ಮುನ್ನ ಸಂತ್ರಸ್ತೆಯನ್ನು ಆಕೆಯ ತಾಯಿ ಮನೆಯಲ್ಲಿ ಒಂಟಿಯಾಗಿ ಬಿಡುತ್ತಿದ್ದರು. ಈ ಘಟನೆ ಜೂನ್ 22 ರಂದು ಸಂಭವಿಸಿದೆ ಎಂದು ವರದಿಯಾಗಿದೆ. 

ಸಮೀಪದ ನಿರ್ಮಾಣ ಸ್ಥಳದಲ್ಲಿ ಕೆಲಸ ಮಾಡುವ ಆರೋಪಿ, ತಾಯಿ ಇಲ್ಲದಿದ್ದಾಗ 18 ವರ್ಷದ ಸಂತ್ರಸ್ತೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಬಳಿಕ ಮನೆಗೆ ಮರಳಿದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ಪೊಲೀಸರು ಆರೋಪಿಯನ್ನು ತಮಿಳುನಾಡು ಮೂಲದ ಇಬ್ರಾಹಿಂ ಎಂದು ಗುರುತಿಸಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಸಂತ್ರಸ್ತೆಯ 38 ವರ್ಷದ ತಾಯಿ ಮನೆಯ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪ್ರತಿದಿನ ಗಂಟೆಗೊಮ್ಮೆ ತನ್ನ ಮಗಳನ್ನು ಪರಿಕ್ಷಿಸಲು ಮನೆಗೆ ಹಿಂತಿರುಗುತ್ತಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಜೂ. 22ರಂದು ಮಧ್ಯಾಹ್ನ 12.30ಕ್ಕೆ ಮನೆಗೆ ಮರಳಿದ ತಾಯಿ ಮಗಳು ನೆಲದ ಮೇಲೆ ಬಿದ್ದಿರುವುದನ್ನು ಕಂಡಿದ್ದಾರೆ. ಆಕೆಯ ಮುಖದ ಮೇಲೆ ಗಾಯಗಳಿದ್ದವು ಮತ್ತು ಆಕೆಗೆ ಏನಾಯಿತು ಎಂಬುದನ್ನು ವಿವರಿಸಲು ಆಕೆ ಅಸಮರ್ಥಳಾಗಿದ್ದಳು ಎಂದು ವರದಿಯಾಗಿದೆ. 

ನಂತರ ದೂರುದಾರರು ಪಕ್ಕದ ಕಟ್ಟಡದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದು, ಆರೋಪಿಯು ಕಾಂಪೌಂಡ್ ಗೋಡೆ ಹಾರಿರುವುದು ಮತ್ತು ಸಂತ್ರಸ್ತೆಯನ್ನು ಆಕೆಯ ಮನೆಯೊಳಗೆ ಕರೆದುಕೊಂಡು ಹೋಗುತ್ತಿರುವುದು ಕಂಡುಬಂದಿದೆ.

ಬೆಳಗ್ಗೆ 11.42ರಿಂದ ಸುಮಾರು 10 ನಿಮಿಷಗಳ ಕಾಲ ಆತ ಮನೆಯಲ್ಲಿದ್ದನು. ಹೊರಗೆ ಬಂದ ನಂತರ ಮತ್ತೆ ಕಾಂಪೌಂಡ್ ಗೋಡೆ ಹಾರಿ ಹೋಗಿದ್ದಾನೆ. ಈ ದೃಶ್ಯಾವಳಿಗಳು ಆರೋಪಿಗಳನ್ನು ಬಂಧಿಸಲು ನಮಗೆ ಸಹಾಯ ಮಾಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com