ಜಿ.ಪಂ, ತಾ.ಪಂ ಕ್ಷೇತ್ರ ಪುನರ್‌ವಿಂಗಡಣೆ: ಹೈಕೋರ್ಟ್ ಗೆ ಅಧಿಸೂಚನೆ ಸಲ್ಲಿಸಿದ ರಾಜ್ಯ ಸರ್ಕಾರ

ರಾಜ್ಯದ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳನ್ನು ಪುನರ್‌ವಿಂಗಡಿಸಿ ಹಾಗೂ ಸದಸ್ಯರ ಸಂಖ್ಯೆ ನಿಗದಿ ಮಾಡಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವಾಲಯ ಹೈಕೋರ್ಟ್‌ಗೆ ಅಧಿ ಸೂಚನೆ ಸಲ್ಲಿಸಿದೆ.
ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್

ಬೆಂಗಳೂರು: ರಾಜ್ಯದ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳನ್ನು ಪುನರ್‌ವಿಂಗಡಿಸಿ ಹಾಗೂ ಸದಸ್ಯರ ಸಂಖ್ಯೆ ನಿಗದಿ ಮಾಡಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವಾಲಯ ಹೈಕೋರ್ಟ್‌ಗೆ ಅಧಿ ಸೂಚನೆ ಸಲ್ಲಿಸಿದೆ.

ಕರ್ನಾಟಕ ಪಂಚಾಯತ್‌ ರಾಜ್‌ ಸೀಮಾ ನಿರ್ಣಯ ಆಯೋಗ ಕ್ಷೇತ್ರಗಳನ್ನುಪುನರ್‌ವಿಂಗಡಿಸಿ ಹಾಗೂ ಸದಸ್ಯರ ಸಂಖ್ಯೆ ನಿಗದಿಪಡಿಸಿ ಮಾಡಿದ್ದ ಶಿಫಾರಸುಗಳನ್ನು ಸರ್ಕಾರ ಅಂಗೀಕರಿಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ ಅವರ ವಿಭಾಗೀಯ ಪೀಠವು ವಿಚಾರಣೆಯನ್ನು ಏಪ್ರಿಲ್ 12, 2023 ಕ್ಕೆ ಮುಂದೂಡಿತು.

ರಾಜ್ಯ ಚುನಾವಣಾ ಆಯೋಗವು 2021 ರಲ್ಲಿ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ನಡೆಸಲು ರಾಜ್ಯಕ್ಕೆ ನಿರ್ದೇಶನ ಕೋರಿ ಪಿಐಎಲ್ ಸಲ್ಲಿಸುವ ಮೂಲಕ ಹೈಕೋರ್ಟ್ ಗೆ ಮನವಿ ಮಾಡಿತ್ತು. ಡಿಸೆಂಬರ್ 14, 2022 ರಂದು ವಾಗ್ದಾಳಿ ನಡೆಸಿದ್ದ ಹೈಕೋರ್ಟ್ 5 ಲಕ್ಷ ರೂ. ದಂಡ ವಿಧಿಸಿತ್ತು

ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ವಾಪಸ್ ಪಡೆದು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚಿಸಲು 'ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯಿದೆ'ಗೆ ತಿದ್ದುಪಡಿ ತಂದಿರುವುದನ್ನು ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಬುಧವಾರ ವಿಚಾರಣೆಗೆ ಬಂದಿತ್ತು.

ಕ್ಷೇತ್ರದ ಪುನರ್ವಿಂಗಡಣೆಗೆ ಕುರಿತು ಗುರುವಾರ ಹೊರಡಿಸಲಿರುವ ಅಧಿಸೂಚನೆ ಪ್ರತಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು. ಈ ವರದಿಯ ಆಧಾರದಲ್ಲಿ ಅಧಿಸೂಚನೆ ಹೊರಡಿಸುವುದಕ್ಕಾಗಿ ಸರ್ಕಾರ ಸಿದ್ದವಿದೆ. ಮುಂದಿನ 10 ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ನ್ಯಾಯಪೀಠಕ್ಕೆ ಭರವಸೆ ನೀಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com