ಮೀಸಲಾತಿ ವಿವಾದ: ಮಾರ್ಚ್ 4 ರಂದು ರಸ್ತೆ ತಡೆದು ಪ್ರತಿಭಟನೆ ನಡೆಯಲು ಪಂಚಮಸಾಲಿ ಲಿಂಗಾಯತರು ಮುಂದು

ಹಿಂದುಳಿದ ವರ್ಗಗಳ ‘2ಎ’ ಮೀಸಲಾತಿಗೆ ಪಂಚಮಸಾಲಿ ಸಮಾಜ ಸೇರ್ಪಡೆಗೊಳಿಸಲು ಆಗ್ರಹಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಹಮ್ಮಿಕೊಂಡಿರುವ ಧರಣಿ ಸತ್ಯಾಗ್ರಹ ಮಾರ್ಚ್ 4ಕ್ಕೆ 50 ದಿನಗಳನ್ನು ಪೂರೈಸುತ್ತಿದ್ದು, ಈ ನಡುವಲ್ಲೇ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ಪಂಚಮಸಾಲಿ ಲಿಂಗಾಯತರು ನಿರ್ಧರಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಹಿಂದುಳಿದ ವರ್ಗಗಳ ‘2ಎ’ ಮೀಸಲಾತಿಗೆ ಪಂಚಮಸಾಲಿ ಸಮಾಜ ಸೇರ್ಪಡೆಗೊಳಿಸಲು ಆಗ್ರಹಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಹಮ್ಮಿಕೊಂಡಿರುವ ಧರಣಿ ಸತ್ಯಾಗ್ರಹ ಮಾರ್ಚ್ 4ಕ್ಕೆ 50 ದಿನಗಳನ್ನು ಪೂರೈಸುತ್ತಿದ್ದು, ಈ ನಡುವಲ್ಲೇ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ಪಂಚಮಸಾಲಿ ಲಿಂಗಾಯತರು ನಿರ್ಧರಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ಮಾರ್ಚ್‌ 4 ರಂದು ಪಂಚಮಸಾಲಿ ಸಮಾಜದ ಜನರು ರಾಜ್ಯದ ಎಲ್ಲೆಡೆ ರಾಷ್ಟ್ರೀಯ, ರಾಜ್ಯ ಹೆದ್ದಾರಿ ಹಾಗೂ ಗ್ರಾಮ ರಸ್ತೆಗಳನ್ನು ಬಂದ್‌ ಮಾಡಬೇಕು. ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಲು ಕರೆ ನೀಡಲಾಗಿದೆ ಎಂದು ಹೇಳಿದರು.

ಮೀಸಲಾತಿ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತು ಕೊಟ್ಟು ತಪ್ಪಿದ್ದಾರೆ. 26 ತಿಂಗಳಿನಿಂದ ನಿರಂತರ ಹೋರಾಟ ನಡೆಸಿದರೂ, ಸರ್ಕಾರದ ಸ್ಪಂದನೆ ನೀಡುತ್ತಿಲ್ಲ. ಪಂಚಮಸಾಲಿ, ಗೌಡ ಮಲೇಗೌಡ, ದೀಕ್ಷಾ ಲಿಂಗಾಯತ ಚಳವಳಿ ಹತ್ತಿಕ್ಕಲು ಸರ್ಕಾರದ ಸಚಿವರೇ ಪ್ರಯತ್ನಿಸಿದ್ದಾರೆ. ಹೃದಯವಿಲ್ಲದ ಈ ಸರ್ಕಾರದ ಮುಖ್ಯಮಂತ್ರಿ ಹಾಗೂ ಸಚಿವರು ಹೋರಾಟಗಾರರನ್ನು ಮಾತು ಕತೆಗೂ ಕರೆದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೀಸಲಾತಿ ಘೋಷಿಸಲು ಮಾರ್ಚ್‌ 15ರವರೆಗೆ ಗಡುವು ನೀಡಲಾಗಿದೆ. ಸರ್ಕಾರ ಸ್ಪಂದಿಸದಿದ್ದರೆ ಎಲ್ಲ ಕ್ಷೇತ್ರಗಳಿಗೂ ಭೇಟಿ ನೀಡಿ ಸಮಾಜಕ್ಕೆ ಈ ಸರ್ಕಾರ ಮಾಡಿರುವ ಅಪಮಾನ, ಅನ್ಯಾಯಗಳನ್ನು ಜನತಾ ನ್ಯಾಯಾಲಯದ ಮುಂದೆ ಇಡಲಾಗುವುದು. ಮೀಸಲಾತಿ ನೀಡುವ ಭರವಸೆ ನೀಡಿ ಸರ್ಕಾರ ವಂಚನೆ ಮಾಡಿದೆ. ಹೀಗಾಗಿ ಪ್ರತಿಭಟನೆ ವೇಳೆ ಕಿವಿ ಮೇಲೆ ಹೂವು ಇಟ್ಟುಕೊಳ್ಳಲು ನಿರ್ಧರಿಸಲಾಗಿದೆ ಎಂದು ಸಂಘಟಕರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com