ಬೆಂಗಳೂರು: ಅನಿಲ ಸೋರಿಕೆಯಿಂದ ಆರು ಮಕ್ಕಳು ಸೇರಿದಂತೆ ಏಳು ಮಂದಿಗೆ ಗಾಯ, ನಾಲ್ವರ ಸ್ಥಿತಿ ಗಂಭೀರ

ಶುಕ್ರವಾರ ಬೆಳಗ್ಗೆ ರಾಜಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮರಿಯಪ್ಪನಪಾಳ್ಯದಲ್ಲಿ ಶಂಕಿತ ಅನಿಲ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಕ್ಕಳು ಸೇರಿದಂತೆ 13 ಮಂದಿಗೆ ಸುಟ್ಟ ಗಾಯಗಳಾಗಿವೆ. ಗಾಯಗೊಂಡವರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ
Updated on

ಬೆಂಗಳೂರು: ಶುಕ್ರವಾರ ಬೆಳಗ್ಗೆ ರಾಜಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮರಿಯಪ್ಪನಪಾಳ್ಯದಲ್ಲಿ ಶಂಕಿತ ಅನಿಲ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಕ್ಕಳು ಸೇರಿದಂತೆ 13 ಮಂದಿಗೆ ಸುಟ್ಟ ಗಾಯಗಳಾಗಿವೆ. ಗಾಯಗೊಂಡವರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ.

ಗಾಯಾಳುಗಳು ವಿಕ್ಟೋರಿಯಾ ಆಸ್ಪತ್ರೆಯ ಸುಟ್ಟಗಾಯಗಳ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗುರುವಾರ ರಾತ್ರಿ ಕುಟುಂಬದವರು ಕಾರ್ಯಕ್ರಮವೊಂದಕ್ಕೆ ಜಮಾಯಿಸಿ ವಿವಿಧ ಖಾದ್ಯಗಳನ್ನು ತಯಾರಿಸಿದ್ದರು. ಅಡುಗೆ ಮಾಡಿದ ನಂತರ, ಅವರು ನಿಯಂತ್ರಕವನ್ನು ಆಫ್ ಮಾಡಲು ಮರೆತಿದ್ದಾರೆ. ಇದು ಅನಿಲ ಸೋರಿಕೆಗೆ ಕಾರಣವಾಯಿತು. ರಾಜಾಜಿನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಗಾಯಗೊಂಡವರನ್ನು ಅಜ್ಮಲ್ (46), ನಜೀಮಾ (42) , ರಿಯಾನಾ (14), ಅಜ್ವಾನ್ (12), ಫಯಾಜ್ (10), ಅಮಿಂಜಾನ್ (52), ಶಬಾನಾಬ್ (18), ನಸೀಮಾ (40), ಸಲ್ಮಾ (33), ರೇಷ್ಮಾ ಬಾನು (48) ಮತ್ತು ಇತರರು ಎಂದು ಗುರುತಿಸಲಾಗಿದೆ. 2ನೇ ಮುಖ್ಯರಸ್ತೆಯ 4ನೇ ಕ್ರಾಸ್‌ನಲ್ಲಿರುವ ಅಜ್ಮಲ್ ಅವರ ನಿವಾಸದಲ್ಲಿ ಕಟ್ಟಡದ ಮೊದಲ ಮಹಡಿಯಲ್ಲಿ ಈ ಘಟನೆ ನಡೆದಿದೆ.

ಶುಕ್ರವಾರ ಬೆಳಗ್ಗೆ ಅವರಲ್ಲಿ ಒಬ್ಬರು ಲೈಟ್‌ಗಳನ್ನು ಆನ್ ಮಾಡಿದ್ದು, ಮನೆಗೆ ಬೆಂಕಿ ಹೊತ್ತಿಕೊಂಡಿದೆ. ಪೀಠೋಪಕರಣಗಳು, ಬಟ್ಟೆಗಳು ಮತ್ತು ಎಲೆಕ್ಟ್ರಾನಿಕ್ ವಸ್ತುಗಳು ಭಾಗಶಃ ಸುಟ್ಟುಹೋಗಿವೆ. ಅವರ ಕಿರುಚಾಟ ಕೇಳಿದ ನೆರೆಹೊರೆಯವರು ಪೊಲೀಸರಿಗೆ ಕರೆ ಮಾಡಿದ್ದಾರೆ. 

ಸಮಯಕ್ಕೆ ಸರಿಯಾಗಿ ಆಂಬ್ಯುಲೆನ್ಸ್ ಬಂದಿಲ್ಲ ಎಂಬ ಆರೋಪ ಕೇಳಿಬಂದಿದೆ. ಪೊಲೀಸರು ಇನ್ನೂ ಸಂತ್ರಸ್ತರ ಹೇಳಿಕೆಗಳನ್ನು ದಾಖಲಿಸಿಕೊಳ್ಳಬೇಕಾಗಿದೆ ಮತ್ತು ಬೆಂಕಿಯ ಕಾರಣವನ್ನು ಕಂಡುಹಿಡಿಯಬೇಕಾಗಿದೆ. 

'ಸಂತ್ರಸ್ತರು ಇನ್ನೂ ಹೇಳಿಕೆಗಳನ್ನು ನೀಡುವ ಸ್ಥಿತಿಯಲ್ಲಿಲ್ಲ ಎಂದು ವೈದ್ಯರು ಹೇಳಿದ್ದಾರೆ' ಎಂದು ಪೊಲೀಸರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com