ಕರಾವಳಿ ಜಿಲ್ಲೆಗಳಲ್ಲಿ ತಾಳೆ ಎಣ್ಣೆ ಸಂಸ್ಕರಣಾ ಘಟಕ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಕರಾವಳಿ ಜಿಲ್ಲೆಗಳಲ್ಲಿ ಶೀಘ್ರದಲ್ಲೇ ತಾಳೆ ಎಣ್ಣೆ ಸಂಸ್ಕರಣಾ ಘಟಕ ತೆರೆಯಲಾಗುತ್ತದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಶೋಭಾ ಕರಂದ್ಲಾಜೆ
ಶೋಭಾ ಕರಂದ್ಲಾಜೆ
Updated on

ಕಲಬುರಗಿ: ಕರಾವಳಿ ಜಿಲ್ಲೆಗಳಲ್ಲಿ ಶೀಘ್ರದಲ್ಲೇ ತಾಳೆ ಎಣ್ಣೆ ಸಂಸ್ಕರಣಾ ಘಟಕ ತೆರೆಯಲಾಗುತ್ತದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಕಲಬುರಗಿ ನಗರದಲ್ಲಿ ನಡೆಯಲಿರುವ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಪ್ರಸ್ತುತ ದೇಶದ ಒಟ್ಟು ಬೇಡಿಕೆಯ ಶೇ 70ರಷ್ಟು ಬೇಳೆ ಕಾಳು ಹಾಗೂ ಎಣ್ಣೆಕಾಳುಗಳನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳಲಾಗುತ್ತಿದೆ. ಇದರಲ್ಲಿ ಸ್ವಾವಲಂಬನೆ ಸಾಧಿಸಲು ಕರಾವಳಿ ಜಿಲ್ಲೆಗಳಲ್ಲಿ ತಾಳೆ ಎಣ್ಣೆ ಸಂಸ್ಕರಣಾ ‌ಘಟಕ ಆರಂಭಿಸಲು ಕ್ಯಾಂಪ್ಕೊಗೆ ಸೂಚಿಸಲಾಗಿದೆ‌ ಎಂದು ತಿಳಿಸಿದರು.

ಅಂತೆಯೇ, 'ಎಲ್ಲೆಲ್ಲಿ ಹೆಚ್ಚು ತೆಂಗು ಬೆಳೆಯಲಾಗುತ್ತದೋ ಅಲ್ಲಿ ತಾಳೆ ಮರಗಳನ್ನು ಬೆಳೆಸಲು ಅನುಕೂಲಕರ ವಾತಾವರಣ ಇರುತ್ತದೆ. ಈಶಾನ್ಯ ರಾಜ್ಯಗಳಲ್ಲಿ ಎಣ್ಣೆ ಬೀಜಗಳನ್ನು ಒದಗಿಸಲಾಗುತ್ತದೆ. ರೈತ ಉತ್ಪಾದಕ ಸಂಘ (ಎಫ್ ಪಿಒ)ಗಳನ್ನು ನೋಂದಣಿ ಮಾಡಿಕೊಂಡವರಿಗೆ ಸಂಸ್ಕರಣಾ ಘಟಕ, ಕಚೇರಿ ಸ್ಥಾಪಿಸಲು 18ರಿಂದ 20 ಲಕ್ಷ ರೂ ಸಾಲ ಸೌಲಭ್ಯ ನೀಡಲಾಗುವುದು. ಉಕ್ರೇನ್ ನಲ್ಲಿ ಯುದ್ಧ ನಡೆಯುತ್ತಿರುವುದರಿಂದ ಅಲ್ಲಿಂದ ಬರಬೇಕಿದ್ದ ಎಣ್ಣೆ ಪದಾರ್ಥಗಳು ಬರುತ್ತಿಲ್ಲ.‌ ಖಾದ್ಯ ತೈಲ ಉತ್ಪಾದನೆಯಲ್ಲಿ ಆತ್ಮ ನಿರ್ಭರ (ಸ್ವಾವಲಂಬನೆ)ವಾಗಲು ಎಣ್ಣೆ ಬೀಜಗಳ‌ ಕಿಟ್ ನೀಡಲಾಗುತ್ತಿದೆ' ಎಂದರು. 

ಬೆಳೆ ಪ್ರಮಾಣ ಕುಸಿತ
ರಾಜ್ಯದಲ್ಲಿ ಮೊದಲು 13 ಲಕ್ಷ ‌ಎಕರೆ ಪ್ರದೇಶದಲ್ಲಿ ಸೂರ್ಯಕಾಂತಿ, ಕುಸುಬೆ, ಸಾಸಿವೆಯಂತಹ ಎಣ್ಣೆ ಕಾಳುಗಳನ್ನು ಬೆಳೆಯುತ್ತಿದ್ದರು. ಈಗ ಆ ಪ್ರಮಾಣ 3 ಲಕ್ಷ ಎಕರೆಗೆ ಕುಸಿದಿದೆ. ರೈತರಿಗೆ ಅಗತ್ಯವಿರುವ ಎಲ್ಲ ನೆರವು ನೀಡುವ ಮೂಲಕ ಉತ್ಪಾದನಾ ಕ್ಷೇತ್ರವನ್ನು ಹೆಚ್ಚಿಸಲಾಗುವುದು ಎಂದು ಶೋಭಾ ಕರಂದ್ಲಾಜೆ ತಿಳಿಸಿದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com