ಮಾರ್ಚ್ 12 ರಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ: ಪ್ರಲ್ಹಾದ್ ಜೋಶಿ

ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 12 ರಂದು ಕರ್ನಾಟಕದ ಮಂಡ್ಯ ಮತ್ತು ಹುಬ್ಬಳ್ಳಿ-ಧಾರವಾಡ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಭಾನುವಾರ ತಿಳಿಸಿದ್ದಾರೆ.
ಪ್ರಹ್ಲಾದ್ ಜೋಶಿ
ಪ್ರಹ್ಲಾದ್ ಜೋಶಿ
Updated on

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 12 ರಂದು ಕರ್ನಾಟಕದ ಮಂಡ್ಯ ಮತ್ತು ಹುಬ್ಬಳ್ಳಿ-ಧಾರವಾಡ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಭಾನುವಾರ ತಿಳಿಸಿದ್ದಾರೆ.

ಈ ವರ್ಷದ ಆರಂಭದಿಂದಲೂ ಮೋದಿ ಅವರು ವಿವಿಧ ಯೋಜನೆಗಳ ಶಂಕುಸ್ಥಾಪನೆ ನೆರವೇರಿಸಲು ಅಥವಾ ವಿವಿಧ ಯೋಜನೆಗಳನ್ನು ಉದ್ಘಾಟಿಸಲು ಆಗಾಗ್ಗೆ ರಾಜ್ಯಕ್ಕೆ ಬರುತ್ತಿದ್ದಾರೆ. ದೊಡ್ಡ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ. ಏಕೆಂದರೆ, ಆಡಳಿತಾರೂಢ ಬಿಜೆಪಿ ಕರ್ನಾಟಕದಲ್ಲಿ ಮೇ ವೇಳೆಗೆ ಚುನಾವಣೆ ನಡೆಯುವ ಸಾಧ್ಯತೆಯಿದೆ.

'ಪ್ರಧಾನಮಂತ್ರಿಯವರು ಮಾರ್ಚ್ 12ರಂದು ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಸುಮಾರು 2 ಗಂಟೆಗೆ ಹುಬ್ಬಳ್ಳಿಗೆ ಆಗಮಿಸಿ ಐಐಟಿ ಧಾರವಾಡವನ್ನು ಉದ್ಘಾಟಿಸಲಿದ್ದಾರೆ. ನಂತರ ಸಮೀಪದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಜೋಶಿ ಹೇಳಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭೇಟಿ ಕುರಿತು ಪ್ರಧಾನಿ ಕಚೇರಿಯಿಂದ ಅಧಿಕೃತ ದೃಢೀಕರಣವಿದೆ. ಪ್ರಧಾನಿ ಮೋದಿ ಬಂದಾಗ ನೆರೆದ ಜನಸಾಗರಕ್ಕೆ ಅನುಕೂಲವಾಗುವಂತೆ ಮಂಡ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಷ್ಟು ದೊಡ್ಡ ಮೈದಾನ ಇಲ್ಲದ ಕಾರಣ ಸಭೆಗೆ ಖಾಸಗಿ ಜಮೀನು ತೆಗೆದುಕೊಳ್ಳಲಾಗಿದೆ. ಮಂಡ್ಯದಲ್ಲಿ ಬಿಜೆಪಿಯನ್ನು ಬಲಪಡಿಸಬೇಕಾಗಿದೆ ಎಂದು ತಿಳಿಸಿದರು.

ಮದ್ದೂರಿನಲ್ಲಿಯೂ ಇದೇ ಮೊದಲ ಬಾರಿಗೆ ದೊಡ್ಡ ಮಟ್ಟದ ಸಾರ್ವಜನಿಕ ಸಭೆ ಆಯೋಜಿಸಲಾಗಿದೆ.
ಮುಂಬರುವ ಚುನಾವಣೆಯಲ್ಲಿ ಸಂಪೂರ್ಣ ಬಹುಮತ ಪಡೆಯಲು ಕಸರತ್ತು ಆರಂಭಿಸಿದ್ದು, ಒಕ್ಕಲಿಗ ಸಮುದಾಯ ಅಧಿಕವಾಗಿರುವ ಮಂಡ್ಯದಲ್ಲಿ 'ಹಳೆ ಮೈಸೂರು' ಭಾಗದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವತ್ತ ಬಿಜೆಪಿ ಗಮನಹರಿಸಿದೆ. ಈ ಪ್ರದೇಶದಲ್ಲಿ ಬಿಜೆಪಿ ದುರ್ಬಲವಾಗಿದೆ ಎಂದು ಪರಿಗಣಿಸಲಾಗಿದೆ.

ಪ್ರಧಾನಿ ಭೇಟಿಯ ಸಿದ್ಧತೆಗಳ ಕುರಿತು ಚರ್ಚಿಸಲು ಇತ್ತೀಚೆಗೆ ಅಧಿಕಾರಿಗಳು ಮತ್ತು ಪಕ್ಷದ ಕಾರ್ಯಕರ್ತರೊಂದಿಗೆ ಜೋಶಿ ಅವರು ಸಭೆ ನಡೆಸಿದ್ದು, ಇದು ಇತ್ತೀಚೆಗೆ ಬೆಳಗಾವಿ ಮತ್ತು ಹುಬ್ಬಳ್ಳಿ-ಧಾರವಾಡದಲ್ಲಿ ನಡೆದಂತಹ ಬೃಹತ್ ಸಾರ್ವಜನಿಕ ಸಭೆ ಆಗಲಿದೆ ಎಂದು ಪಕ್ಷದವರು ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣ ನಿರ್ಮಾಣವಾಗಿದ್ದು, ಮೋದಿ ನಾಯಕತ್ವದಲ್ಲಿ ಪಕ್ಷವು ಬಹುಮತದೊಂದಿಗೆ ಗೆಲುವು ಸಾಧಿಸಲಿದೆ. ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಮುಂದುವರೆಯುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಜೋಶಿ ಪ್ರತಿಪಾದಿಸಿದರು.

ಫೆಬ್ರುವರಿ 27 ರಂದು ಶಿವಮೊಗ್ಗ ವಿಮಾನ ನಿಲ್ದಾಣವನ್ನು ಉದ್ಘಾಟಿಸಲು ಮತ್ತು ಬೆಳಗಾವಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲು ಮೋದಿ ಅವರು ಕೊನೆಯ ಬಾರಿಗೆ ರಾಜ್ಯಕ್ಕೆ ಬಂದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com