ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಪ್ರತ್ಯೇತ ಧರ್ಮಕ್ಕೆ ಆಗ್ರಹ: ಲಿಂಗಾಯತ ಸಮುದಾಯದ 2 ದಿನಗಳ ಸಮಾವೇಶ ಮುಕ್ತಾಯ

ಜಾಗತಿಕ ಲಿಂಗಾಯತ ಮಹಾಸಭಾದ ಮೊದಲ ಸಮಾವೇಶ ಬಸವಕಲ್ಯಾಣದಲ್ಲಿ (ಬೀದರ್‌ ಜಿಲ್ಲೆ) ಭಾನುವಾರ ಮುಕ್ತಾಯಗೊಂಡಿದ್ದು, ನಿರೀಕ್ಷೆಯಂತೆಯೇ ರಾಜ್ಯ ಸರ್ಕಾರ ಪ್ರತ್ಯೇಕ ಧರ್ಮ ಸ್ಥಾನಮಾನ ನೀಡುವಂತೆ ಮಾಡಿರುವ ಶಿಫಾರಸನ್ನು ಅಂಗೀಕರಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು.
Published on

ಕಲಬುರಗಿ: ಜಾಗತಿಕ ಲಿಂಗಾಯತ ಮಹಾಸಭಾದ ಮೊದಲ ಸಮಾವೇಶ ಬಸವಕಲ್ಯಾಣದಲ್ಲಿ (ಬೀದರ್‌ ಜಿಲ್ಲೆ) ಭಾನುವಾರ ಮುಕ್ತಾಯಗೊಂಡಿದ್ದು, ನಿರೀಕ್ಷೆಯಂತೆಯೇ ರಾಜ್ಯ ಸರ್ಕಾರ ಪ್ರತ್ಯೇಕ ಧರ್ಮ ಸ್ಥಾನಮಾನ ನೀಡುವಂತೆ ಮಾಡಿರುವ ಶಿಫಾರಸನ್ನು ಅಂಗೀಕರಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು.

ಸಮಾವೇಶದಲ್ಲಿ ಧಾರ್ಮಿಕ ಮತ್ತು ಸಾಮಾಜಿಕ ಮುಖಂಡರು ಸೇರಿದಂತೆ 20ಕ್ಕೂ ಹೆಚ್ಚು ಮಠಾಧೀಶರು ಉಪಸ್ಥಿತರಿದ್ದರು,

ಹಿರಿಯ ಸಾಹಿತಿ ಗೋ.ರು ಚನ್ನಬಸಪ್ಪ ಅವರು ಎರಡು ದಿನಗಳ ಸಮಾವೇಶದ ಅಧ್ಯಕ್ಷತೆ ವಹಿಸಿದ್ದರು. ಆದರೆ, ಸಮಾವೇಳದಲ್ಲಿ ರಾಜಕೀಯ ಪಕ್ಷಗಳ ಮುಖಂಡರು ಅಂತರ ಕಾಯ್ದುಕೊಂಡಿದ್ದು ಕಂಡು ಬಂದಿತು.

2018ರಲ್ಲಿ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಧಾರ್ಮ ಸ್ಥಾನಮಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದರು. ಆದರೆ, ಕೇಂದ್ರ ಅದನ್ನು ತಿರಸ್ಕರಿಸಿತ್ತು. 2018 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಇದೂ ಒಂದು ಪ್ರಮುಖ ಕಾರಣವಾಗಿತ್ತು ಎಂದು ಹೇಳಲಾಗುತ್ತಿದೆ.

ಲಿಂಗಾಯತ ಸಮುದಾಯದ ಏಕೈಕ ಪ್ರಾತಿನಿಧಿಕ ಸಂಸ್ಥೆಯಾಗಿ ಘೋಷಿಸುವುದು, ಬಸವ ಜಯಂತಿಯನ್ನು ಎಲ್ಲ ರಾಜ್ಯಗಳಲ್ಲಿ ನಡೆಸುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳನ್ನು ಕೋರುವುದು ಮತ್ತು ಬಸವೇಶ್ವರರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಲು ರಾಜ್ಯ ಸರ್ಕಾರಕ್ಕೆ ಒತ್ತಡ ಹೇರುವುದು ಸೇರಿದಂತೆ ಹಲವು ವಿಚಾರಗಳ ಕುರಿತು ಸಮಾವೇಶದಲ್ಲಿ ನಿರ್ಣಯಗಳನ್ನು ಕೈಗೊಳ್ಳಲಾಯಿತು,

ಈ ನಡುವೆ ಉದ್ಘಾಟನೆಗೆ ಕಾಯುತ್ತಿರುವ ನೂತನ ಸಂಸತ್ ಭವನಕ್ಕೆ ‘ಅನುಭವ ಮಂಟಪ’ ಎಂದು ಹೆಸರಿಡುವಂತೆಯೂ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲು ನಿರ್ಣಯ ಕೈಗೊಳ್ಳಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com