1 ಟ್ರಿಲಿಯನ್‌ ಡಾಲರ್‌ ಆರ್ಥಿಕತೆಯಾಗಿ ಕರ್ನಾಟಕ: ಕ್ರಿಯಾ ಯೋಜನೆ ಬಿಡುಗಡೆ

ರಾಜ್ಯವನ್ನು 1 ಟ್ರಿಲಿಯನ್‌ ಡಾಲರ್‌ ಆರ್ಥಿಕತೆಯಾಗಿ ಅಭಿವೃದ್ಧಿ ಪಡಿಸಲು ರೂಪಿಸಿದ ಕ್ರಿಯಾಯೋಜನೆಯು ಈ ಗುರಿಸಾಧನೆಯತ್ತ ಸರಿಯಾದ ದಿಸೆಯಲ್ಲಿ ಸಾಗಲು ನೆರವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಿಪ್ರಾಯಪಟ್ಟರು.
ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ
Updated on

ಬೆಂಗಳೂರು: ರಾಜ್ಯವನ್ನು 1 ಟ್ರಿಲಿಯನ್‌ ಡಾಲರ್‌ ಆರ್ಥಿಕತೆಯಾಗಿ ಅಭಿವೃದ್ಧಿ ಪಡಿಸಲು ರೂಪಿಸಿದ ಕ್ರಿಯಾಯೋಜನೆಯು ಈ ಗುರಿಸಾಧನೆಯತ್ತ ಸರಿಯಾದ ದಿಸೆಯಲ್ಲಿ ಸಾಗಲು ನೆರವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಿಪ್ರಾಯಪಟ್ಟರು.

ಅವರು ಇಂದು ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ವಿವಿಧ ವರದಿಗಳು ಹಾಗೂ ಪ್ರಕಟಣೆಗಳು, 1 ಟ್ರಿಲಿಯನ್‌ ಡಾಲರ್‌ ಆರ್ಥಿಕತೆ ಗುರಿ ಸಾಧನೆಯ ಕ್ರಿಯಾ ಯೋಜನೆ ಹಾಗೂ ರಾಜ್ಯದ ಉದ್ಯೋಗ ವರದಿಯನ್ನು ಬಿಡುಗಡೆ ಮಾಡಿ ಮಾತನಾಡಿದರು.

ರಾಜ್ಯದಲ್ಲಿ ಉದ್ಯೋಗ ಸೃಜನೆ ಹಾಗೂ ಕೌಶಲ್ಯಾಭಿವೃದ್ಧಿಗೆ ಸರ್ಕಾರ ಹೆಚ್ಚಿನ ಒತ್ತು ನೀಡಿದ್ದು, ದೇಶದಲ್ಲಿಯೇ ಮೊದಲ ಬಾರಿಗೆ ಉದ್ಯೋಗ ನೀತಿಯನ್ನು ಜಾರಿಗೊಳಿಸಿದೆ. ಇದರೊಂದಿಗೆ ಕೌಶಲ್ಯಾಭಿವೃದ್ಧಿ ತರಬೇತಿಯ ಸಾಂಸ್ಥೀಕರಣದ ಮೂಲಕ ಗುಣಮಟ್ಟ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.

ದುಡಿಯುವ ವರ್ಗ ಸಮಾಜದ ಪಿರಮಿಡ್‌ ನ ತಳಹದಿಯಾಗಿದ್ದಾರೆ. ಅವರ ಶ್ರೇಯೋಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಮಹಿಳೆಯರು, ಯುವಕರು ಹಾಗೂ ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಸರ್ಕಾರ ಹೆಚ್ಚಿನ ಬೆಂಬಲ ನೀಡುತ್ತಿದೆ. ಇದಲ್ಲದೆ ಕಿತ್ತೂರು ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೂ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ ಎಂದು ವಿವರಿಸಿದರು. 

1 ಟ್ರಿಲಿಯನ್‌ ಡಾಲರ್‌ ಆರ್ಥಿಕತೆಯ ಕ್ರಿಯಾ ಯೋಜನೆ ಹಾಗೂ ಉದ್ಯೋಗ ವರದಿ ನೀಡುವಲ್ಲಿ ಸಹಕರಿಸಿದ ಎಲ್ಲ ಅಧಿಕಾರಿಗಳೂ ಹಾಗೂ FICCI ಪ್ರತಿನಿಧಿಗಳು ಮತ್ತು ಇತರ ತಜ್ಞರ ಸಹಯೋಗವನ್ನು ಮುಖ್ಯಮಂತ್ರಿಗಳು ಶ್ಲಾಘಿಸಿದರು.

ಸಭೆಯಲ್ಲಿ ಮಾತನಾಡಿದ ಟಿ.ವಿ. ಮೋಹನ್‌ ದಾಸ್‌ ಪೈ ಅವರು ರಾಜ್ಯದಲ್ಲಿ ಉದ್ಯೋಗ ಸೃಜನೆ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿದ್ದು, ರಾಜ್ಯದ ಅಭಿವೃದ್ಧಿ ಮಾದರಿಯು ದೇಶದಲ್ಲೇ ಅತ್ಯುತ್ತಮವಾಗಿದೆ ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಇತ್ತೀಚೆಗೆ ರಾಜ್ಯದಲ್ಲಿ ಆಯೋಜಿಸಲಾದ ರಾಷ್ಟ್ರೀಯ ಯುವ ಜನೋತ್ಸವ 2023ರಲ್ಲಿ ಪ್ರಪ್ರಥಮ ಬಾರಿಗೆ ಯುವ ಸಮ್ಮೇಳನದ ಚಟುವಟಿಕೆಗಳನ್ನು ಒಳಗೊಂಡ ಕಾಫೀ ಟೇಬಲ್‌ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು. 

ನವಭಾರತಕ್ಕೆ ನವ ಕರ್ನಾಟಕ ನಿರ್ಮಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಪರಿವರ್ತನಾ ಸಂಸ್ಥೆಯಲ್ಲಿ(SITK) 8 ತಜ್ಞರನ್ನು ಆಯ್ಕೆ ಮಾಡಲು ಪೋರ್ಟಲ್‌ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲು,  ಪೋರ್ಟಲ್‌ನ ಉದ್ಘಾಟನೆ ಹಾಗೂ SITK ಲಾಂಛನದ ಲೋಕಾರ್ಪಣೆ ಮಾಡಲಾಯಿತು. ಕರ್ನಾಟಕ ರಾಜ್ಯದ 26 ಅತ್ಯುತ್ತಮ ಆಡಳಿತ ಅಭ್ಯಾಸಗಳಿರುವ ಕೈಪಿಡಿಯನ್ನು ಮುಖ್ಯ ಮಂತ್ರಿಗಳು ಬಿಡುಗಡೆ ಮಾಡಿದರು. ಕರ್ನಾಟಕ ಅಂಕಿ ಅಂಶಗಳ ನೋಟ 2021-22 ನ್ನು ಬಿಡುಗಡೆ ಮಾಡಲಾಯಿತು. ಸಾಂಖ್ಯಿಕ ಮತ್ತು ಆರ್ಥಿಕ ನಿರ್ದೇಶನಾಲಯದ ಸಹಯೋಗದೊಂದಿಗೆ Federation of Indian Chambers of Commerce & Industry (FICCI) ಮೂಲಕ ತಯಾರಿಸಲಾದ ಕರ್ನಾಟಕ ಉದ್ಯೋಗಗಳ ವರದಿ (job report) ಯನ್ನು ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಯೋಜನಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಟಿ.ವಿ. ಮೋಹನ್ ದಾಸ್ ಪೈ, ನಿಶಾ ಹೊಳ್ಳ, ಅಜಿತ್‌ ಐಸಾಕ್ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com