ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಜಾಮೀನು: ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲು ಲೋಕಾಯುಕ್ತ ಚಿಂತನೆ

ಟೆಂಡರ್ ಮಂಜೂರು ಮಾಡಲು ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಜಾಮೀನು ನೀಡಿರುವುದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲು ಕರ್ನಾಟಕ ಲೋಕಾಯುಕ್ತ ಪೊಲೀಸರು ಚಿಂತನೆ ನಡೆಸಿದ್ದಾರೆ ಎಂದು ಮೂಲಗಳು ಗುರುವಾರ ತಿಳಿಸಿವೆ.
ಲೋಕಾಯುಕ್ತ
ಲೋಕಾಯುಕ್ತ

ಬೆಂಗಳೂರು: ಟೆಂಡರ್ ಮಂಜೂರು ಮಾಡಲು ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಜಾಮೀನು ನೀಡಿರುವುದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲು ಕರ್ನಾಟಕ ಲೋಕಾಯುಕ್ತ ಪೊಲೀಸರು ಚಿಂತನೆ ನಡೆಸಿದ್ದಾರೆ ಎಂದು ಮೂಲಗಳು ಗುರುವಾರ ತಿಳಿಸಿವೆ.

ತನಿಖಾಧಿಕಾರಿಗಳು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಅವರೊಂದಿಗೆ ಸಭೆ ನಡೆಸಿದ್ದು, ಈ ನಿಟ್ಟಿನಲ್ಲಿ ಈಗಾಗಲೇ ಸಿದ್ಧತೆ ಆರಂಭಿಸಿದ್ದಾರೆ ಎಂದು ಮೂಲಗಳು ಬಹಿರಂಗಪಡಿಸಿವೆ.  ಮಾರ್ಚ್ 17 ರಂದು ಕರ್ನಾಟಕ ಹೈಕೋರ್ಟ್ ಮುಂದೆ ಈ ವಿಷಯ ಬರಲಿದ್ದು, ಜಾಮೀನು ವಜಾಗೊಳಿಸಲು ಲೋಕಾಯುಕ್ತರು ನ್ಯಾಯಾಲಯದ ಮುಂದೆ ದಾಖಲೆಗಳು, ಸಾಕ್ಷ್ಯಗಳು ಮತ್ತು ಬಲವಾಗಿ ವಾದ ಮಂಡಿಸಲು ಸಿದ್ಧತೆ ನಡೆಸಿದ್ದಾರೆ.

ನ್ಯಾಯಾಲಯ ನೀಡಿದ್ದ 48 ಗಂಟೆಗಳ ಗಡುವು ಮುಗಿಯಲಿದ್ದು, ಆರೋಪಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ಗುರುವಾರ ಲೋಕಾಯುಕ್ತ ಅಧಿಕಾರಿಗಳ ಮುಂದೆ ಹಾಜರಾಗುವ ಸಾಧ್ಯತೆಯಿದೆ. ವಿಚಾರಣೆಗೆ ಹಾಜರಾಗಲು ಆರೋಪಿ ಶಾಸಕರು ತಮ್ಮ ತವರೂರಿನಿಂದ ಬೆಂಗಳೂರಿಗೆ ಬಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಲೋಕಾಯುಕ್ತ ದಾಳಿ ವೇಳೆ ಶಾಸಕರ ನಿವಾಸದಲ್ಲಿ ಪತ್ತೆಯಾದ 6.1 ಕೋಟಿ ರೂಪಾಯಿ ಹಣಕ್ಕೆ ಸೂಕ್ತ ದಾಖಲೆಗಳನ್ನು ಸಹ ತಂದಿದ್ದಾರೆ ಎನ್ನಲಾಗಿದೆ.

ಪ್ರಶಾಂತ್ ಮಾಡಾಳ್ ತನ್ನ ತಂದೆಯ ಪರವಾಗಿ ಪ್ರಸಿದ್ಧ 'ಮೈಸೂರು ಸ್ಯಾಂಡಲ್ ಸೋಪ್' ತಯಾರಿಸುವ ಸಾರ್ವಜನಿಕ ವಲಯದ ಕಂಪನಿಯಾದ ಕೆಎಸ್‌ಡಿಎಲ್‌ಗೆ ಕಚ್ಚಾ ಸಾಮಗ್ರಿಗಳನ್ನು ಖರೀದಿಸಲು ಟೆಂಡರ್ ಮಂಜೂರು ಮಾಡಲು 40 ಲಕ್ಷ ರೂಪಾಯಿ ನಗದು ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. 

ಆರೋಪಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಅವರ ಪುತ್ರ ಬಂಧಿತ ಪ್ರಶಾಂತ್ ಮಾಡಾಳ್ ಅವರ ಮನೆಗಳಿಂದ 8.12 ಕೋಟಿ ರೂ. ಹಾಗೂ 1.6 ಕೆಜಿ ಚಿನ್ನವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಹೈಕೋರ್ಟ್ ಮಂಗಳವಾರ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ ಬಳಿಕ ವಿಭಾಗೀಯ ನ್ಯಾಯಾಲಯದ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಏಕಸದ್ಯ ಪೀಠ, ಆದೇಶದ 48 ಗಂಟೆಗಳ ಒಳಗೆ ತನಿಖಾಧಿಕಾರಿ ಎದುರು ಹಾಜರಾಗುವಂತೆ ಆರೋಪಿ ಶಾಸಕರಿಗೆ ಸೂಚಿಸಿದ್ದಾರೆ.

ಈಮಧ್ಯೆ, ಮಾಡಾಳ್ ವಿರೂಪಾಕ್ಷಪ್ಪ ಅವರ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಶೀಘ್ರವೇ ವಿಚಾರಣೆ ನಡೆಸಿದ್ದಕ್ಕೆ ಬೆಂಗಳೂರಿನ ವಕೀಲರ ಸಂಘ ತೀವ್ರ ಆಕ್ಷೇಪ ವ್ಯಕ್ತಪಡಿಸಿತು.

ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರಿಗೆ ಬರೆದ ಪತ್ರದಲ್ಲಿ, ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾ ರೆಡ್ಡಿ, ಕರ್ನಾಟಕ ಹೈಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನಿನಂತಹ ಹೊಸ ಪ್ರಕರಣಗಳ ವಿಚಾರಣೆ ನಡೆಸಲು ಹಲವಾರು ದಿನಗಳು ಮತ್ತು ವಾರಗಳನ್ನು ತೆಗೆದುಕೊಳ್ಳುವುದು ಸಾಮಾನ್ಯ ಅಭ್ಯಾಸವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com