ನಾಳೆ ಹಾವೇರಿಗೆ ಸಿಎಂ ಬೊಮ್ಮಾಯಿ: ಕಲ್ಯಾಣ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಭಾಗಿ

ಮಾರ್ಚ್.10ರಂದು ಹಾವೇರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭೇಟಿ ನೀಡುತ್ತಿದ್ದು, ಸರ್ಕಾರದ ಕಲ್ಯಾಣ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಉದ್ಘಾಟಿಸಲಿದ್ದಾರೆಂದು ತಿಳಿದುಬಂದಿದೆ.
ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ
Updated on

ಹಾವೇರಿ: ಮಾರ್ಚ್.10ರಂದು ಹಾವೇರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭೇಟಿ ನೀಡುತ್ತಿದ್ದು, ಸರ್ಕಾರದ ಕಲ್ಯಾಣ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಉದ್ಘಾಟಿಸಲಿದ್ದಾರೆಂದು ತಿಳಿದುಬಂದಿದೆ.

ಜಿಲ್ಲಾ ಕ್ರೀಡಾಂಗಣದಲ್ಲಿ ಈ ಸಮಾವೇಶವನ್ನು ಆಯೋಜಿಸಲಾಗಿದ್ದು, ರಾಜ್ಯ ಹಾಗೂ ಕೇಂದ್ರ ಸರಕಾರದ ಕಲ್ಯಾಣ ಯೋಜನೆಗಳ ಫಲಾನುಭವಿಗಳು ಭಾಗವಹಿಸಲಿದ್ದಾರೆ ಎಂದು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಅರಬೈಲ್ ಶಿವರಾಮ ಹೆಬ್ಬಾರ್ ಅವರು ಮಾಹಿತಿ ನೀಡಿದ್ದಾರೆ.

ಸಮಾವೇಶದಲ್ಲಿ ಸುಮಾರು 25,000 ಜನರು ಭಾಗವಹಿಸುವ ನಿರೀಕ್ಷೆಯಿದೆ. ಅರ್ಹ ಫಲಾನುಭವಿಗಳನ್ನು ಗುರುತಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

50 ಲಕ್ಷ ಮೌಲ್ಯದ ಹಲವು ಯೋಜನೆಗಳಿಗೆ ಸಿಎಂ ಬೊಮ್ಮಾಯಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಫಲಾನುಭವಿಗಳಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com