ರಾಯಚೂರು ಜಿಲ್ಲೆಯ ಚುನಾವಣಾ ಐಕಾನ್ ಆಗಿ ನಿರ್ದೇಶಕ ಎಸ್ಎಸ್ ರಾಜಮೌಳಿ ಆಯ್ಕೆ

ರಾಯಚೂರು ಜಿಲ್ಲೆಗೆ ಚುನಾವಣಾ ರಾಯಭಾರಿಯಾಗಿ ಖ್ಯಾತ ನಿರ್ದೇಶಕ ಎಸ್.ಎಸ್ ರಾಜಮೌಳಿ ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಚಂದ್ರಶೇಖರ್ ನಾಯಕ್ ತಿಳಿಸಿದ್ದಾರೆ.
ಎಸ್ಎಸ್ ರಾಜಮೌಳಿ
ಎಸ್ಎಸ್ ರಾಜಮೌಳಿ

ರಾಯಚೂರು: ರಾಯಚೂರು ಜಿಲ್ಲೆಗೆ ಚುನಾವಣಾ ರಾಯಭಾರಿಯಾಗಿ ಖ್ಯಾತ ನಿರ್ದೇಶಕ ಎಸ್.ಎಸ್ ರಾಜಮೌಳಿ ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಚಂದ್ರಶೇಖರ್ ನಾಯಕ್ ತಿಳಿಸಿದ್ದಾರೆ.

ಮೂಲತಃ ರಾಯಚೂರಿನ ಮಾನ್ವಿ ತಾಲೂಕಿನವರಾದ ರಾಜಮೌಳಿ ಅವರು ಮತದಾನ ಜಾಗೃತಿ ಕುರಿತು ಚುನಾವಣಾ ಸ್ವೀಪ್ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ವೀಡಿಯೋ ಕ್ಲಿಪ್‍ಗಳ ಮೂಲಕ ಜಾಗೃತಿ ಮೂಡಿಸುತ್ತಾರೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ಚುನಾವಣಾ ಆಯೋಗ ಸೂಚಿಸಿದಂತೆ ರಾಜಮೌಳಿ ಅವರು ವಿಡಿಯೋ ಮೂಲಕ ಜನರಲ್ಲಿ ಜಾಗೃತಿ ಮೂಡಿಸಬೇಕು. ಇದರಲ್ಲಿ ಯಾವುದೇ ಪಕ್ಷಗಳಿಗೆ ಬೆಂಬಲಿಸುವಂತಹ ಸಂದೇಶ ಇರುವುದಿಲ್ಲ. ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸ್ಕ್ರೀನ್ ರೈಟರ್ ಹಾಗೂ ಚಿತ್ರಸಂಭಾಷಣೆಗಾರರನ್ನು ಆಯ್ಕೆ ಮಾಡಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com