ವಿಧಾನಸಭಾ ಚುನಾವಣೆ: ಕರ್ನಾಟಕಕ್ಕೆ ಚುನಾವಣಾ ಆಯೋಗದ ತಂಡ ಆಗಮನ; ಮೂರು ದಿನ ಸಿದ್ಧತೆಗಳ ಪರಿಶೀಲನೆ

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಸಿದ್ಧತೆಯನ್ನು ಪರಿಶೀಲಿಸಲು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನೇತೃತ್ವದ ಚುನಾವಣಾ ಆಯೋಗದ ಅಧಿಕಾರಿಗಳ ತಂಡ ಗುರುವಾರ ನಗರಕ್ಕೆ ಆಗಮಿಸಿತು.
ಕೇಂದ್ರ ಚುನಾವಣಾ ಆಯೋಗದ ಕಚೇರಿ
ಕೇಂದ್ರ ಚುನಾವಣಾ ಆಯೋಗದ ಕಚೇರಿ
Updated on

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಸಿದ್ಧತೆಯನ್ನು ಪರಿಶೀಲಿಸಲು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನೇತೃತ್ವದ ಚುನಾವಣಾ ಆಯೋಗದ ಅಧಿಕಾರಿಗಳ ತಂಡ ಗುರುವಾರ ನಗರಕ್ಕೆ ಆಗಮಿಸಿತು.

ಚುನಾವಣಾ ಆಯುಕ್ತರಾದ ಅನುಪ್ ಚಂದ್ರ ಪಾಂಡೆ ಮತ್ತು ಅರುಣ್ ಗೋಯೆಲ್ ಅವರನ್ನೊಳಗೊಂಡ ತಂಡ ಕರ್ನಾಟಕಕ್ಕೆ ಮೂರು ದಿನಗಳ ಭೇಟಿ ನೀಡಿದ್ದು, ಮೇ ವೇಳೆಗೆ ವಿಧಾನಸಭೆ ಚುನಾವಣೆ ನಡೆಯಲಿದೆ.

ರಾಜ್ಯ ರಾಜಧಾನಿ ತಲುಪಿದ ನಂತರ ತಂಡವು ಇಂದು ವಿಕಾಸ ಸೌಧದಲ್ಲಿ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ (ಸಿಇಒ) ಮನೋಜ್ ಕುಮಾರ್ ಮೀನಾ ಮತ್ತು ಇತರ ಅಧಿಕಾರಿಗಳೊಂದಿಗೆ ಸಭೆ ನಡೆಸಿತು. ಅಲ್ಲದೆ, ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಅವರ ಸಲಹೆ, ಅಭಿಪ್ರಾಯ ಮತ್ತು ದೂರುಗಳನ್ನು ಪಡೆಯಲು ಸಂವಾದ ನಡೆಸಲಿದೆ.

ತಂಡವು ಇಲ್ಲಿ 'ಒಳಗೊಳ್ಳುವ ಚುನಾವಣೆಗಳು ಮತ್ತು ಚುನಾವಣಾ ಸಮಗ್ರತೆ' ಕುರಿತ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸಲಿದೆ. ಇದರಲ್ಲಿ ವಿವಿಧ ಪ್ರಜಾಪ್ರಭುತ್ವ ರಾಷ್ಟ್ರಗಳ ಚುನಾವಣಾ ಆಯುಕ್ತರು ಭಾಗವಹಿಸಲಿದ್ದಾರೆ.

ಮುಂಬರುವ ಚುನಾವಣೆಗೆ ಸಿದ್ಧತೆ ನಡೆಸಿರುವ ಕುರಿತು ಚುನಾವಣಾ ಆಯೋಗವು ಮಾರ್ಚ್ 10 ರಂದು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಲಿದೆ.

ನಂತರ, ಮತದಾರರ ಜಾಗೃತಿಗಾಗಿ ಉದ್ದೇಶಿಸಲಾದ ಎಲ್ಇಡಿ ವಾಹನಗಳ ಉದ್ಘಾಟನೆಗೂ ಮುನ್ನ ಚುನಾವಣಾ ಆಯೋಗವು ಚುನಾವಣಾ ಪ್ರದರ್ಶನವನ್ನು ಉದ್ಘಾಟಿಸಲಿದೆ. ಚುನಾವಣಾ ಆಯುಕ್ತರು ಮಾರ್ಚ್ 11 ರಂದು ದೆಹಲಿಗೆ ಹಿಂತಿರುಗುವ ಮೊದಲು ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com