ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ: ಎಫ್‌ಐಆರ್ ದಾಖಲಿಸಲು ಅಧಿಕಾರಿಗಳಿಗೆ ತರಬೇತಿ ನೀಡಿ; ಸರ್ಕಾರಕ್ಕೆ ಹೈಕೋರ್ಟ್

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಪ್ರಕರಣಗಳ ಅಪರಾಧಗಳನ್ನು ದಾಖಲಿಸುವ ಸಂದರ್ಭದಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಚುನಾವಣಾ ವಿಚಕ್ಷಣ ದಳ(ಫ್ಲೇಯಿಂಗ್ ಸ್ಕ್ವಾಡ್)ಕ್ಕೆ ಅಗತ್ಯ ತರಬೇತಿ ನೀಡುವಂತೆ ಮುಖ್ಯ ಚುನಾವಣಾ ಆಯೋಗ, ರಾಜ್ಯ ಚುನಾವಣಾ ಆಯೋಗ, ಗೃಹ ಇಲಾಖೆ ಮತ್ತು ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಪ್ರಕರಣಗಳ ಅಪರಾಧಗಳನ್ನು ದಾಖಲಿಸುವ ಸಂದರ್ಭದಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಚುನಾವಣಾ ವಿಚಕ್ಷಣ ದಳ(ಫ್ಲೇಯಿಂಗ್ ಸ್ಕ್ವಾಡ್)ಕ್ಕೆ ಅಗತ್ಯ ತರಬೇತಿ ನೀಡುವಂತೆ ಮುಖ್ಯ ಚುನಾವಣಾ ಆಯೋಗ, ರಾಜ್ಯ ಚುನಾವಣಾ ಆಯೋಗ, ಗೃಹ ಇಲಾಖೆ ಮತ್ತು ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ತನ್ನ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು ಕೋರಿ ಎ.ಮಂಜು ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿರುವ ಹೈಕೋರ್ಟ್ ನ್ಯಾಯಪೀಠ, ಈ ನಿರ್ದೇಶನ ನೀಡಿದೆ.

ಚುನಾವಣಾ ಅಕ್ರಮಗಳ ಕುರಿತು ವಿಚಕ್ಷಣ ದಳ ಪೊಲೀಸರಿಗೆ ನೀಡುವ ದೂರಿಗೆ ಸಂಬಂಧಿಸಿದಂತೆ ಬಹುತೇಕ ಪ್ರಕರಣಗಳಲ್ಲಿ ಚುನಾವಣೆ ನಡೆಯುವ ವೇಳೆ ಔಪಚಾರಿಕವಾಗಿರುತ್ತವೆ. ಅಂತಿಮವಾಗಿ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳ ವಿರುದ್ಧ ಪೊಲೀಸರು ಬಿ. ರಿಪೋರ್ಟ್ ಸಲ್ಲಿಸುತ್ತಾರೆ. ಸೋತ ಅಭ್ಯರ್ಥಿಗಳ ವಿರುದ್ಧ ಆರೋಪ ಪಟ್ಟಿಯನ್ನು ಸಲ್ಲಿಸಿರುತ್ತಾರೆ. ಹೀಗಾಗಿ ಸೂಕ್ತ ತರಬೇತಿ ನೀಡಬೇಕು ಎಂದು ಸೂಚನೆ ನೀಡಿದೆ.

ಅಸಂಜ್ಞೆಯ ಕೇಸ್‍ಗಳಲ್ಲಿ ಮ್ಯಾಜಿಸ್ಟ್ರೇಟ್ ಅನುಮತಿ ಇಲ್ಲದೆ ಎಫ್‍ಐಆರ್ ದಾಖಲಿಸುವಂತಿಲ್ಲ ಎಂಬುದು ಪೊಲೀಸರಿಗೆ ಗೊತ್ತಿದ್ದರೂ ಈ ರೀತಿಯ ಘಟನೆಗಳು ನಡೆಯುತ್ತಿವೆ. ಐಪಿಸಿ 155ರ ಪ್ರಕಾರ ಅಸಂಜ್ಞೆಯ ಪ್ರಕರಣಗಳಲ್ಲಿ ಮ್ಯಾಜಿಸ್ಟ್ರೇಟ್‍ನಿಂದ ಅನುಮತಿ ಪಡೆದ ಪ್ರಕರಣಗಳ ತನಿಖೆ, ವಿಚಾರಣೆಯ ಕಾರ್ಯವಿಧಾನದಲ್ಲಿ ದೊಡ್ಡ ಮಟ್ಟದ ಉಲ್ಲಂಘನೆಗಳು ನಡೆಯುತ್ತಿರುತ್ತವೆ ಎಂದು ನ್ಯಾಯಪೀಠವು ಅಭಿಪ್ರಾಯಪಟ್ಟಿದೆ.

ಸಂಜ್ಞೆಯೇತರ ಅಪರಾಧ ಪತ್ತೆಯಾದಲ್ಲಿ ಮಾಹಿತಿದಾರರು ಸಿಆರ್‍ಪಿಸಿ ಸೆಕ್ಷನ್ 152(2)ರಲ್ಲಿ ಮ್ಯಾಜಿಸ್ಟ್ರೇಟ್‍ರನ್ನು ಸಂಪರ್ಕಿಸಿ ಅನುಮತಿ ಪಡೆದುಕೊಳ್ಳಬಹುದು. ಇದಕ್ಕಾಗಿ ಮ್ಯಾಜಿಸ್ಟ್ರೇಟ್ 155(1) ಮನವಿ ಸಲ್ಲಿಸಿ ಅನುಮತಿ ಪಡೆದುಕೊಳ್ಳಬೇಕು. ಬಳಿಕ ಮ್ಯಾಜಿಸ್ಟ್ರೇಟ್ ವಿವೇಚನೆ ಬಳಸಿ ಅನುಮತಿ ಕೋಡಬೇಕು. ಆ ನಂತರ ಎಫ್‍ಐಆರ್ ದಾಖಲಿಸಬೇಕು. ಐಪಿಸಿ ಸೆಕ್ಷನ್ 188 ಸಂಜ್ಞೆಯ ಅಪರಾಧ ಆದರೂ ದೂರುದಾರರು (ವಿಚಕ್ಷಣಾಧಿಕಾರಿಗಳು) ಸಿಆರ್‍ಪಿಸಿ 154(1)ರ ಅಡಿಯಲ್ಲಿ ಪೊಲೀಸರಿಗೆ ದೂರು ನೀಡುವಂತಿಲ್ಲ.

ಆದರೆ, ಪಂಚನಾಮೆ ಸಿದ್ಧತೆ ಪಡೆಸಿ ದೂರುದಾರರು ಸಾಕ್ಷ್ಯಗಳ ಸಮ್ಮುಖದಲ್ಲಿ ದಾಖಲೆಗಳನ್ನು ವಶಪಡಿಸಿಕೊಳ್ಳಬಹುದು. ಇದರ ಆಧಾರದ ಮೇಲೆ ಚುನಾವಣಾ ಆಯೋಗ ಅನುಮತಿ ಪಡೆದು ಸಿಆರ್‍ಪಿಸಿ 200(2)(ಡಿ) ಅಡಿ ಮ್ಯಾಜಿಸ್ಟ್ರೇಟ್ ಮುಂದೆ ದೂರು ದಾಖಲಿಸಬೇಕು ಎಂದು ನಿರ್ದೇಶನ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com