ಲೈಂಗಿಕ ದೌರ್ಜನ್ಯ ವಿಡಿಯೋ ಬ್ಲಾಕ್ ಮೇಲ್, ಸುಲಿಗೆ ಪ್ರಕರಣ: ಆರು ಮಂದಿ ಬಂಧನ

ಕ್ಷಿಪ್ರ ಕಾರ್ಯಾಚರಣೆ ನಡೆಸಿರುವ ಪೊಲೀಸರು, ನಗರದ 39 ವರ್ಷದ ಖಾಸಗಿ ಸಂಸ್ಥೆ ಉದ್ಯೋಗಿಯಿಂದ 3 ಲಕ್ಷ ರೂ. ಸುಲಿಗೆ ಮಾಡಿದ ಪ್ರಕರಣದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಆರು ಜನರನ್ನು ಬಂಧಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು:  ಕ್ಷಿಪ್ರ ಕಾರ್ಯಾಚರಣೆ ನಡೆಸಿರುವ ಪೊಲೀಸರು, ನಗರದ 39 ವರ್ಷದ ಖಾಸಗಿ ಸಂಸ್ಥೆ ಉದ್ಯೋಗಿಯಿಂದ 3 ಲಕ್ಷ ರೂ. ಸುಲಿಗೆ ಮಾಡಿದ ಪ್ರಕರಣದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಆರು ಜನರನ್ನು ಬಂಧಿಸಿದ್ದಾರೆ.

ಮುನೇಕೊಳಲು ನಿವಾಸಿ ಸಂತ್ರಸ್ತನಿಗೆ ಕರೆ ಮಾಡಿರುವ ಅಪರಿಚಿತ ಮಹಿಳೆ, ಆಕೆಯೊಂದಿಗೆ ಅಕ್ರಮ ಸಂಬಂಧ ಹೊಂದಲು ಆಸಕ್ತಿ ಇದೆಯೇ ಎಂದು ಕೇಳಿದ್ದಾಳೆ.  ಆನ್‌ಲೈನ್ ಡೇಟಿಂಗ್ ಆ್ಯಪ್‌ನ ಚಂದಾದಾರರಾಗಿದ್ದ ವ್ಯಕ್ತಿ,  ಆಕೆಯ ಎಲೆಕ್ಟ್ರಾನಿಕ್ಸ್ ಸಿಟಿ ಬಳಿಯ ರಾಯಲ್ ಶೆಲ್ಟರ್ಸ್ ಲೇಔಟ್‌ನಲ್ಲಿರುವ ಮನೆಗೆ ತೆರಳಿದ್ದಾನೆ. ಈ ಸಂದರ್ಭದಲ್ಲಿ ಆಕೆಯ ಮೂವರು ಸಹಚರರು ಮನೆಗೆ ನುಗ್ಗಿ  ಬಟ್ಟೆ ಬಿಚ್ಚುವಂತೆ ಒತ್ತಾಯಿಸಿದ್ದಾರೆ.

ಮಹಿಳೆಯೊಂದಿಗೆ ಪೋಸ್ ನೀಡುವಂತೆ ಹೇಳಿ ವಿಡಿಯೋ ಚಿತ್ರೀಕರಿಸಿದ್ದಾರೆ. ಹಣ ನೀಡದಿದ್ದರೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ನಂತರ ಸಂತ್ರಸ್ತ ಪುರುಷನಿಂದ  3 ಲಕ್ಷ ರೂಪಾಯಿ ಸುಲಿಗೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. 

ಮಾರ್ಚ್ 3 ರಂದು ಈ ಘಟನೆ ನಡೆದಿದ್ದು, ಆರೋಪಿಗಳು ಹೆಚ್ಚಿನ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಲು ಪ್ರಾರಂಭಿಸಿದಾಗ ದೌರ್ಜನ್ಯಕ್ಕೊಳಗಾದ ವ್ಯಕ್ತಿ ಮಾರ್ಚ್ 7 ರಂದು ಪೊಲೀಸರಿಗ ದೂರು ದಾಖಲಿಸಿದ್ದಾರೆ. ಈ ಸಂಬಂಧ ಬೇಗೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹೆಚ್ಚಿನ ತನಿಖೆಗಳು ನಡೆಯುತ್ತಿವೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com