ಎದೆನೋವಿನಿಂದ ಶಾಸಕ ಎನ್ ಮಹೇಶ್ ಆಸ್ಪತ್ರೆಗೆ ದಾಖಲು 

ಮಾಜಿ ಸಚಿವ, ಕೊಳ್ಳೇಗಾಲದ ಕ್ಷೇತ್ರದ ಶಾಸಕ ಎನ್ ಮಹೇಶ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 
ಎನ್ ಮಹೇಶ್
ಎನ್ ಮಹೇಶ್

ಮೈಸೂರು: ಮಾಜಿ ಸಚಿವ, ಕೊಳ್ಳೇಗಾಲದ ಕ್ಷೇತ್ರದ ಶಾಸಕ ಎನ್ ಮಹೇಶ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಹೇಶ್ ಅವರಿಗೆ ಆ್ಯಂಜಿಯೋಗ್ರಾಮ್ ಮಾಡಲಾಗಿದೆ. ಮಹೇಶ್ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಸದ್ಯಕ್ಕೆ ಆಸ್ಪತ್ರೆಯಲ್ಲಿಯೇ ವಿಶ್ರಾಂತಿ ಪಡೆಯಲು ವೈದ್ಯರು ಸಲಹೆ ನೀಡಿದ್ದಾರೆ. 

ಮಹೇಶ್ ಪುತ್ರರು ಈ ಬಗ್ಗೆ ಮಾಹಿತಿ ನೀಡಿದ್ದು, ನಮ್ಮ ತಂದೆ ಆರೋಗ್ಯವಾಗಿದ್ದಾರೆ. ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಬಂದೆವು. ವೈದ್ಯರು ಆ್ಯಂಜಿಯೋಗ್ರಾಮ್ ಮಾಡಿದ್ದು, ಯಾವುದೇ ಸಮಸ್ಯೆಯಿಲ್ಲ ಎಂದು ಹೇಳಿರುವುದಾಗಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com