ರಾಮಾಂಜನಪ್ಪ - ಶಾಂತಮ್ಮ
ರಾಜ್ಯ
ತುಮಕೂರು: ಪತ್ನಿ, ಮೂವರು ಹೆಣ್ಣು ಮಕ್ಕಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪಾಪಿ ಪತಿ
ತನ್ನ ಪತ್ನಿ ಅನೈತಿಕ ಸಂಬಂಧ ಹೊಂದಿರಹುದು ಎಂದು ಅನುಮಾನಗೊಂಡ ಪತಿ, ಪತ್ನಿ ಮತ್ತು ಮೂವರು ಹೆಣ್ಣು ಮಕ್ಕಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಅಮಾನವೀಯ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ...
ತುಮಕೂರು: ತನ್ನ ಪತ್ನಿ ಅನೈತಿಕ ಸಂಬಂಧ ಹೊಂದಿರಹುದು ಎಂದು ಅನುಮಾನಗೊಂಡ ಪತಿ, ಪತ್ನಿ ಮತ್ತು ಮೂವರು ಹೆಣ್ಣು ಮಕ್ಕಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಅಮಾನವೀಯ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಮುದ್ದನೇರಳೆಕೆರೆ ಗ್ರಾಮದಲ್ಲಿ ನಡೆದಿದೆ.
ಪಾಪಿ ಪತಿ, ತನ್ನ ಪತ್ನಿ ಮತ್ತು ಮೂವರು ಹೆಣ್ಣು ಮಕ್ಕಳು ಮಲಗಿದ್ದ ವೇಳೆ ಅವರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ, ಮನೆಗೆ ಬೀಗ ಹಾಕಿ ಪರಾರಿಯಾಗಿದ್ದಾನೆ. ರಾಮಾಂಜನಪ್ಪ ಈ ಕೃತ್ಯ ಎಸಗಿದ್ದು ಪತ್ನಿ ಶಾಂತಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಅಕ್ಷಯ(18) ಅಕ್ಷತಾ(13) ಹಾಗೂ ಅಮೃತಾ(10) ಗಾಯಗೊಂಡಿದ್ದು, ಮೂವರನ್ನು ತುಮಕೂರಿನ ಜಿಲ್ಲಾ ಆಸ್ಪತ್ರಗೆ ದಾಖಲಿಸಲಾಗಿತ್ತು. ಈ ಪೈಕಿ ಗಂಭೀರ ಗಾಯಗೊಂಡ ಒಬ್ಬಳನ್ನು ಬೆಂಗಳೂರಿನ ಆಸ್ಪತ್ರಗೆ ದಾಖಲಿಸಲಾಗಿದೆ.
ಈ ಸಂಬಂಧ ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ