ನನ್ನ ಆರೋಗ್ಯದ ಕಾಳಜಿ ಮಾಡಲೆಂದೇ ಮಿತ್ರ ಪ್ರಹ್ಲಾದ ಜೋಶಿ, ಗಾಜಿನ ಪೆಟ್ಟಿಗೆಯಲ್ಲಿ ಪೇಡಾ ಇಟ್ಟು ಕೊಟ್ಟಿದ್ದಾರೆ: ಮೋದಿ

ನನ್ನ ಆರೋಗ್ಯದ ಕಾಳಜಿ ಮಾಡಲೆಂದೇ ಮಿತ್ರ ಪ್ರಹ್ಲಾದ ಜೋಶಿ, ಗಾಜಿನ ಪೆಟ್ಟಿಗೆಯಲ್ಲಿ ಪೇಡಾ ಇಟ್ಟು ಕೊಟ್ಟಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮೋದಿಗೆ ಧಾರಾವಾಡ ಪೇಡಾ ಉಡುಗೊರೆ ನೀಡಿದ ಸಿಎಂ
ಮೋದಿಗೆ ಧಾರಾವಾಡ ಪೇಡಾ ಉಡುಗೊರೆ ನೀಡಿದ ಸಿಎಂ

ಧಾರವಾಡ: ನನ್ನ ಆರೋಗ್ಯದ ಕಾಳಜಿ ಮಾಡಲೆಂದೇ ಮಿತ್ರ ಪ್ರಹ್ಲಾದ ಜೋಶಿ, ಗಾಜಿನ ಪೆಟ್ಟಿಗೆಯಲ್ಲಿ ಪೇಡಾ ಇಟ್ಟು ಕೊಟ್ಟಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಧಾರವಾಡ ಪೇಡಾ ಒಮ್ಮೆ ಸವಿದರೆ ಮತ್ತೊಮ್ಮೆ ತಿನ್ನಬೇಕೆನಿಸುತ್ತದೆ. ಸಿಹಿ ತಿನ್ನುವ ಆಸೆಗೆ ಮಿತಿ ಹೇರಲು, ಮಿತ್ರ ಪ್ರಹ್ಲಾದ ಜೋಶಿ, ಗಾಜಿನ ಪೆಟ್ಟಿಗೆಯಲ್ಲಿ ಇಟ್ಟು ಕೊಟ್ಟಿದ್ದಾರೆ ಎಂದು ಪೇಡ ಸ್ವೀಕರಿಸಿ, ನಗೆ ಚಟಾಕಿ ಹಾರಿಸಿದರು. 

ಧಾರವಾಡದ ಕರಕುಶಲ ವಸ್ತುಗಳ ಉಡುಗೊರೆಯನ್ನೇ ಪ್ರಧಾನಿಗಳಿಗೆ ನೀಡಲಾಯಿತು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು  ಕಸೂತಿ ಶಾಲನ್ನು ಹೊದಿಸಿ, ಧಾರವಾಡದ ಪೇಡ ಗಾಜಿನ ಪೆಟ್ಟಿಗೆಯಲ್ಲಿಟ್ಟು ನೀಡಿ ಅಭಿನಂದಿಸಿದರು.

ಧಾರವಾಡ ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಎಂದು ಪ್ರಧಾನಿ ಹೇಳಿದರು. ಪ್ರಧಾನಿಯವರ ಧಾರವಾಡ ರ್ಯಾಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕೂಡ ಉಪಸ್ಥಿತರಿದ್ದರು. ನೂತನ ಐಐಟಿ ಕ್ಯಾಂಪಸ್ ಉದ್ಘಾಟನೆಗೆ ಪ್ರಧಾನಿ ಮೋದಿ ಧಾರವಾಡಕ್ಕೆ ಆಗಮಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com