ಅನುಮತಿ ಪಡೆಯದೆ ಅಧಿಕಾರಿಗಳ ವರ್ಗಾವಣೆ: ಸರ್ಕಾರದ ನಡೆಗೆ ಚುನಾವಣಾ ಆಯೋಗ ಕೆಂಡಾಮಂಡಲ!

ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಅನುಮತಿ ಇಲ್ಲದೆ ಚುನಾವಣಾ ಸಂಬಂಧಿತ ಕಾರ್ಯಗಳಲ್ಲಿ ನಿರತರಾಗಿರುವ ಅಧಿಕಾರಿಗಳನ್ನು ವರ್ಗಾವಣೆ ಮಾಡುತ್ತಿರುವ ಸರ್ಕಾರದ ವಿರುದ್ಧ ಚುನಾವಣಾ ಆಯೋಗ ತೀವ್ರ ಅಸಮಾಧಾನ ಹೊರಹಾಕಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಅನುಮತಿ ಇಲ್ಲದೆ ಚುನಾವಣಾ ಸಂಬಂಧಿತ ಕಾರ್ಯಗಳಲ್ಲಿ ನಿರತರಾಗಿರುವ ಅಧಿಕಾರಿಗಳನ್ನು ವರ್ಗಾವಣೆ ಮಾಡುತ್ತಿರುವ ಸರ್ಕಾರದ ವಿರುದ್ಧ ಚುನಾವಣಾ ಆಯೋಗ ತೀವ್ರ ಅಸಮಾಧಾನ ಹೊರಹಾಕಿದೆ.

ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾಗೆ ಮುಖ್ಯ ಚುನಾವನಾ ಆಯುಕ್ತ  ಮನೋಜ್ ಕುಮಾರ್ ಮೀನಾ ಅವರು ಪತ್ರ ಬರೆದಿದ್ದು, ಆಯೋಗ ಅನುಮತಿ ಇಲ್ಲದೆ ಅಧಿಕಾರಿಗಳನ್ನು ವರ್ಗಾವಣೆ ಮಾಡದಂತೆ ಸೂಚಿಸಿದ್ದಾರೆ.

ರಾಜ್ಯದಲ್ಲಿ ಯಾವಾಗ ಬೇಕಾದರೂ ಚುನಾವಣೆ ಘೋಷಣೆಯಾಗಬಹುದು. ಚುನಾವಣಾ ಆಯೋಗ ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ಪರಿಸ್ಥಿತಿ ಹೀಗಿರುವಾಗ ಈ ಸಂದರ್ಭದಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಹಲವು ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಮುಖ್ಯ ಚುನಾವಣಾಧಿಕಾರಿಗಳ ಅನುಮತಿ ಪಡೆಯದೆ ವರ್ಗಾವಣೆ ಮಾಡಲಾಗಿದೆ. ಹೀಗಾಗಿ ಆಯೋಗದ ಅನುಮತಿ ಪಡೆಯದೆಯೇ ಅಧಿಕಾರಿಗಳನ್ನು ವರ್ಗಾವಣೆ ಮಾಡಬಾರದು ಎಂದು ಸೂಚಿಸಿರುವುದು ಪತ್ರದಲ್ಲಿ ತಿಳಿದುಬಂದಿದೆ.

ವರ್ಗಾವಣೆಗೆ ಮುಖ್ಯ ಚುನಾವಣಾ ಆಯುಕ್ತರ ಅನುಮತಿ ಪಡೆಯುವಂತೆ ಮಾರ್ಚ್ 8 ರಂದೇ ಪತ್ರ ಬರೆದಿದ್ದವು. ಹೀಗಿದ್ದರೂ ಹಲವು ಇಲಾಖೆಗಳು ಅನುಮತಿ ಇಲ್ಲದೆಯೇ ವರ್ಗಾವಣೆ ಮಾಡಿವೆ. ಅಧಿಕಾರಿಗಳು ಮತ್ತು ಇತರ ನೌಕರರನ್ನು ವರ್ಗಾವಣೆ ಮಾಡುವ ಮೊದಲು ಆಯೋಗದ ಅನುಮತಿ ಪಡೆಯುವಂತೆ ವಿವಿಧ ಇಲಾಖೆಗಳ ಮುಖ್ಯಸ್ಥರು ಮತ್ತು ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com