ಮರಳು ಗಣಿಗಾರಿಕೆಯಿಂದ ರೈಲ್ವೇ ಸೇತುವೆ ಮೇಲೆ ಪರಿಣಾಮ: ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ

ಉದ್ಯಾವರ ಸೇತುವೆ ಸಮೀಪದ ಪಾಪನಾಶಿನಿ ಹೊಳೆಯ ತೀರದಲ್ಲಿ ಪ್ರಾಕೃತಿಕವಾಗಿ ಸಮೃದ್ಧವಾಗಿರುವ ಪುಟ್ಟ ಗ್ರಾಮ ಉದ್ಯಾವರ ಕುದ್ರುವಿನಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಗೆ ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ,
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಉಡುಪಿ: ಉದ್ಯಾವರ ಸೇತುವೆ ಸಮೀಪದ ಪಾಪನಾಶಿನಿ ಹೊಳೆಯ ತೀರದಲ್ಲಿ ಪ್ರಾಕೃತಿಕವಾಗಿ ಸಮೃದ್ಧವಾಗಿರುವ ಪುಟ್ಟ ಗ್ರಾಮ ಉದ್ಯಾವರ ಕುದ್ರುವಿನಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಗೆ ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ,

ಅಕ್ರಮ ಮರಳು ಗಣಿಗಾರಿಕೆಯಿಂದಾಗಿ ಪಾಪನಾಶಿನಿ ಹೊಳೆಗೆ ಅಡ್ಡಲಾಗಿರುವ ಕೊಂಕಣ ರೈಲ್ವೆ ಸೇತುವೆ ಕೂಡ ಕುಸಿಯಬಹುದು ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಈ ಅಕ್ರಮ ಮರಳು ದಂಧೆ ವಿರುದ್ಧ ಸ್ಥಳೀಯ ಸಂಸ್ಥೆಗಳು ಹಾಗೂ ಜನರು ಪ್ರತಿಭಟನೆ ನಡೆಸಿದ್ದೇ ಆದರೆ, ಬೆಂಬಲಿಸುವುದಾಗಿ ಹೇಳಿದ್ದಾರೆ.

ಉದ್ಯಾವರ ಕುದ್ರು ರಾಷ್ಟ್ರೀಯ ಹೆದ್ದಾರಿ 66ಕ್ಕೆ ಸಮೀಪದಲ್ಲಿರುವ ರಮಣೀಯ ದ್ವೀಪವಾಗಿದ್ದು, ಆರು ತಿಂಗಳ ಹಿಂದಿನಿಂದಲೂ ಈ ಪ್ರದೇಶದಲ್ಲಿ ಮರಳು ಮಾಫಿಯಾ ನಡೆಯುತ್ತಿದೆ. ದ್ವೀಪದಲ್ಲಿ ಒಟ್ಟು 22 ಮನೆಗಳಿದ್ದು, ಅಲ್ಲಿ ವಾಸಿಸುವ ಜನರು ಮಣ್ಣಿನ ಸವೆತದ ಭೀತಿಯನ್ನು ಎದುರಿಸುತ್ತಿದ್ದಾರೆ.

ಅಕ್ರಮ ಮರಳುಗಾರಿಕೆ ತಡೆಯಲು ಅಧಿಕಾರಿಗಳಿಗೆ ಹಲವು ಬಾರಿ ದೂರಿ ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಶ್ರೀಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ನಡುವೆ ಉದ್ಯಾವರ ಜಿ.ಪಂ.ಅಧ್ಯಕ್ಷ ರಾಧಾಕೃಷ್ಣ ಬೊಳ್ಜೆ ಅವರಿಗೆ ಕ್ರಮ ಕೈಗೊಳ್ಳುವಂತೆ ಹಲವು ದೂರುಗಳು ಬಂದಿದ್ದು, ಅವುಗಳನ್ನು ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ರವಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com