ನಾಳೆ ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮನ: ದಿನವಿಡೀ ಕಾರ್ಯಕ್ರಮ; ವೈಟ್ ಫೀಲ್ಡ್ ಮೆಟ್ರೊ ಉದ್ಘಾಟನೆ

ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಮಾರ್ಚ್ 25ರಂದು ಶನಿವಾರ ರಾಜ್ಯಕ್ಕೆ ಆಗಮಿಸಲಿದ್ದಾರೆ. ವೈಟ್‌ಫೀಲ್ಡ್ ಕಾಡುಗೋಡಿ ಮೆಟ್ರೋ ನಿಲ್ದಾಣದಲ್ಲಿ 13.71 ಕಿಮೀ ಮೆಟ್ರೋ ಮಾರ್ಗವನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಸಂಗ್ರಹ ಚಿತ್ರ
ಪ್ರಧಾನಿ ನರೇಂದ್ರ ಮೋದಿಯವರ ಸಂಗ್ರಹ ಚಿತ್ರ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಮಾರ್ಚ್ 25ರಂದು ಶನಿವಾರ ರಾಜ್ಯಕ್ಕೆ ಆಗಮಿಸಲಿದ್ದಾರೆ. ನಾಳೆ ಬೆಳಗ್ಗೆ 10.45ಕ್ಕೆ ಚಿಕ್ಕಬಳ್ಳಾಪುರದಲ್ಲಿ ಶ್ರೀ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಉದ್ಘಾಟನೆ, ಮಧ್ಯಾಹ್ನ 1 ಗಂಟೆಗೆ ವೈಟ್‌ಫೀಲ್ಡ್‌ನಿಂದ (ಕಾಡುಗೋಡಿ) ಕೃಷ್ಣರಾಜಪುರದ ನಮ್ಮ ಮೆಟ್ರೊ ಮಾರ್ಗದ ಮೂಲಕ ಮೆಟ್ರೊದಲ್ಲಿ ಸಂಚರಿಸಿ ಸಂಜೆ ದಾವಣಗೆರೆಯಲ್ಲಿ ಬಿಜೆಪಿ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.

ವೈಟ್‌ಫೀಲ್ಡ್ ಕಾಡುಗೋಡಿ ಮೆಟ್ರೋ ನಿಲ್ದಾಣದಲ್ಲಿ 13.71 ಕಿಮೀ ಮೆಟ್ರೋ ಮಾರ್ಗವನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಶ್ರೀ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯು ಹೊಸ ಅವಕಾಶಗಳನ್ನು ಪಡೆಯಲು ಮತ್ತು ಈ ಪ್ರದೇಶದಲ್ಲಿ ಕೈಗೆಟಕುವ ದರದಲ್ಲಿ ಆರೋಗ್ಯ ಸೇವೆಯನ್ನು ಪಡೆಯಲು ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಉಪಕ್ರಮವಾಗಿದೆ.

ಸಂಚಾರ ಬದಲಾವಣೆ: ವೈಟ್ ಫೀಲ್ಡ್ ಮೆಟ್ರೊ ನಿಲ್ದಾಣ ಉದ್ಘಾಟನೆ ಹಿನ್ನೆಲೆಯಲ್ಲಿ ವೈಟ್ ಫೀಲ್ಡ್, ಕೆಆರ್ ಪುರಂ ಸುತ್ತಮುತ್ತ ಸಂಚಾರ ಬದಲಾವಣೆ ಮಾಡಲಾಗಿದೆ. 

ರಾಜ್ಯದೆಲ್ಲೆಡೆ ಮೋದಿ ಮೇನಿಯಾ ಶುರುವಾಗಿದೆ. ವಿಜಯ ಸಂಕಲ್ಪ ಯಾತ್ರೆ ರಾಜ್ಯದ ನಾಲ್ಕು ಭಾಗಗಳಲ್ಲಿ ನಡೆಯಿತು.‌ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆರಂಭಿಸಿದ ವಿಜಯ ಸಂಕಲ್ಪ ಯಾತ್ರೆ ನಾಲ್ಕು ದಿಕ್ಕುಗಳಲ್ಲಿ ಮುಗಿದು ದಾವಣಗೆರೆಯಲ್ಲಿ ಸಮಾರೋಪ ಕಾರ್ಯಕ್ರಮ ನಡೆಯುತ್ತಿದೆ. ಅಂದಾಜು 10 ಲಕ್ಷ ಕಾರ್ಯಕರ್ತರು ಸೇರುವ ನಿರೀಕ್ಷೆ ಇದೆ ಎಂದು ಸಂಸದ ಜಿಎಂ ಸಿದ್ದೇಶ್ವರ ಹೇಳಿದ್ದಾರೆ. 

ಮೋದಿಯವರು ಈ ಕಾರ್ಯಕ್ರಮದಲ್ಲಿ ಜನರ ಮಧ್ಯೆ ಹೋಗುತ್ತಾರೆ. ಅದಕ್ಕಾಗಿ ವಿಶೇಷ ರಸ್ತೆ ವ್ಯವಸ್ಥೆ ಮಾಡಿದ್ದೇವೆ. ಒಟ್ಟು 8 ಜಿಲ್ಲೆ ಸೇರಿದಂತೆ ರಾಜ್ಯದ ಮೂಲೆ‌ ಮೂಲೆಯಿಂದ 10 ಲಕ್ಷ ಕಾರ್ಯಕರ್ತರು ಬರುತ್ತಾರೆ. ದಾವಣಗೆರೆಯಿಂದಲೇ  3 ಲಕ್ಷ ಕಾರ್ಯಕರ್ತರು ಬರುತ್ತಾರೆ. ಈ ಕಾರ್ಯಕ್ರಮದಲ್ಲಿ  ಕಾರ್ಯಕರ್ತರು ಮೋದಿಯವರನ್ನು ಬಹಳ ಹತ್ತಿರದಿಂದ ನೋಡುವ ವ್ಯವಸ್ಥೆ ಮಾಡಲಾಗಿದೆ. ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com