ರಾಜ್ಯದಲ್ಲಿ ಪ್ರತಿಷ್ಟಿತ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ ಸ್ಥಾಪನೆ; ಒಡಂಬಡಿಕೆಗೆ ಸಹಿ

ರಾಷ್ಟ್ರೀಯ ರಕ್ಷಾ ವಿಶ್ವ ವಿದ್ಯಾಲಯದ ಕರ್ನಾಟಕ ಅಧ್ಯಯನ ಕೇಂದ್ರವನ್ನು  ಶಿವಮೊಗ್ಗ ನಗರದಲ್ಲಿ ಸ್ಥಾಪಿಸಲು ಕರ್ನಾಟಕ ಸರಕಾರ ಹಾಗೂ ರಾಷ್ಟ್ರೀಯ ರಕ್ಷಾ ವಿಶ್ವ ವಿದ್ಯಾಲಯ ಒಡಂಬಡಿಕೆ ಮಾಡಿಕೊಂಡಿವೆ.
ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಅಮಿತ್ ಶಾ, ಸಿಎಂ ಬೊಮ್ಮಾಯಿ ಮತ್ತಿತರರು
ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಅಮಿತ್ ಶಾ, ಸಿಎಂ ಬೊಮ್ಮಾಯಿ ಮತ್ತಿತರರು
Updated on

ಬೆಂಗಳೂರು: ರಾಷ್ಟ್ರೀಯ ರಕ್ಷಾ ವಿಶ್ವ ವಿದ್ಯಾಲಯದ ಕರ್ನಾಟಕ ಅಧ್ಯಯನ ಕೇಂದ್ರವನ್ನು  ಶಿವಮೊಗ್ಗ ನಗರದಲ್ಲಿ ಸ್ಥಾಪಿಸಲು ಕರ್ನಾಟಕ ಸರಕಾರ ಹಾಗೂ ರಾಷ್ಟ್ರೀಯ ರಕ್ಷಾ ವಿಶ್ವ ವಿದ್ಯಾಲಯ ಒಡಂಬಡಿಕೆ ಮಾಡಿಕೊಂಡಿವೆ.

ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಶ್ರೀ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ,  ಗೃಹ ಸಚಿವಆರಗ ಜ್ಞಾನೇಂದ್ರ ರವರ ಉಪಸ್ಥಿತಿಯಲ್ಲಿ, ವಿಶ್ವ ವಿದ್ಯಾಲಯದ ಉಪಕುಲಪತಿ ಬಿಮಲ್ ಎನ್ ಪಟೇಲ್ ಹಾಗೂ ರಾಜ್ಯ ಅಪರ ಮುಖ್ಯ ಕಾರ್ಯದರ್ಶಿ  ರಜನೀಶ್ ಗೋಯಲ್ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಲಾಯಿತು. ಈ ಮೂಲಕ ದಕ್ಷಿಣ ಭಾರತದಲ್ಲಿ, ರಕ್ಷಾ ವಿಶ್ವ ವಿದ್ಯಾಲಯದ ಅಧ್ಯಯನ ಕೇಂದ್ರ ಹೊಂದಿದ ಮೂರನೇ ರಾಜ್ಯ ಕರ್ನಾಟಕವಾಗಿದೆ. 

ನಾಡಿನ ಯುವ ಜನತೆಗೆ ಭದ್ರತೆ ಹಾಗೂ ಪೊಲೀಸ್ ಸೇವೆಗಳ ಕ್ಷೇತ್ರದಲ್ಲಿ, ಅತ್ಯಾಧುನಿಕ ತರಭೇತಿ, ಶಿಕ್ಷಣ, ಸಂಶೋಧನೆ ಇತ್ಯಾದಿ ಚಟುವಟಿಕೆ ಹಮ್ಮಿಕೊಳ್ಳಲು ಹಾಗೂ ಈ ಕ್ಷೇತ್ರದಲ್ಲಿ ಅಗತ್ಯವಾಗಿ ಬೇಕಾಗಿದ್ದ "ಮಾನವ ಸಂಪನ್ಮೂಲ" ವನ್ನು ಸೃಜಿಸಲು ಈ ವಿಶ್ವವಿದ್ಯಾಲಯ ಮಹತ್ವದ ಕಾಣಿಕೆ ನೀಡಲಿದೆ ಎಂದು ಗೃಹ ಸಚಿವಆರಗ ಜ್ಞಾನೇಂದ್ರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗ ದಲ್ಲಿ ಸ್ಥಾಪಿತ ವಾಗಲಿರುವ ಪ್ರತಿಷ್ಠಿತ ರಾಷ್ಟ್ರೀಯ ರಕ್ಷಾ ವಿಶ್ವ ವಿದ್ಯಾಲಯ ಎಂಟು ಎಕರೆ ಪ್ರದೇಶದಲ್ಲಿ ಪ್ರಸ್ತುತ, ಕೇಂದ್ರೀಯ ವಿದ್ಯಾಲಯ ದಲ್ಲಿರುವ ಸುಸಜ್ಜಿತ ಕಟ್ಟಡಗಳಲ್ಲಿ ರಕ್ಷಾ ವಿಶ್ವ ವಿದ್ಯಾಲಯದ ಪೀಠ ಕಾರ್ಯ ನಿರ್ವಹಿಸಲಿದ್ದು, ಪ್ರಸ್ತುತ ಶೈಕ್ಷಣಿಕ ವರ್ಷದಿಂದಲೇ, ಕಾರ್ಯಾರಂಭ ಮಾಡಲಿದೆ, ಎಂದು  ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ರಾಜ್ಯದ ರಕ್ಷಾ ವಿಶ್ವ ವಿದ್ಯಾಲಯದ ಕೇಂದ್ರವು, ರಕ್ಷಣಾ ವಲಯಕ್ಕೆ ಸಂಬಂಧಿಸಿದಂತೆ ಶಿಕ್ಷಣ, ಅಧ್ಯಯನ ಕೇಂದ್ರವಾಗಿ ಕಾರ್ಯವನ್ನು ನಿರ್ವಹಿಸುವಲ್ಲದೆ ಪೊಲೀಸ್ ಇಲಾಖೆಗೆ  ವಿವಿಧ ಹುದ್ದೆಗಳಿಗೆ ಸೆರಾ ಬಯಸುವ ಅಭ್ಯರ್ಥಿಗಳಿಗೆ, ತರಭೇತಿ ಹಾಗೂ ಕೋಚಿಂಗ್ ಕೇಂದ್ರವಾಗಿಯೂ ಕಾರ್ಯ ನಿರ್ವಹಿಸಲಿದೆ.

ಶಿವಮೊಗ್ಗದ ರಕ್ಷಾ ವಿಶ್ವ ವಿದ್ಯಾಲಯದ ಕೇದ್ರವು, ರಕ್ಷಣಾ ವಲಯಕ್ಕೆ ಸಂಬಂಧಿಸಿದಂತಹ ವಿವಿಧ ವಿಷಯಗಳ ಶಿಕ್ಷಣ ಪ್ರದಾನಕ್ಕೆ ಸಂಬಂಧಿಸಿದಂತೆ, ವಿಶ್ವ ಮಟ್ಟದ ಕೇಂದ್ರವಾಗಿ ಗುರುತಿಸಿಕೊಳ್ಳಲಿದೆ ಹಾಗೂ ಇಂತಹ ಕೇಂದ್ರವು, ರಾಜ್ಯದ, ಶಿವಮೊಗ್ಗ ಜಿಲ್ಲೆಗೆ ಮಂಜೂರಾತಿ ನೀಡಿದ ಕೇಂದ್ರ ಗೃಹ ಇಲಾಖೆ ಸಚಿವ ಅಮಿತ್  ಶಾ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com