ಸರ ಕಸಿದುಕೊಳ್ಳುವಾಗ ಪ್ರತಿರೋಧ ವ್ಯಕ್ತಪಡಿಸಿದ ಮಹಿಳೆಗೆ ಮಚ್ಚಿನೇಟು: ಇಬ್ಬರ ಬಂಧನ

ಚಿನ್ನದ ಸರ ಕಸಿದುಕೊಳ್ಳುವಾರ ಪ್ರತಿರೋಧ ವ್ಯಕ್ತಪಡಿಸಿದ ಮಹಿಳೆ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ ಇಬ್ಬರು ದರೋಡೆಕೋರರನ್ನು ಪುಟ್ಟೇನಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಚಿನ್ನದ ಸರ ಕಸಿದುಕೊಳ್ಳುವಾರ ಪ್ರತಿರೋಧ ವ್ಯಕ್ತಪಡಿಸಿದ ಮಹಿಳೆ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ ಇಬ್ಬರು ದರೋಡೆಕೋರರನ್ನು ಪುಟ್ಟೇನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳನ್ನು ಆಡುಗೋಡಿ ಸಮೀಪದ ಎಲ್‌ಆರ್‌ನಗರ ಕೊಳೆಗೇರಿ ನಿವಾಸಿಗಳಾದ ಮನೋಜ್‌ಕುಮಾರ್ ಮತ್ತು ಫ್ರಾಂಕ್ಲಿನ್ ಎಂದು ಗುರುತಿಸಲಾಗಿದೆ.

ಬಂಧಿತ ಆರೋಪಿಗಳು ಮಾರ್ಚ್ 6 ರಂದು ಸಂಜೆ ಸಾರಕ್ಕಿ ಕೆರೆಯ ಬಳಿ ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದರು. ಜೆಪಿ ನಗರ 7ನೇ ಹಂತದ ನಿವಾಸಿಯಾಗಿರುವ ಸಂತ್ರಸ್ತೆ ಸರಸ್ವತಿ ದೇವಸ್ಥಾನದ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಆಕೆಯ ಚಿನ್ನದ ಸರ ದೋಚಲು ಯತ್ನಿಸಿದ್ದಾರೆ. ಈ ವೇಳೆ ಮಹಿಳೆ ಪ್ರತಿರೋಧ ವ್ಯಕ್ತಪಡಿಸಿದಾಗ ಆರೋಪಿಗಳು ಆಕೆಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದರು.

ಪ್ರಕರಣ ದಾಖಲಿಸಿಕೊಂಡು, ತನಿಖೆ ಆರಂಭಿಸಿದ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದ್ದಾರೆ. ಬಳಿಕ ಮಾಹಿತಿಗಳ ಆಧಾರದ ಮೇಲೆ ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತ ಇಬ್ಬರು ಆರೋಪಿಗಳ ಪೈಕಿ ಮನೋಜ್ ಕುಮಾರ್ ಅಪರಾಧ ಹಿನ್ನೆಲೆಯುಳ್ಳವನಾಗಿದ್ದು, ಈ ಹಿಂದೆ ಈತ ಕೊಲೆ ಮತ್ತು ಕೊಲೆಗೆ ಯತ್ನ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಪ್ರಕರಣ ಸಂಬಂಧ ಬನ್ನೇರುಘಟ್ಟ ಪೊಲೀಸರು ಈತನನ್ನು ಬಂಧನಕ್ಕೊಳಪಡಿಸಿದ್ದರು. ಆರೋಪಿ ಜಾಮೀನಿನ ಮೇಲೆ ಹೊರ ಬಂದ ಬಳಿಕವೂ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುವುದನ್ನು ಬಿಟ್ಟಿರಲಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com