ಅಮಿತ್ ಶಾ ರಾಜ್ಯ ಭೇಟಿ ವೇಳೆ ಭದ್ರತಾ ಲೋಪ, ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳ ಬಂಧನ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿಯ ವೇಳೆ ಭದ್ರತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಪೊಲೀಸರು ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ ಮತ್ತು ವಿಚಾರಣೆ ನಡೆಸಿದ್ದಾರೆ ಎಂದು ಮೂಲಗಳು ಸೋಮವಾರ ತಿಳಿಸಿವೆ.
ಅಮಿತ್ ಶಾ
ಅಮಿತ್ ಶಾ
Updated on

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿಯ ವೇಳೆ ಭದ್ರತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಪೊಲೀಸರು ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ ಮತ್ತು ವಿಚಾರಣೆ ನಡೆಸಿದ್ದಾರೆ ಎಂದು ಮೂಲಗಳು ಸೋಮವಾರ ತಿಳಿಸಿವೆ.

ಬಂಧಿತರನ್ನು ಬೆಂಗಳೂರಿನ ನೀಲಸಂದ್ರ ನಿವಾಸಿಗಳಾದ ಇಮ್ರಾನ್ ಮತ್ತು ಜಿಬ್ರಾನ್ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಿ ದೆಹಲಿಗೆ ಹಿಂತಿರುಗಲು ಶಾ ಅವರು ಭಾನುವಾರ ತಡರಾತ್ರಿ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಾಗ ಈ ಘಟನೆ ನಡೆದಿದೆ.

ಆರೋಪಿ ವಿದ್ಯಾರ್ಥಿಗಳು ನಿಯಮಗಳನ್ನು ಉಲ್ಲಂಘಿಸಿ ಅಮಿತ್ ಶಾ ಅವರ ಬೆಂಗಾವಲು ವಾಹನಗಳೊಂದಿಗೆ ಸಫೀನಾ ಪ್ಲಾಜಾದಿಂದ ಮಣಿಪಾಲ್ ಸೆಂಟರ್‌ವರೆಗೆ ಹೇಗೋ ಹಠಾತ್ತನೆ ಮಧ್ಯೆ ಪ್ರವೇಶಿಸಿ ಪ್ರಯಾಣಿಸಿದ್ದಾರೆ. 300 ಮೀಟರ್‌ವರೆಗೆ ಪೊಲೀಸರು ತಡೆಯಲು ಯತ್ನಿಸಿದರೂ, ಬೈಕ್ ಸವಾರರು ಸವಾರಿ ಮುಂದುವರಿಸಿದ್ದರು.

ಪೊಲೀಸರು ಮಣಿಪಾಲ ಕೇಂದ್ರದಲ್ಲಿ ಅವರನ್ನು ತಡೆದು ಒಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಮತ್ತೊಬ್ಬ ಪರಾರಿಯಾಗುವಲ್ಲಿ ಯಶಸ್ವಿಯಾದರೂ, ನಂತರ ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರನ್ನು ಕಂಡ ವಿದ್ಯಾರ್ಥಿಗಳು ಗಾಬರಿಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ವಿವರಿಸಿವೆ. ಪ್ರಾಥಮಿಕ ತನಿಖೆಯಲ್ಲಿ ಇಬ್ಬರೂ ವಿದ್ಯಾರ್ಥಿಗಳು ಯಾವುದೇ ಅಪರಾಧ ಹಿನ್ನೆಲೆ ಅಥವಾ ಯಾವುದೇ ಕೆಟ್ಟ ಉದ್ದೇಶವನ್ನು ಹೊಂದಿಲ್ಲ ಎಂದು ತಿಳಿದಿದೆ. ಆದರೆ, ಯಾವುದೇ ಅವಕಾಶ ನೀಡದ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಈ ಸಂಬಂಧ ಭಾರತೀನಗರ ಪೊಲೀಸರು ವಿದ್ಯಾರ್ಥಿಗಳ ವಿರುದ್ಧ ಐಪಿಸಿ ಸೆಕ್ಷನ್ 353 ರ ಅಡಿಯಲ್ಲಿ ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದಕ್ಕಾಗಿ ಮತ್ತು 279 ಅಜಾಗರೂಕ ಮತ್ತು ನಿರ್ಲಕ್ಷ್ಯದ ಚಾಲನೆಗಾಗಿ ಪ್ರಕರಣ ದಾಖಲಿಸಿದ್ದಾರೆ.

ದಾವಣಗೆರೆ ಜಿಲ್ಲೆಯಲ್ಲಿ ಶನಿವಾರ ಪ್ರಧಾನಿ ನರೇಂದ್ರ ಮೋದಿಯವರ ರೋಡ್ ಶೋ ವೇಳೆ ಭದ್ರತಾ ಲೋಪದ ಘಟನೆ ವರದಿಯಾಗಿದೆ. ಹೆಲಿಪ್ಯಾಡ್‌ನಿಂದ ತೆರೆದ ವಾಹನದಲ್ಲಿ ಮೋದಿಯನ್ನು ಕರೆತರುವ ವೇಳೆ ಈ ಘಟನೆ ನಡೆದಿದೆ.

ಇದಕ್ಕೂ ಮುನ್ನ ಜನವರಿ 14 ರಂದು ಕುನಾಲ್ ಧೋಂಗಡಿ ಎಂಬ ಬಾಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಹಾರ ಹಾಕಲು ಭದ್ರತೆಯನ್ನು ಉಲ್ಲಂಘಿಸಿದ್ದನು. ನಂತರ ಹುಬ್ಬಳ್ಳಿಯಲ್ಲಿ ಪ್ರಧಾನಿ ಮೋದಿ ದೇವರು ಎಂದು ಹೇಳಿಕೆ ನೀಡಿದ್ದನು. 'ಅವರು ಸಾಮಾನ್ಯ ಮನುಷ್ಯರಲ್ಲ, ನಾನು ಅವರ ಅಭಿಮಾನಿ ಮತ್ತು ಅವರನ್ನು ಭೇಟಿಯಾಗಲು ಬಯಸುತ್ತೇನೆ' ಎಂದು ಹೇಳಿದ್ದನು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com