ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಕರ್ನಾಟಕದಲ್ಲಿ ಚುನಾವಣಾ ಅಕ್ರಮ: ರಾಜ್ಯದಲ್ಲಿ ಇದುವರೆಗೆ 93 ಕೋಟಿ ರೂ. ವಶಕ್ಕೆ

ರಾಜ್ಯದಲ್ಲಿ ಚುನಾವಣೆ ಸಂದರ್ಭದಲ್ಲಿ “ಕುರುಡು ಕಾಂಚಾಣ’ ಭರ್ಜರಿ ಸದ್ದು ಮಾಡುತ್ತಿದೆ. ಇದೂವರೆಗಿನ ಚುನಾವಣ ಅಕ್ರಮಗಳ ಮೊತ್ತ ಬರೋಬ್ಬರಿ 92 ಕೋಟಿ ರೂ. ಆಗಿದ್ದು ಬೆಚ್ಚಿ ಬೀಳಿಸುವಂತಿದೆ. ಇದು 2019 ರ ಲೋಕಸಭಾ ಚುನಾವಣೆಯ ಸಮಯದಲ್ಲಿ ವಶಪಡಿಸಿಕೊಂಡ ಮೊತ್ತಕ್ಕಿಂತ ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ.
Published on

ಬೆಂಗಳೂರು: ರಾಜ್ಯದಲ್ಲಿ ಚುನಾವಣೆ ಸಂದರ್ಭದಲ್ಲಿ “ಕುರುಡು ಕಾಂಚಾಣ’ ಭರ್ಜರಿ ಸದ್ದು ಮಾಡುತ್ತಿದೆ. ಇದೂವರೆಗಿನ ಚುನಾವಣ ಅಕ್ರಮಗಳ ಮೊತ್ತ ಬರೋಬ್ಬರಿ 92 ಕೋಟಿ ರೂ. ಆಗಿದ್ದು ಬೆಚ್ಚಿ ಬೀಳಿಸುವಂತಿದೆ. ಇದು 2019 ರ ಲೋಕಸಭಾ ಚುನಾವಣೆಯ ಸಮಯದಲ್ಲಿ ವಶಪಡಿಸಿಕೊಂಡ ಮೊತ್ತಕ್ಕಿಂತ ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ಅವರು, ಕಣ್ಗಾವಲು, ಕ್ಷಿಪ್ರಗತಿ ಕ್ರಮ, ಎಚ್ಚರಿಕೆ ಹಾಗೂ ಜನರು ಸಕಾಲದಲ್ಲಿ ಮಾಹಿತಿಗಳನ್ನು ಹಂಚಿಕೊಳ್ಳುತ್ತಿರುವುದರಿಂದ ಇಷ್ಟು ದೊಡ್ಡ ಮಟ್ಟದ ಅಕ್ರಮ ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಚುನಾವಣಾ ಆಯೋಗದ ದಾಖಲೆಗಳ ಪ್ರಕಾರ, “2019 ರ ಲೋಕಸಭಾ ಚುನಾವಣೆಯ ಸಮಯದಲ್ಲಿ, ಒಟ್ಟಾರೆ 88,27,45,176 ರೂವನ್ನು ವಶಪಡಿಸಿಕೊಳ್ಳಲಾಗಿತ್ತು. ಆದರೆ, ಕರ್ನಾಟಕದಲ್ಲಿ ಚುನಾವಣಾ ದಿನಾಂಕ ಘೋಷಣೆಯಾಗುವುದಕ್ಕೂ ಮುನ್ನವೇ 92,89,23,305 ರೂವನ್ನು ವಶಪಡಿಸಲಾಗಿದೆ. ಈ ಪೈಕಿ 50,30,09,107 ಮೌಲ್ಯದ ವಸ್ತುಗಳನ್ನು ಪೊಲೀಸ್ ಇಲಾಖೆ ವಶಪಡಿಸಿಕೊಂಡಿದ್ದು, ಜಾರಿ ನಿರ್ದೇಶನಾಲಯ 26.21 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ ಎಂದು ಮಾಹಿತಿ ನೀಡಿದರು.

"ವಶಪಡಿಸಿಕೊಂಡ ವಸ್ತುಗಳಲ್ಲಿ ನಗದು, ಮದ್ಯ, ಮಾದಕ ದ್ರವ್ಯಗಳು, ಲೋಹದ ವಸ್ತುಗಳು, ಉಡುಗೊರೆ ವಸ್ತುಗಳು ಮತ್ತು ಇತರ ಹಲವು ವಸ್ತುಗಳು ಸೇರಿವೆ. ಈ ಕುರಿತು ಪ್ರದೇಶವಾರು ವಿವರಗಳನ್ನು ಕ್ರೋಢೀಕರಿಸುತ್ತಿದ್ದೇವೆ, ಇದರಿಂದ ಮತ್ತಷ್ಟು ಎಚ್ಚರಿಕೆಯನ್ನು ತೆಗೆದುಕೊಳ್ಳಬಹುದಾಗಿದೆ.

ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಮುನ್ನವೇ ತಪಾಸಣೆಯನ್ನು ತೀವ್ರಗೊಳಿಸಬೇಕೆಂದು ಭಾರತೀಯ ಚುನಾವಣಾ ಆಯೋಗ ಸೂಚನೆ ನೀಡಿತ್ತು. ಇದರಂತೆ ಕ್ರಮಗಳ ಕೈಗೊಳ್ಳಲಾಗಿತ್ತು. ದಾಳಿ ವೇಳೆ ಯಾವುದೇ ರಾಜಕೀಯ ಪಕ್ಷಗಳಿಗೆ ಮಾಹಿತಿಗಳಿರಲಿಲ್ಲ. ದಿಢೀರ್ ದಾಳಿ ನಡೆಸಲಾಗಿತ್ತು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com