ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಿದ್ದು, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಚುನಾವಣೆ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಸೇವೆಯಲ್ಲಿ ಕೆಲ ವ್ಯತ್ಯಯಗಳು ಕಂಡು ಬರಲಿದೆ ಎಂದು ಹೇಳಲಾಗುತ್ತಿದೆ.
ಚುನಾವಣಾ ಕರ್ತವ್ಯಕ್ಕೆ ಕಂದಾಯ ಇಲಾಖೆಯ ಸಿಬ್ಬಂದಿಗಳನ್ನು ನಿಯೋಜನೆ ಮಾಡುವ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ ಸೇವೆಯಲ್ಲಿ ವ್ಯತ್ಯಯಗಳು ಕಂಡುಬರಲಿದೆ ಎಂದು ತಿಳಿದುಬಂದಿದೆ.
ಮುದ್ರಾಂಕ ಮತ್ತು ನೋಂದಣಿ ಇಲಾಖೆಯ ಅಧಿಕಾರಿಯೊಬ್ಬರು ಮಾತನಾಡಿ, ರಾಜ್ಯದಲ್ಲಿ ತಿಂಗಳಿಗೆ ಸರಾಸರಿ 1.5-2 ಲಕ್ಷ ದಾಖಲೆ ನೋಂದಣಿ ಅರ್ಜಿಗಳು ಸಲ್ಲಿಕೆಯಾಗಿವೆ. ಚುನಾವಣಾ ಕರ್ತವ್ಯಕ್ಕೆ ಸಿಬ್ಬಂದಿಯನ್ನು ನಿಯೋಜಿಸಿರುವುದರಿಂದ, ಒಬ್ಬ ವ್ಯಕ್ತಿ ಮೂವರು ವ್ಯಕ್ತಿಗಳು ಮಾಡುವ ಕರ್ತವ್ಯವವನ್ನು ನಿಭಾಯಿಸಬೇಕಾಗಿದೆ. ಹೀಗಾಗಿ ಅರ್ಜಿಗಳ ಪ್ರಕ್ರಿಯೆ ವೇಗವು ತಡವಾಗಲಿವೆ ಎಂದು ಹೇಳಿದ್ದಾರೆ.
ಇಲಾಖೆಯಲ್ಲಿ 34 ಜಿಲ್ಲಾ ಮಟ್ಟದ ಅಧಿಕಾರಿಗಳಿದ್ದು, ಅವರಲ್ಲಿ ಶೇ.50ರಷ್ಟು ಮಂದಿಯನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
BWSSB ಮತ್ತು Bescom ಗಿಂತಲೂ ಕಂದಾಯ ಇಲಾಖೆ ಅಧಿಕಾರಿಗಳು ಜನರೊಂದಿಗೆ ನೇರ ಸಂಪರ್ಕದಲ್ಲಿರುತ್ತಾರೆ. ಆದರೆ, ನಮ್ಮ ಸೇವೆ ಅಗತ್ಯ ಸೇವೆಗಳ ವರ್ಗಕ್ಕೆ ಸೇರ್ಪಡೆಗೊಳಿಸಲಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
Advertisement