ಪೂರಕ ಪರೀಕ್ಷೆಯ ಅಂಕಗಳನ್ನು ಸಿಇಟಿಗೆ ಪರಿಗಣಿಸಲಾಗುತ್ತದೆ: ಗೊಂದಲಗಳಿಗೆ ತೆರೆ ಎಳೆದ ಕೆಇಎ

ನಿರೀಕ್ಷೆಗಿಂತ ಕಡಿಮೆ ಅಂಕ ಬಂದಿದೆ ಎಂದು ಕೆಲವರು ಪೂರಕ ಪರೀಕ್ಷೆ ಬರೆಯಲು ನಿರ್ಧರಿಸಿದ್ದು, ಪೂರಕ ಪರೀಕ್ಷೆಯ ಅಂಕಗಳನ್ನೂ ಸಿಇಟಿಗೆ ಪರಿಗಣಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಹೇಳಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ನಿರೀಕ್ಷೆಗಿಂತ ಕಡಿಮೆ ಅಂಕ ಬಂದಿದೆ ಎಂದು ಕೆಲವರು ಪೂರಕ ಪರೀಕ್ಷೆ ಬರೆಯಲು ನಿರ್ಧರಿಸಿದ್ದು, ಪೂರಕ ಪರೀಕ್ಷೆಯ ಅಂಕಗಳನ್ನೂ ಸಿಇಟಿಗೆ ಪರಿಗಣಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಹೇಳಿದೆ.

ಪೂರಕ ಪರೀಕ್ಷೆಯ ಅಂಕಗಳನ್ನು ಸಿಇಟಿಗೆ ಪರಿಗಣಿಸಲಾಗುತ್ತದೆಯೋ, ಇಲ್ಲವೋ ಎಂಬ ಗೊಂದಲಗಳು ಪೋಷಕರಲ್ಲಿ ಮನೆ ಮಾಡಿತ್ತು. ಈ ಬಗ್ಗೆ ಹಲವಾರು ವಿದ್ಯಾರ್ಥಿಗಳು ಹಾಗೂ ಪೋಷಕರು ಪ್ರಾಧಿಕಾರವನ್ನು ಸಂಪರ್ಕಿಸಿದ್ದರು.

ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಪ್ರಾಧಿಕಾರವು, "ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶಗಳಲ್ಲಿ ಕಡಿಮೆ ಅಂಕಗಲನ್ನು ಪಡೆದ ಕಾರಣದಿಂದ ಕೆಲವು ವಿದ್ಯಾರ್ಥಿಗಳು ಪೂರಕ ಪರೀಕ್ಷೆಯನ್ನು ತೆಗೆದುಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಇಟಿ 2023 ಪರೀಕ್ಷೆಗೆ ಹಾಜರಾಗಲು ಅರ್ಹತೆಯ ಮಾನದಂಡಗಳ ಬಗ್ಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಪ್ರಾಧಿಕಾರವನ್ನು ಸಂಪರ್ಕಿಸುತ್ತಿದ್ದು, ಸಿಇಟಿ ರ್ಯಾಂಕ್‌ಗಳಿಗೆ ಪೂರಕ ಪರೀಕ್ಷೆಗಳ ಫಲಿತಾಂಶವನ್ನು ಪರಿಗಣಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದೆ.

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಹಾಜರಾಗುವವರು ಸಿಇಟಿ ಪರೀಕ್ಷೆಗೆ ಹಾಜರಾದರೆ ಸೀಟು ಹಂಚಿಕೆ ವೇಳೆ ಪೂರಕ ಪರೀಕ್ಷೆ ಅಂಕಗಳನ್ನು ಪರಿಗಣಿಸುತ್ತೇವೆ. ಈ ವಿಚಾರದಲ್ಲಿ ಯಾವುದೇ ಗೊಂದಲ ಬೇಡ. ವಿದ್ಯಾರ್ಥಿಗಳಾಗಲೀ, ಪೋಷಕರಾಗಲೀ ಗೊಂದಲಕ್ಕೆ ಒಳಗಾಗಬಾರದು ಎಂದು ಅವರು ಮನವಿ ಮಾಡಿಕೊಂಡಿದೆ.

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ನೋಂದಣಿ ಮಾಡಲು ಏಪ್ರಿಲ್ 21ರಿಂದಲೇ ಅವಕಾಶ ಕಲ್ಪಿಸಲಾಗಿದೆ. ದಂಡರಹಿತವಾಗಿ ನೋಂದಣಿ ಮಾಡಿಕೊಳ್ಳಲು ಏಪ್ರಿಲ್ 26 ಕೊನೆಯ ದಿನವಾಗಿತ್ತು. ದಂಡಸಹಿತ ನೋಂದಣಿ ಮಾಡಿಕೊಳ್ಳಲು ಏಪ್ರಿಲ್ 27 ರಿಂದ ಮೇ 2ರ ವರೆಗೆ ಅವಕಾಶ ನೀಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com