ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

2023ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮಂಗಳವಾರ ಪ್ರಕಟಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: 2023ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮಂಗಳವಾರ ಪ್ರಕಟಿಸಿದೆ.

ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ಮೇ 22,2023 ರಿಂದ ಜೂನ್ 02, 2023 ರವರೆಗೆ ಪೂರಕ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ನಿರ್ಧರಿಸಿದ್ದು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

ಪ್ರತಿ ದಿನ ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರ ವರೆಗೆ ಪೂರಕ ಪರೀಕ್ಷೆ ನಡೆಯಲಿದ್ದು, ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಮತ್ತು ಕಡಿಮೆ ಅಂಕ ಬಂದು ಪೂರಕ ಪರೀಕ್ಷೆ ಬರೆಯಲು ನಿರ್ಧರಿಸಿರುವ ವಿದ್ಯಾರ್ಥಿಗಳು ಮರು ಪರೀಕ್ಷೆಗೆ ಹಾಜರಾಗುವಂತೆ ಮಂಡಳಿ ತಿಳಿಸಿದೆ.

ಪೂರಕ ಪರೀಕ್ಷೆಯ ವೇಳಾಪಟ್ಟಿ ಇಂತಿದೆ...
ಮೇ 22- ಕನ್ನಡ, ಅರೇಬಿಕ್
ಮೇ 23- ಐಚ್ಛಿಕ ಕನ್ನಡ, ರಸಾಯನಶಾಸ್ತ್ರ, ಮೂಲ ಗಣಿತ
ಮೇ 24- ಇಂಗ್ಲೀಷ್
ಮೇ 25- ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ,ಗಣಕ ವಿಜ್ಞಾನ
ಮೇ 26- ಇತಿಹಾಸ, ಸಂಖ್ಯಾಶಾಸ್ತ್ರ
ಮೇ 27- ಹಿಂದಿ
ಮೇ 29- ಭೂಗೋಳ ಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ
ಮೇ 30- ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ
ಮೇ 31- ರಾಜ್ಯಶಾಸ್ತ್ರ, ಗಣಿತ ಶಾಸ್ತ್ರ
ಜೂನ್ 1- ತರ್ಕಶಾಸ್ತ್ರ, ಹಿಂದುಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ
ಜೂನ್ 2- ಅರ್ಥಶಾಸ್ತ್ರ, ಜೀವಶಾಸ್ತ್ರ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com