ಬಬಲೇಶ್ವರ ಬಿಜೆಪಿ ಅಭ್ಯರ್ಥಿ ಪುತ್ರನಿಂದ ಗಾಳಿಯಲ್ಲಿ ಗುಂಡು: ಗೂಂಡಾಗಳಿಗೆ ಟಿಕೆಟ್ ಎಂದು ಕಿಡಿಕಾರಿದ ಕಾಂಗ್ರೆಸ್
ವಿಜಯಪುರ: ಜಿಲ್ಲೆಯ ಬಬಲೇಶ್ವರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಜುಗೌಡ ಪುತ್ರ ಸಮರ್ಥ ಗೌಡ ಪಿಸ್ತೂಲ್ ನಿಂದ ಗಾಳಿಯಲ್ಲಿ ಮೂರು ಸುತ್ತಿನ ಗುಂಡು ಹಾರಿಸಿ ಸಂಭ್ರಮಿಸಿರುವ ವಿಡಿಯೊ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆ ಪ್ರತಿಪಕ್ಷ ಕಾಂಗ್ರೆಸ್ ಕಿಡಿಕಾರಿದೆ.
ಬಿಜೆಪಿ ಗೂಂಡಾಗಳಿಗೆ ಟಿಕೆಟ್ ನೀಡಿದೆ ಎಂದು ಕೆಪಿಸಿಸಿ ವಕ್ತಾರ ಸಂಗಮೇಶ ಬಬಲೇಶ್ವರ ಆರೋಪ ಮಾಡಿದ್ದಾರೆ.
ನಡೆದಿದ್ದೇನು?: ಬಿಜೆಪಿಯಿಂದ ತಮ್ಮ ತಂದೆ ವಿಜುಗೌಡ ಪಾಟೀಲ್ ಗೆ ಟಿಕೆಟ್ ಸಿಕ್ಕಿದ್ದಕ್ಕೆ ಪುತ್ರ ಸಮರ್ಥಗೌಡ ಪಿಸ್ತೂಲ್‌ನಿಂದ ಗಾಳಿಯಲ್ಲಿ ಮೂರು ಸುತ್ತಿನ ಗುಂಡು ಹಾರಿಸಿ ವಿಚಿತ್ರವಾಗಿ ಸಂಭ್ರಮಿಸಿದ್ದರು. ಈ ವಿಡಿಯೋ ವೈರಲ್ ಆಗಿದೆ. ಇದನ್ನು ಸಂಗಮೇಶ ಪ್ರಶ್ನೆ ಮಾಡಿದ್ದಾರೆ. ಯಾವ ಆಧಾರದ ಮೇಲೆ ಇವರಿಗೆ ಟಿಕೆಟ್ ಕೊಟ್ಟಿದ್ದೀರಿ ಎಂದು ಬಿಜೆಪಿ ವರಿಷ್ಠರಿಗೆ ಕೆಪಿಸಿಸಿ ವಕ್ತಾರ ಸಂಗಮೇಶ ಬಬಲೇಶ್ವರ ಪ್ರಶ್ನೆ ಮಾಡಿದ್ದಾರೆ. 'ಗೂಂಡಾಗಳಿಗೆ ಬಿಜೆಪಿ ಟಿಕೆಟ್ ಕೊಟ್ಟಿದೆ ಎಂದು ಬಿಜೆಪಿ ವಿರುದ್ಧ ಸಂಗಮೇಶ ವಾಗ್ದಾಳಿ ಮಾಡಿದ್ದಾರೆ.
ಈ ವಿಡಿಯೊವನ್ನು ವಿಜಯಪುರದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಜು ಅಲಗೂರು, ಮುಖಂಡ ಸಂಗಮೇಶ ಅವರು ಬಿಡುಗಡೆ ಮಾಡಿದ್ದಾರೆ. ಮಾಧ್ಯಮಗೋಷ್ಠಿ ಕರೆದು ಗುಂಡು ಹಾರಿಸಿದ ವಿಡಿಯೋ ತೋರಿಸಿದ್ದಾರೆ. ಬಬಲೇಶ್ವರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ಗೂಂಡಾಗಿರಿ ನಡೆಯುತ್ತಿದೆ. ಇಂತಹವರು ಅಭ್ಯರ್ಥಿ ಆಗಿದ್ದಾರೆ. ಬಿಜೆಪಿಯ ಕೇಂದ್ರ ಸಚಿವ ಅಮಿತ್ ಶಾ ಹಾಗೂ ಇತರೆ ನಾಯಕರು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ