ಮೊಳಕಾಲ್ಮೂರು ಬಿಜೆಪಿ ಅಭ್ಯರ್ಥಿ ಎಸ್.ತಿಪ್ಪೇಸ್ವಾಮಿ, ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ವಿರುದ್ಧ ಪ್ರಕರಣ ದಾಖಲು

ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಹಾಗೂ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ತಿಪ್ಪೇಸ್ವಾಮಿ ವಿರುದ್ಧ ಗುರುವಾರ ಪ್ರಕರಣ ದಾಖಲಾಗಿದೆ.
ಮೊಳಕಾಲ್ಮೂರು ಬಿಜೆಪಿ ಅಭ್ಯರ್ಥಿ ಎಸ್.ತಿಪ್ಪೇಸ್ವಾಮಿ
ಮೊಳಕಾಲ್ಮೂರು ಬಿಜೆಪಿ ಅಭ್ಯರ್ಥಿ ಎಸ್.ತಿಪ್ಪೇಸ್ವಾಮಿ

ಚಿತ್ರದುರ್ಗ/ಕೊಡಗು: ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಹಾಗೂ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ತಿಪ್ಪೇಸ್ವಾಮಿ ವಿರುದ್ಧ ಗುರುವಾರ ಪ್ರಕರಣ ದಾಖಲಾಗಿದೆ.

ಏಪ್ರಿಲ್ 26 ರಂದು ತೆಂಗಿನ ಗೌರಸಮುದ್ರದಲ್ಲಿ ಚುನಾವಣಾ ಪ್ರಚಾರದ ವೇಳೆ ತಿಪ್ಪೇಸ್ವಾಮಿ ಅವರು, ಜಾತಿಯ ಹೆಸರು ಬಳಸಿ ಭಾಷಣ ಮಾಡಿದ್ದರು ಎಂಬ ಆರೋಪಗಳು ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಪ್ರಜಾಪ್ರತಿನಿಧಿ ಕಾಯ್ದೆ 1951ರ ವಿವಿಧ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.

ಹೌದು ಏಪ್ರಿಲ್ 26ರಂದು ತೆಂಗಿನ ಗೌರಸಮುದ್ರದಲ್ಲಿ ಭಾಷಣ ಮಾಡಿದ್ದ ತಿಪ್ಪೇಸ್ವಾಮಿ ‘ನಾನು ಮ್ಯಾಸನಾಯಕ, ಕಾಂಗ್ರೆಸ್​​ ಅಭ್ಯರ್ಥಿ ಊರ ನಾಯಕ, ನಮಗೂ ಅವರಿಗೂ ಸಂಬಂಧ ಇಲ್ಲ ಎಂದು ತಿಪ್ಪೇಸ್ವಾಮಿ ಭಾಷಣ ಮಾಡಿದ್ದರು ಎಂದು ತಿಳಿದುಬಂದಿದೆ.

ಇದರ ಮಾಹಿತಿ ಕಲೆ ಹಾಕಿದ್ದ ಚುನಾವಣಾಧಿಕಾರಿ ಫ್ಲೈಯಿಂಗ್ ಸ್ಕ್ವಾಡ್ ತಿಪ್ಪೇಸ್ವಾಮಿ ವಿರುದ್ಧ ಇದೀಗ ದೂರು ದಾಖಲಿಸಿದ್ದಾರೆ.

ಈ ನಡುವೆ ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ ಕಾರ್ಯಪ್ಪ ವಿರುದ್ಧ ಕೊಡಗಿನ ಸಿದ್ದಾಪುರ ಪೊಲೀಸರು ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಏಪ್ರಿಲ್ 30 ರಂದು ಹಾಲಿ ಶಾಸಕ ಹಾಗೂ ವಿರಾಜಪೇಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಜಿ.ಬೋಪಯ್ಯ ಅವರು ಮಾಲ್ದಾರೆ ಗ್ರಾಮದಲ್ಲಿ ಚುನಾವಣಾ ಪ್ರಚಾರ ಸಭೆ ನಡೆಸಿದ್ದರು, ಈ ವೇಳೆ ವಿರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಎಸ್ ಪೊನ್ನಣ್ಣ ವಿರುದ್ಧ ಕಾರ್ಯಪ್ಪ ಅವರು ಅವಹೇಳನಕಾರಿ ಹೇಳಿಕೆ ನೀಡಿದ್ದರು.

ಒಂದು ಸಮುದಾಯದ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆಂಬ ಆರೋಪಗಳು ಕಾರ್ಯಪ್ಪ ವಿರುದ್ಧ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾನೂನು ವಿಭಾಗದ ಸೂರ್ಯ ಮುಕುಂದರಾಜ್ ಎಂಬುವವರು ದೂರು ದಾಖಲಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com