ನಾಗರಿಕರ ಅನುಕೂಲಕ್ಕಾಗಿ 2 ದಿನ ರೋಡ್'ಶೋ ನಡೆಸಲು ನಿರ್ಧರ: ಬಿಜೆಪಿ

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೇ.6 ಮತ್ತು 7 ರಂದು ಎರಡು ದಿನಗಳ ಕಾಲ ರಾಜ್ಯ ರಾಜಧಾನಿಯ 18 ವಿಧಾನಸಭಾ ಕ್ಷೇತ್ರಗಳಲ್ಲಿ ನಮ್ಮ ಬೆಂಗಳೂರು, ನಮ್ಮ ಹೆಮ್ಮೆ ಹೆಸರಿನಲ್ಲಿ ಎರಡು ದಿನಗಳ ಕಾಲ ಬೃಹತ್ ರೋಡ್ ಶೋ ನಡೆಸಲಿದ್ದಾರೆ.
ಶೋಭಾ ಕರಂದ್ಲಾಜೆ
ಶೋಭಾ ಕರಂದ್ಲಾಜೆ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೇ.6 ಮತ್ತು 7 ರಂದು ಎರಡು ದಿನಗಳ ಕಾಲ ರಾಜ್ಯ ರಾಜಧಾನಿಯ 18 ವಿಧಾನಸಭಾ ಕ್ಷೇತ್ರಗಳಲ್ಲಿ ನಮ್ಮ ಬೆಂಗಳೂರು, ನಮ್ಮ ಹೆಮ್ಮೆ ಹೆಸರಿನಲ್ಲಿ ಎರಡು ದಿನಗಳ ಕಾಲ ಬೃಹತ್ ರೋಡ್ ಶೋ ನಡೆಸಲಿದ್ದಾರೆ.

ರೋಡ್ ಶೋ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರ ಪೂರ್ವಭಾವಿ ಸಭೆ ಬಳಿಕ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಪ್ರಧಾನಿ ಮೋದಿಯವರ ರೋಡ್ ಶೋ ಕುರಿತು ಮಾಹಿತಿ ನೀಡಿದರು.

ಶನಿವಾರ ಇಡೀ ದಿನ ರೋಡ್‌ಶೋ ನಡೆಸಿದರೆ ಜನರು ಸಮಸ್ಯೆಗಳನ್ನು ಎದುರಿಸಲಿದ್ದಾರೆ. ಹೀಗಾಗಿ ಅನಾನುಕೂಲ ತಪ್ಪಿಸಲು ಎರಡು ದಿನಗಳ ಕಾಲ ರೋಡ್ ಶೋ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.

ಒಂದೇ ದಿನ ರೋಡ್ ಶೋ ನಡೆಸಿದರೆ ಜನರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹಿಗಾಗಿ ಈ ಅನಾನುಕೂಲತೆ ತಪ್ಪಿಸುವಂತೆ ಪ್ರಧಾನಮಂತ್ರಿಗಳ ವೇಳಾಪಟ್ಟಿಯನ್ನು ಪುನರ್ ಪರಿಶೀಲಿಸುವಂತೆ ರಾಜ್ಯ ಘಟಕಕ್ಕೆ ಪ್ರಧಾನಮಂತ್ರಿಗಳ ಕಾರ್ಯಾಲಯ ಸೂಚಿಸಿತ್ತು.

ಭಾನುವಾರ ನೀಟ್ (ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ) ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ರೋಡ್ ಶೋದಿಂದಾಗಿ ಅನಾನುಕೂಲತೆ ಎದುರಿಸಬೇಕಾಗುತ್ತದೆ. ಹೀಗಾಗಿ ಪರೀಕ್ಷೆಗಳಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಪಕ್ಷವು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ.

ಕೇಂದ್ರ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಈ ಸಂಬಂಧ ಪರಿಶೀಲನೆ ನಡೆಸುತ್ತಿದ್ದಾರೆಂದು ಬಿಜೆಪಿ ಮುಖಂಡರೊಬ್ಬರು ಮಾಹಿತಿ ನೀಡಿದ್ದಾರೆ.

“ನಾಗರಿಕರ ಅನುಕೂಲಕ್ಕಾಗಿ ಎರಡು ದಿನಗಳ ಕಾಲ ರೋಡ್‌ಶೋ ನಡೆಸಲು ನಿರ್ಧರಿಸಲಾಗಿದೆ. ರೋಡ್ ಶೋ ಕುರಿತು ಬೆಂಗಳೂರಿಗರು ತಮ್ಮ ಸಮಸ್ಯೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತಪಡಿಸಿದ್ದರು. ಇದು ಚುನಾವಣಾ ಸಮಯವಾಗಿದ್ದು, ಸಮಸ್ಯೆಗಳು ಎದುರಾಗುವುದು ನಮಗಿಷ್ಟವಿಲ್ಲ. ಮೋದಿಯವರೂ ಕೂಡ ಜನರಿಗೆ ಸಮಸ್ಯೆಯಾಗದಂತೆ ಸೂಚಿಸಿದ್ದರು ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com