ಬೆಂಗಳೂರು: ಮೇ 10ರಂದು ನಡೆಯುವ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಸಲುವಾಗಿ ಹೆಚ್ಚಿನ ಬಸ್ಸುಗಳನ್ನು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಸೇವೆಗೆ ನಿಯೋಜಿಲಾಗಿರುವುದರಿಂದ ಸಾರ್ವಜನಿಕ ಸಂಚಾರಕ್ಕೆ ಬಸ್ಸುಗಳ ಸೇವೆಯಲ್ಲಿ ಮೇ 9 ಮತ್ತು 10ರಂದು ವ್ಯತ್ಯಯವಾಗಲಿದೆ ಎಂದು ಕೆಎಸ್ ಆರ್ ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.
ಮೇ 9 ಮತ್ತು 10ರಂದು ಎಂದಿನಂತೆ ಕೆಎಸ್ ಆರ್ ಟಿಸಿ ಬಸ್ಸುಗಳ ಸೇವೆ ಸಾಕಷ್ಟು ಸಂಖ್ಯೆಯಲ್ಲಿ ರಾಜ್ಯಾದ್ಯಂತ ಇರುವುದಿಲ್ಲ. ಸಾರ್ವಜನಿಕ ಪ್ರಯಾಣಿಕರು ಸಹಕರಿಸಬೇಕೆಂದು ಕೋರಿಕೊಂಡಿದೆ.
ರಾಜ್ಯದಲ್ಲಿ ಒಟ್ಟು 8,100 ಕೆಎಸ್ಆರ್ಟಿಸಿ ಬಸ್ಗಳಿದ್ದು, ಈ ಪೈಕಿ 3,700 ಬಸ್ಗಳು ಚುನಾವಣಾ ಕರ್ತವ್ಯಕ್ಕೆ ನಿಯೋಜನೆಯಾಗಿವೆ. ಮೇ 9 ಮತ್ತು 10 ರಂದು 4,400 ಬಸ್ಗಳು ಮಾತ್ರ ಸಂಚಾರ ಮಾಡುತ್ತವೆ.
Advertisement