ಬೆಂಗಳೂರಿನಲ್ಲಿ 'ನಮೋ' ಎರಡನೇ ಮೆಗಾ ರೋಡ್ ಶೋ: ಹನುಮಾನ್ ಚಾಲೀಸ್ ಪಠಣ, ಎಲ್ಲೆಲ್ಲೂ ಮೋದಿ ಪರ ಜೈಕಾರ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಎರಡನೇ ದಿನವೂ ಮೋದಿ ಹವಾ ಜೋರಾಗಿದೆ. ನ್ಯೂ ತಿಪ್ಪಸಂದ್ರದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ರೋಡ್ ಶೋ ಆರಂಭವಾಗಿದೆ...
ರೋಡ್ ಶೋ ನಡೆಸುತ್ತಿರುವ ಪ್ರಧಾನಿ ಮೋದಿ.
ರೋಡ್ ಶೋ ನಡೆಸುತ್ತಿರುವ ಪ್ರಧಾನಿ ಮೋದಿ.
Updated on

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಎರಡನೇ ದಿನವೂ ಮೋದಿ ಹವಾ ಜೋರಾಗಿದೆ. ನ್ಯೂ ತಿಪ್ಪಸಂದ್ರದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ರೋಡ್ ಶೋ ಆರಂಭವಾಗಿದೆ.

6 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 8 ಕಿ.ಮೀ ದೂರದವರೆಗೆ ರೋಡ್ ಶೋ ನಡೆಯುತ್ತಿದೆ. ಮಹಾದೇವಪುರ, ಕೆ.ಆರ್ ಪುರಂ, ಸಿವಿ ರಾಮನ್ ನಗರ, ಸರ್ವಜ್ಞ ನಗರ, ಶಿವಾಜಿನಗರ, ಶಾಂತಿನಗರ ಕ್ಷೇತ್ರಗಳಲ್ಲಿ ಮೋದಿಯವರ ರೋಡ್ ಶೋ ಸಾಗುತ್ತಿದೆ.

ತಿಪ್ಪಸಂದ್ರ ಬಳಿ ಕೆಂಪೇಗೌಡ ಪ್ರತಿಮೆಗೆ ನಮಸ್ಕರಿಸಿದ ಮೋದಿ ರೋಡ್ ಶೋ ಆರಂಭಿಸಿದ್ದಾರೆ. ತೆರೆದ ವಾಹನದಲ್ಲಿ ಮೋದಿ ಅಬ್ಬರದ ರೋಡ್ ಶೋ ನಡೆಯುತ್ತಿದ್ದು, ಸಹಸ್ರಾರು ಜನರತ್ತ ಮೋದಿ ಕೈಬೀಸುತ್ತಿದ್ದಾರೆ.

ಮೋದಿಯನ್ನು ಸ್ವಾಗತಿಸಲು ಜಿಟಿ ಜಿಟಿ ಮಳೆಯಲ್ಲೂ ಹೆಚ್ಚಿನ ಜನರು ಸಂಭ್ರಮದಿಂದ ಸೇರಿದ್ದಾರೆ. ರಸ್ತೆಯುದ್ದಕ್ಕೂ ಸಾವಿರಾರು ಜನರು ಸೇರಿ ಮೋದಿಯನ್ನು ನೋಡಿ ಸಂತಸ ವ್ಯಕ್ತಪಡಿಸುತ್ತಿದ್ದಾರೆ. ರಸ್ತೆಯುದ್ದಕ್ಕೂ ಕೇಸರಿ ಬಾವುಟ ಹಾರಾಡುತ್ತಿದೆ. ಎಲ್ಲೆಲ್ಲೂ ಮೋದಿ ಪರ ಜೈಕಾರಗಳು ಕೇಳಿ ಬರುತ್ತಿವೆ.

ರೋಡ್ ಶೋಗೆ ಕಲಾತಂಡಗಳು ಮೆರುಗು ತಂದುಕೊಟ್ಟಿದ್ದು, ಬಿಜೆಪಿ ಕಾರ್ಯಕರ್ತರಲ್ಲಿನ ಉತ್ಸಾಹ ಮುಗಿಲು ಮುಟ್ಟಿದೆ. ಮೋದಿಯವರ ರೋಡ್ ಶೋಗೆ ಕಾರ್ಯಕರ್ತರು ಹೂಮಳೆ ಸುರಿಸಿ ಸಂಭ್ರಮಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com