ವೀರಶೈವ-ಲಿಂಗಾಯತ ಸಮುದಾಯ ಬಿಜೆಪಿ ಪರವಿದೆ: ಸ್ವಂತ ಬಲದಲ್ಲಿ ಸರ್ಕಾರ ರಚಿಸುವುದು ನಿಶ್ಚಿತ; ಯಡಿಯೂರಪ್ಪ

ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ 130 ರಿಂದ 135 ಸ್ಥಾನಗಳನ್ನು ಗೆದ್ದು ಸ್ವಂತ ಬಲದಲ್ಲಿ ಸರ್ಕಾರ ರಚಿಸುವುದು ನಿಶ್ಚಿತ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಬಿ.ಎಸ್ ಯಡಿಯೂರಪ್ಪ
ಬಿ.ಎಸ್ ಯಡಿಯೂರಪ್ಪ

ಬೆಂಗಳೂರು: ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ 130 ರಿಂದ 135 ಸ್ಥಾನಗಳನ್ನು ಗೆದ್ದು ಸ್ವಂತ ಬಲದಲ್ಲಿ ಸರ್ಕಾರ ರಚಿಸುವುದು ನಿಶ್ಚಿತ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಯಡಿಯೂರಪ್ಪ ಬಿಜೆಪಿ ಸರ್ಕಾರದ ಅಭಿವೃದ್ಧಿ ಕೆಲಸಗಳ ಪಟ್ಟಿ ನೀಡಿದರು.ವೀರಶೈವ ಲಿಂಗಾಯತವನ್ನು ಸಮಾಜವನ್ನು ಎತ್ತುಕಟ್ಟುವ ಕೆಲಸ ಕಾಂಗ್ರೆಸ್​ ಮಾಡುತ್ತಿದೆ. ಕಾಂಗ್ರೆಸ್​ ಓಲೈಕೆ ರಾಜಕಾರಣ ಮಾಡುತ್ತಿದೆ. ವೀರಶೈವ ಲಿಂಗಾಯತ ಸಮಾಜವನ್ನು ಒಡೆಯಲು ಪ್ರಯತ್ನ ಪಟ್ಟವರು ಇಂದು ಲಿಂಗಾಯತ ಸಮಾಜದ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ ವೀರಶೈವ ಲಿಂಗಾಯತ ಸಮಾಜ ನಮ್ಮ ಜೊತೆ ಇದೆ, ಕಾಂಗ್ರೆಸ್ ಗೆ ಲಿಂಗಾಯತರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಯಡಿಯೂರಪ್ಪ ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಮುಳುಗುತ್ತಿರುವ ಹಡಗು ಆಗಿದೆ. ಕಾಂಗ್ರೆಸ್ ನಲ್ಲಿ ಸಮರ್ಥ ನಾಯಕರೇ ಇಲ್ಲದಂತಾಗಿದೆ. ಉತ್ತರ ಪ್ರದೇಶದಲ್ಲಿ ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ಸುಮಾರು ಎರಡು ತಿಂಗಳು ಪ್ರಚಾರ ನಡೆಸಿದರು, ಆದರೆ ಗೆದ್ದಿದ್ದು ಕೇವಲ ಮೂರೋ ನಾಲ್ಕು ಸೀಟು ಮಾತ್ರ. ಪ್ರಧಾನಿ ಮೋದಿಯವರ ಎದರು ರಾಹುಲ್​ ಗಾಂಧಿ ಸರಿಸಮಾನ ಆಗಲು ಸಾಧ್ಯವಿಲ್ಲ. ನರೇಂದ್ರ ಮೋದಿಯವರು ಪ್ರಧಾನಿಯಾದ ಮೇಲೆ ಒಂದು ಭ್ರಷ್ಟಾಚಾರದ ಆರೋಪವಿಲ್ಲ. ಪ್ರತಿ ಲೀಟರ್​​ ಹಾಲಿಗೆ ಪ್ರೋತ್ಸಾಹ ಧನ 5ರಿಂದ 7 ರೂ.ಗೆ ಹೆಚ್ಚಳ ಮಾಡುತ್ತೇವೆ. ರೈತಸಿರಿ ಯೋಜನೆ ಅಡಿ ಪ್ರತಿ ಹೆಕ್ಟರ್​ಗೆ 10 ಸಾವಿರ ಹಣ ನೀಡಲು ಯೋಜನೆ ರೂಪಿಸಿದ್ದೇವೆ ಎಂದು ಹೇಳಿದರು.

ನಾವು ಪ್ರಣಾಳಿಕೆಯಲ್ಲಿ ಏನೇನು ಭರವಸೆ ನೀಡಿದ್ದೇವೆಯೋ ಅವೆಲ್ಲಾವನ್ನು ಈಡೇರಿಸುತ್ತೇವೆ ಎಂದರು.  ವೀರಶೈವ ಲಿಂಗಾಯತ ಸಮಾಜ ಬಿಜೆಪಿ ಜೊತೆ ಗಟ್ಟಿಯಾಗಿ ನಿಂತಿದೆ. ನಾವು ಎಂದೂ ಜಾತಿ ರಾಜಕಾರಣ ಮಾಡಿಲ್ಲ. ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅನೇಕ ರೋಡ್​ಶೋ ಮಾಡಿದ್ದಾರೆ. ಈ ಬಾರಿ 130ರಿಂದ 135 ಸ್ಥಾನ ಗೆಲ್ಲುವ ವಿಶ್ವಾಸವಿದೆ. ರಾಜ್ಯದಲ್ಲಿ ಸ್ವಂತ ಬಲದಲ್ಲಿ ಸರ್ಕಾರ ರಚನೆ ಮಾಡುವುದು ನಿಶ್ಚಿತ. SC, ST ಮೀಸಲಾತಿ ಹೆಚ್ಚಳ ಮಾಡಿ ಇತಿಹಾಸ ಸೃಷ್ಟಿಸಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಹೇಳಿದ್ಧಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com