ಕರ್ನಾಟಕ ಚುನಾವಣೆ 2023: ಮೂರು ದಿನ ಸಿಗಲ್ಲ ಎಣ್ಣೆ; ಬಾರ್​ಗಳಿಗೆ ಮುಗಿಬಿದ್ದ ಮದ್ಯಪ್ರಿಯರು

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಇಂದು ಸಂಜೆ 6 ಗಂಟೆಯ ನಂತರ ಬೃಹತ್ ಪ್ರಚಾರಕ್ಕೆ ಬ್ರೇಕ್ ಬಿದ್ದಿದೆ. ಇದೇ ವೇಳೆ ರಾಜ್ಯಾದ್ಯಂತ ಇಂದು ಸಂಜೆ 6 ಗಂಟೆಯಿಂದ ಮದ್ಯ ಮಾರಟಕ್ಕೆ ನಿರ್ಬಂಧ ಹೇರಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಇಂದು ಸಂಜೆ 6 ಗಂಟೆಯ ನಂತರ ಬೃಹತ್ ಪ್ರಚಾರಕ್ಕೆ ಬ್ರೇಕ್ ಬಿದ್ದಿದೆ. ಇದೇ ವೇಳೆ ರಾಜ್ಯಾದ್ಯಂತ ಇಂದು ಸಂಜೆ 6 ಗಂಟೆಯಿಂದ ಮದ್ಯ ಮಾರಟಕ್ಕೆ ನಿರ್ಬಂಧ ಹೇರಲಾಗಿದೆ. 

ಹೀಗಾಗಿ ಮುಂದಿನ ಮೂರು ದಿನ ರಾಜ್ಯದಲ್ಲಿ ಮೇ 8 , 9 , 10ರಂದು ಮದ್ಯ ಮಾರಾಟಕ್ಕೆ ನಿರ್ಬಂಧ ಬಿದ್ದಿದೆ. ಇನ್ನು ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕರಿಗೂ ಮೂರು ದಿನ ಚುನಾವಣಾ ಬೀಗ ಹಾಕುವಂತೆ ಆಯೋಗ ಸೂಚನೆ ನೀಡಿದೆ. 

ಇನ್ನು ಮೂರು ದಿನಗಳ ಕಾಲ ಮದ್ಯ ಸಿಗುವುದಿಲ್ಲ ಎಂಬುದನ್ನು ಅರಿತ ಮಧ್ಯಪ್ರಿಯರು ಮದ್ಯದ ಅಂಗಡಿಗಳಿಗೆ ಮುಗಿಬಿದ್ದಿದ್ದರು. ಅಲ್ಲದೆ ಮೂರು ದಿನಗಳಿಗೆ ಸಾಕಾಗುವಷ್ಟು ಮದ್ಯವನ್ನು ಖರೀದಿಸಿದರು. 

ಮೇ 10 ಕರ್ನಾಟಕ ಚುನಾವಣೆಗೆ ಮತದಾನ ನಡೆಯಲಿದ್ದು 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com