ಕೆಎಸ್‌ಆರ್ ರೈಲ್ವೇ ನಿಲ್ದಾಣದಲ್ಲಿ ಪ್ರಯಾಣಿಕರಿಂದ 36 ಕೆಜಿ ಗಾಂಜಾ ವಶ!

ಕೆಎಸ್‌ಆರ್ ರೈಲು ನಿಲ್ದಾಣದಲ್ಲಿದ್ದ ಪ್ರಯಾಣಿಕರಿಂದ ರೂ.36,30,000 ಮೌಲ್ಯದ 36 ಕೆಜಿ ಗಾಂಜಾವನ್ನು ಪೊಲೀಸರು ಭಾನುವಾರ ವಶಕ್ಕೆ ಪಡೆದುಕೊಂಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕೆಎಸ್‌ಆರ್ ರೈಲು ನಿಲ್ದಾಣದಲ್ಲಿದ್ದ ಪ್ರಯಾಣಿಕರಿಂದ ರೂ.36,30,000 ಮೌಲ್ಯದ 36 ಕೆಜಿ ಗಾಂಜಾವನ್ನು ಪೊಲೀಸರು ಭಾನುವಾರ ವಶಕ್ಕೆ ಪಡೆದುಕೊಂಡಿದ್ದಾರೆ.

ಇಬ್ಬರು ಪ್ರಯಾಣಿಕರಿಂದ ಗಾಂಜಾವನ್ನು ವಶಕ್ಕೆ ಪಡೆಯಲಾಗಿದ್ದು, ಇಬ್ಬ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಸೆಕ್ಷನ್ 20(ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದು, ನಿಯಮ ಉಲ್ಲಂಘನೆಯಾಗದಂತೆ ಖಚಿತಪಡಿಸಿಕೊಳ್ಳಲು ರೈಲ್ವೇ ರಕ್ಷಣಾ ಪಡೆ ಮತ್ತು ಸರ್ಕಾರಿ ರೈಲ್ವೆ ಪೊಲೀಸರು ಜಂಟಿಯಾಗಿ ಈ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ. ಇದರಂತೆ ರೈಲುಗಳು ಮತ್ತು ಪ್ಲಾಟ್‌ಫಾರ್ಮ್‌ಗಳಲ್ಲಿ ಪ್ರತೀನಿತ್ಯ ತೀವ್ರ ತಪಾಸಣೆ ಕೈಗೊಳ್ಳುತ್ತಿದ್ದಾರೆ.

ಭುವನೇಶ್ವರದಿಂದ ಕೆಎಸ್ಆರ್ ರೈಲು ನಿಲ್ದಾಣಕ್ಕೆ ಹಾಗೂ ಹಿಂದೂಪುರದಿಂದ ಬಂದ ಪ್ರಶಾಂತಿ ಎಕ್ಸ್ ಪ್ರೆಸ್ ರೈಲಿನಲ್ಲಿ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಈ ವೇಳೆ ಇಬ್ಬರು ಪ್ರಯಾಣಿಕರಿಂದ ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಇಬ್ಬರೂ ಅನುಮಾನಾಸ್ಪದವಾಗಿ ಓಡಾಡುತ್ತಿದ್ದರಿಂದ ಅನುಮಾನಗೊಂಡ ಅಧಿಕಾರಿಗಳು ಅವರ ಬಳಿಯಿದ್ದ ವಸ್ತುಗಳನ್ನು ಪರಿಶೀಲಿಸಿದ್ದಾರೆ. ಈ ವೇಳೆ ಇಬ್ಬರ ಬಳಿ ಗಾಂಜಾ ಪತ್ತೆಯಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಭಿಷೇಕ್ (23) ಎಂಬ ಆರೋಪಿ, ಟ್ರಾಲಿ ಬ್ಯಾಗ್‌ನಲ್ಲಿ 11 ಕೆಜಿ 400 ಗ್ರಾಂ ಗಾಂಜಾವನ್ನು ಸಾಗಿಸುತ್ತಿದ್ದ. ಗಾಂಜಾವನ್ನು ಸೆಲ್ಲೋ ಟೇಪ್‌ನಲ್ಲಿ ಸುತ್ತುತ್ತಿದ್ದ. ಮೊಹಮ್ಮದ್ ಬಾಸಿದ್ ಎಂಬ ವ್ಯಕ್ತಿ ನಾಲ್ಕು ಚೀಲಗಳಲ್ಲಿ 24 ಕೆಜಿ 900 ಗ್ರಾಂ ತೂಕದ ದೊಡ್ಡ ಮಟ್ಟದ ಗಾಂಜಾವನ್ನು ಸಾಗಿಸುತ್ತಿದ್ದ. ಇಬ್ಬರಿಂದಲೂ ಒಟ್ಟು 36 ಕೆಜಿ ಮತ್ತು 300 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com