ಬೆಂಗಳೂರು: ಧ್ವನಿ ತಗ್ಗಿಸಿ ಫೋನ್ ನಲ್ಲಿ ಮಾತನಾಡಿ ಎಂದದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ

ತನ್ನ ಮನೆ ಬಾಗಿಲ ಬಳಿ ಫೋನ್ ನಲ್ಲಿ ಮಾತನಾಡಿದ್ದಾತನಿಗೆ ಧ್ವನಿ ತಗ್ಗಿಸಿ ಮಾತನಾಡುವಂತೆ ಸೂಚಿಸಿದ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿರುವ ಘಟನೆಯೊಂದು ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಹೊಂಗಸಂದ್ರ ರಸ್ತೆಯಲ್ಲಿ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ತನ್ನ ಮನೆ ಬಾಗಿಲ ಬಳಿ ಫೋನ್ ನಲ್ಲಿ ಮಾತನಾಡಿದ್ದಾತನಿಗೆ ಧ್ವನಿ ತಗ್ಗಿಸಿ ಮಾತನಾಡುವಂತೆ ಸೂಚಿಸಿದ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿರುವ ಘಟನೆಯೊಂದು ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಹೊಂಗಸಂದ್ರ ರಸ್ತೆಯಲ್ಲಿ ನಡೆದಿದೆ.

ಹೊಂಗನಸಂದ್ರದ 7ನೇ ಮೇನ್ ನಿವಾಸಿ ಜಿ ಶಿವಾ ರೆಡ್ಡಿ (28) ಥಳಿತಕ್ಕೊಳಗಾದ ವ್ಯಕ್ತಿಯಾಗಿದ್ದು, ಆರೋಪಿಯನ್ನು ಶರತ್ ಎಂದು ಗುರ್ತಿಸಲಾಗಿದೆ. ಶನಿವಾರ ಸಂಜೆ 7.40ರ ಸುಮಾರಿಗೆ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಆರೋಪಿ ಶರತ್ ಶಿವಾ ಅವರ ಮನೆಯ ಬಳಿಕ ಫೋನ್ ನಲ್ಲಿ ಏರು ಧ್ವನಿಯಲ್ಲಿ ಮಾತನಾಡುತ್ತಿದ್ದ. ಇದನ್ನು ಕೇಳಿಸಿಕೊಂಡ ಶಿವಾ, ಬಾಗಿಲು ತೆರೆದು ಧ್ವನಿ ತಗ್ಗಿಸಿ ಮಾತನಾಡುವಂತೆ ಸೂಚಿಸಿದ್ದಾನೆ. ಈ ವೇಳೆ ಶರತ್ ಮಾತಿನ ಚಕಮಕಿಗೆ ಇಳಿದಿದ್ದು, ಬಳಿಕ ಮನೆಗೆ ನುಗ್ಗಿ, ಬಾಗಿಲು ಹಾಕಿ ಮನಬಂದಂತೆ ಥಳಿಸಿದ್ದಾನೆ. ಅಲ್ಲದೆ, ಬೆದರಿಕೆ ಹಾಕಿದ್ದಾನೆಂದು ತಿಳಿದುಬಂದಿದೆ.

ಶಿವಾ ವೃತ್ತಿಯಲ್ಲಿ ಚಾಲಕನಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ನಡೆದ ಮರುದಿನ ಶಿವಾ ಅವರು ಬೊಮ್ಮನಹಳ್ಳಇ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com