ಮಳೆ ಮುನ್ಸೂಚನೆ ಇದೆ, ಮೊದಲ ಅವಧಿಯಲ್ಲೇ ಬಂದು ಮತಹಕ್ಕು ಚಲಾಯಿಸಿ: ಸುರೇಶ್ ಕುಮಾರ್ ಮನವಿ

ಮಳೆಯ ಮುನ್ಸೂಚನೆ ಇದ್ದು, ಈ ಹಿನ್ನೆಲೆಯಲ್ಲಿ ಮೊದಲ ಅವಧಿಯಲ್ಲಿ ಬಂದು ಮತದಾನ ಮಾಡುವಂತೆ ಮತದಾರರಿಗೆ ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಮನವಿ ಮಾಡಿಕೊಂಡಿದ್ದಾರೆ.
ಸುರೇಶ್ ಕುಮಾರ್
ಸುರೇಶ್ ಕುಮಾರ್

ಬೆಂಗಳೂರು: ಮಳೆಯ ಮುನ್ಸೂಚನೆ ಇದ್ದು, ಈ ಹಿನ್ನೆಲೆಯಲ್ಲಿ ಮೊದಲ ಅವಧಿಯಲ್ಲಿ ಬಂದು ಮತದಾನ ಮಾಡುವಂತೆ ಮತದಾರರಿಗೆ ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಮನವಿ ಮಾಡಿಕೊಂಡಿದ್ದಾರೆ.

ಆರ್‍ಆರ್ ನಗರಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಮತದಾನ ಪ್ರಮಾಣ ಕಡಿಮೆಯಾಗುವ ಬಗ್ಗೆ ಮಾಹಿತಿ ಇದೆ. ಹಾಗಾಗಿ ಬೆಂಗಳೂರಿನಲ್ಲಿ ಹೆಚ್ಚು ಮತದಾನ ಆಗಬೇಕು ಎಂದು ಕರೆ ನೀಡಿದರು.

ಮಳೆಯ ಮುನ್ಸೂಚನೆ ಇದ್ದು, ಈ ಹಿನ್ನೆಲೆಯಲ್ಲಿ ಮೊದಲ ಅವಧಿಯಲ್ಲಿ ಬಂದು ಮತದಾನ ಮಾಡಿ ಎಂದು ಮನವಿ ಮಾಡಿಕೊಂಡರು,

ಈ ಸಲ ಚುನಾವಣೆ ಮಹತ್ವ ಪಡೆದುಕೊಂಡಿದೆ. ಮೊದಲು ತಾಯಿ ಜೊತೆ ಮತದಾನ ಮಾಡುತ್ತಿದ್ದೆ. ನಂತರ ಪತ್ನಿ ಮತ್ತು ಮಗಳು ಮತದಾನದಲ್ಲಿ ಭಾಗಿಯಾಗಿದ್ದಾರೆ. ಒಟ್ಟಿನಲ್ಲಿ ಸದಾ ಕುಟುಂಬ ಸಮೇತ ಮತದಾನದಲ್ಲಿ ಭಾಗಿಯಾಗುತ್ತಿದ್ದೇವೆಂದು ಸಂತಸ ವ್ಯಕ್ತಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com