ಮಂಗಳೂರಿನಲ್ಲಿ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ನಡುವೆ ಘರ್ಷಣೆ; ದೂರು- ಪ್ರತಿದೂರು ದಾಖಲು

ಮಂಗಳವಾರ ರಾತ್ರಿ ಮಂಗಳೂರು ಉತ್ತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಬಿಎ ಮೊಹಿಯುದ್ದೀನ್ ಬಾವಾ ಅವರ ಬೆಂಬಲಿಗರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿ ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಜೆಡಿಎಸ್ ಕಾರ್ಯಕರ್ತರು ಪ್ರತಿದೂರು ದಾಖಲಿಸಿದ್ದಾರೆ. ಮತ್ತು ಪ್ರತಿದೂರು ದಾಖಲಾಗಿದೆ.
ಕಾಂಗ್ರೆಸ್-ಜೆಡಿಎಸ್
ಕಾಂಗ್ರೆಸ್-ಜೆಡಿಎಸ್

ಮಂಗಳೂರು: ಮಂಗಳವಾರ ರಾತ್ರಿ ಮಂಗಳೂರು ಉತ್ತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಬಿಎ ಮೊಹಿಯುದ್ದೀನ್ ಬಾವಾ ಅವರ ಬೆಂಬಲಿಗರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿ ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಜೆಡಿಎಸ್ ಕಾರ್ಯಕರ್ತರು ಪ್ರತಿದೂರು ದಾಖಲಿಸಿದ್ದಾರೆ. ಮತ್ತು ಪ್ರತಿದೂರು ದಾಖಲಾಗಿದೆ.

ಘರ್ಷಣೆಯಲ್ಲಿ ಗಾಯಗೊಂಡ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರಾದ ನಿಜಾಮ್ ಮತ್ತು ಹಷರ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಂಗ್ರೆಸ್‌ ಟಿಕೆಟ್‌ ನಿರಾಕರಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ಬಾವಾ ಅವರು ಜೆಡಿಎಸ್‌ ಸೇರಿದ್ದರು.

ಮತದಾರರಿಗೆ ಹಂಚಲು ಜೆಡಿಎಸ್ ಅಭ್ಯರ್ಥಿ ಕಾರಿನಲ್ಲಿ ಹಣ ತಂದಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಕಾರನ್ನು ಅಡ್ಡಗಟ್ಟಿದ್ದು ಎರಡು ಗುಂಪುಗಳ ನಡುವಿನ ವಾಗ್ವಾದಕ್ಕೆ ಕಾರಣವಾಯಿತು ಎಂದು ಮೂಲಗಳು ತಿಳಿಸಿವೆ.

ನಂತರ ಎರಡೂ ಗುಂಪುಗಳು ಬಜ್ಪೆ ಪೊಲೀಸ್ ಠಾಣೆಗೆ ತೆರಳಿದ್ದಾರೆ. ಆದರೆ, ಅಲ್ಲಿ ಅಭ್ಯರ್ಥಿಯ ಎದುರೇ ಬಾವಾ ಬೆಂಬಲಿಗರು ನಿಜಾಮ್ ಮತ್ತು ಹಶರ್ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಗಾಯಗೊಂಡ ನಿಜಾಮ್ ಅವರು ಬಾವಾ ಅವರ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದು, ಇತ್ತೀಚೆಗೆ ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಅವರಿಗೆ ಬೆಂಬಲ ನೀಡಿದ್ದರು.

ನಿಜಾಮ್ ಮತ್ತು ಇತರ ಕಾಂಗ್ರೆಸ್ ಕಾರ್ಯಕರ್ತರು ಬಾವಾ ಅವರ ಮೇಲೆ ಹಲ್ಲೆ ನಡೆಸಿದ್ದು, ಅವರು ಕೂಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜೆಡಿಎಸ್ ಕಾರ್ಯಕರ್ತರು ನೀಡಿರುವ ಪ್ರತಿ ದೂರಿನಲ್ಲಿ ಆರೋಪಿಸಿದ್ದಾರೆ.

ಈ ಮಧ್ಯೆ, ಬೆಳ್ತಂಗಡಿಯಲ್ಲಿ ಮಂಗಳವಾರ ತಡರಾತ್ರಿ ಬಿಜೆಪಿಯ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಜಯಾನಂದ ಗೌಡ ಅವರು ಮತದಾರರಿಗೆ ನಗದು ಹಂಚುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದು, ಪೊಲೀಸರು ಬಂಧಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com