ವಿಧಾನಸಭೆ ಚನಾವಣೆ 2023: ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಮತದಾನ ಆರಂಭ, ಉದಾಸೀನ ಬೇಡ, ತಪ್ಪದೇ ಹಕ್ಕು ಚಲಾಯಿಸಿ

ತೀವ್ರ ಕುತೂಹಲ ಕೆಲಕೆರಳಿಸಿರುವ ರಾಜ್ಯದ ವಿಧಾನಸಭೆ ಚುನಾವಣೆ ಆರಂಭಗೊಂಡಿದೆ. ಬೆಳಿಗ್ಗೆ 7 ಗಂಟೆಗೆ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಅನೇಕ ಕಡೆಗಳಲ್ಲಿ ಜನರು ಸರತಿ ಸಾಲಿನಲ್ಲಿ ನಿಂತು ಮತಹಕ್ಕು ಚಲಾಯಿಸುತ್ತಿದ್ದಾರೆ.
ಹುಬ್ಬಳ್ಳಿಯ ಮತಗಟ್ಟೆಯಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತಿರುವುದು.
ಹುಬ್ಬಳ್ಳಿಯ ಮತಗಟ್ಟೆಯಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತಿರುವುದು.

ಬೆಂಗಳೂರು: ತೀವ್ರ ಕುತೂಹಲ ಕೆಲಕೆರಳಿಸಿರುವ ರಾಜ್ಯದ ವಿಧಾನಸಭೆ ಚುನಾವಣೆ ಆರಂಭಗೊಂಡಿದೆ. ಬೆಳಿಗ್ಗೆ 7 ಗಂಟೆಗೆ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಅನೇಕ ಕಡೆಗಳಲ್ಲಿ ಜನರು ಸರತಿ ಸಾಲಿನಲ್ಲಿ ನಿಂತು ಮತಹಕ್ಕು ಚಲಾಯಿಸುತ್ತಿದ್ದಾರೆ.

ಬೆಳಿಗ್ಗೆ 7 ಗಂಟೆಯಿಂದ ಸಂಜೆ 6ರವರೆಗೆ ಮತದಾನ ಪ್ರಕ್ರಿಯೆ ನಡೆಯಲಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

ಚುನಾವಣಾ ಅಖಾಡಕ್ಕಿಳಿದಿರುವ 2615 ಅಭ್ಯರ್ಥಿಗಳ ರಾಜಕೀಯ ಭವಿಷ್ಯವನ್ನು ಮತದಾರ ಪ್ರಭುಗಳು ಬರೆಯಲಿದ್ದಾರೆ. ಸಂಜೆ 6 ಗಂಟೆಯವರೆಗೆ ಮತದಾರರು ತಮ್ಮ ಹಕ್ಕು ಚಲಾಯಿಸಬಹುದಾದರು, ಸಂಜೆಯವರೆಗೂ ಸಮಯ ಇದೆಯಲ್ಲ ಎಂಬ ಉದಾಸೀನ ಬೇಡ. ಕಾರಣ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಹೀಗಾಗಿ ಮಧ್ಯಾಹ್ನದೊಳಗೆ ಮತದಾನ ಮಾಡುವುದು ಉತ್ತಮ. ಮತ ಹಾಕಿದವರ ಎಡಗೈ ತೋರು ಬೆರಳಿಗೆ ಶಾಯಿ ಹಾಕಲಾಗುತ್ತಿದೆ.

ಚುನಾವಣಾ ಆಯೋಗ ಬೆಂಗಳೂರಿನ ಮತಗಟ್ಟೆಯ ಸುತ್ತ ಸಿಸಿ ಕ್ಯಾಮಾರ ಅಳವಡಿಕೆ ಮಾಡಿದ್ದು ಜಿಲ್ಲಾ ಚುನಾವಣಾ ಆಯೋಗ ಪ್ರತಿ ಮತಗಟ್ಟೆಗೆ 5 ಜನ ಅಧಿಕಾರಿಗಳನ್ನು ನಿಯೋಜನೆ ಮಾಡಿದೆ.

ಸೂಕ್ಷ್ಮ, ಅತೀ ಸೂಕ್ಷ್ಮ ಮತಗಟ್ಟೆಗಳಲ್ಲಿ ಸಿಸಿ ಕ್ಯಾಮಾರ ಅಳವಡಿಕೆ ಮಾಡಿದೆ. 60 ವರ್ಷ ಮೇಲ್ಪಟ್ಟ ವೃದ್ಧರಿಗೆ, ಅಂಗವಿಕಲರಿಗೆ ಸುಲಭವಾಗಿ ಮತದಾನ ಮಾಡಲು ವ್ಯವಸ್ಥೆಗಳನ್ನು ಮಾಡಿದೆ.

ಮತದಾರರನ್ನ ಮತಗಟ್ಟೆಗೆ ಸೆಳೆಯುವ ಉದ್ದೇಶದಿಂದ ಥೀಮ್ ಬೇಸ್ಡ್ ಮತಗಟ್ಟೆಗಳ ನಿರ್ಮಾಣ ಮಾಡಿದೆ. ಅಲ್ಲದೆ, ಮತದಾನ ಮಾಡಿ ಶಾಯಿ ಹಾಕಿಸಿಕೊಂಡು ಮತದಾರರು ಸೆಲ್ಫೀ ತೆಗೆದುಕೊಳ್ಳಲು ಮತಕ್ಷೇತ್ರಗಳಲ್ಲಿ ಪ್ರತ್ಯೇತ ವ್ಯವಸ್ಥೆಯನ್ನೂ ಮಾಡಿದೆ.
 
ನಗರದ 28 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 264 ಮತಗಟ್ಟೆ ನಿರ್ಮಾಣ ಮಾಡಲಾಗಿದೆ. ಮಹಿಳಾ ಮತದಾರರನ್ನ ಪ್ರೋತ್ಸಾಹಿಸಲು ಪಿಂಕ್ ಮತಗಟ್ಟೆ, ಯುವ ಮತದಾರರನ್ನ ಸೆಳೆಯಲು ಯುವ ಮತಗಟ್ಟೆ , ಸಿರಿಧಾನ್ಯ ಮತಗಟ್ಟೆ ಹಾಗೂ ವಿಶೇಷ ಚೇತನ ಮತಗಟ್ಟೆ, ಸಂಸ್ಕೃತಿ ಮತಗಟ್ಟೆ, ಪರಿಸರ ಮತಗಟ್ಟೆ, ವಿಜ್ಞಾನ ಮತ್ತು ತಂತ್ರಜ್ಞಾನ ಮತಗಟ್ಟೆ, ಮಾಜಿ ಸೈನಿಕ ಮತಗಟ್ಟೆ, ತೃತೀಯ ಲಿಂಗಿಯ ಮತಗಟ್ಟೆ, ಕ್ರೀಡಾ ಮತಗಟ್ಟೆ ಎಂಬೆಲ್ಲಾ ಹಲವು ಮಾದರಿಯ ಮತಗಟ್ಟೆಗಳನ್ನ ನಿರ್ಮಾಣ ಮಾಡಲಾಗಿದೆ. ಮಹಿಳೆಯರಿಗಾಗಿ ಪ್ರತಿ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಐದು ಸಖಿ ಮತಗಟ್ಟೆಗಳನ್ನ ನಿರ್ಮಾಣ ಮಾಡಿದೆ.

ಬಿಬಿಎಂಪಿ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 8802 ಮತಗಟ್ಟೆಗಳಿದ್ದು, 97ಲಕ್ಷಕ್ಕೂ ಹೆಚ್ಚು ಮತದಾರರು ಮತ ಚಲಾವಣೆ ಮಾಡಲಿದ್ದಾರೆ. 1.43 ಲಕ್ಷ ಯುವ ಮತದಾರರು ಈ ಬಾರಿ ಈ ಪಟ್ಟಿಯಲ್ಲಿ ಸೇರಿರುವುದು ವಿಶೇಷವಾಗಿದೆ.

2018 ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಶೇಕಡಾ 72.13 ರಷ್ಟು ಮತದಾನವಾಗಿತ್ತು. ಇದು 1952 ರಿಂದ ಕರ್ನಾಟಕದಲ್ಲಿ ಅತಿ ಹೆಚ್ಚು ಮತದಾನವಾದ ವರ್ಷವಾಗಿತ್ತು. ಹೀಗಾಗಿ ಚುನಾವಣಾ ಆಯೋಗವು ಈ ಬಾರಿಯ ಚುನಾವಣೆಯಲ್ಲಿ ಹಿಂದಿನ ದಾಖಲೆಯನ್ನು ಮುರಿಯುವ ನಿರೀಕ್ಷೆಯಲ್ಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com